ಆಧಾರ್‌ ನೋಂದಣಿ ಕೇಳ್ಳೋರಿಲ್ಲ ಗೋಳು

•ಅಂಚೆ ಕಚೇರಿಯಲ್ಲಿ ವಿಶೇಷ ನೋಂದಣಿ ಅಭಿಯಾನ•ಮಳೆಯನ್ನೂ ಲೆಕ್ಕಿಸದೇ ಸರತಿ ಸಾಲು

Team Udayavani, Jul 1, 2019, 10:24 AM IST

hv-tdy-2..

ಬ್ಯಾಡಗಿ:ಆಧಾರ್‌ ನೋಂದಣಿಗಾಗಿ ಪಟ್ಟಣದ ಅಂಚೆ ಕಚೇರಿ ಎದುರು ಜಮಾಯಿಸಿರುವ ವಿದ್ಯಾರ್ಥಿಗಳು ಹಾಗೂ ಪಾಲಕರು.

ಬ್ಯಾಡಗಿ: ಆಧಾರ್‌ ನೋಂದಣಿಗಾಗಿ ಮಳೆಯನ್ನೂ ಲೆಕ್ಕಿಸದೇ ಸರತಿ ಇಡೀ ದಿನ ನಿಲ್ಲುವ ಶಿಕ್ಷೆ ಮುಂದುವರಿದಿದ್ದು, ಈ ಸಮಸ್ಯೆಯಿಂದ ತಾಲೂಕಿನ ಜನತೆಗೆ ಮುಕ್ತಿ ಸಿಗುವ ಲಕ್ಷಣಗಳೇ ಕಾಣುತ್ತಿಲ್ಲ.

ರವಿವಾರ ಅಂಚೆ ಕಚೇರಿಯಲ್ಲಿ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ರಜೆ ದಿನವಾಗಿದ್ದರಿಂದ ಹೆಚ್ಚಿನ ಜನ ಸರತಿಯಲ್ಲಿ ನಿಂತಿದ್ದ ಪರಿಣಾಮ ನುಗ್ಗಲು ಏರ್ಪಟ್ಟಿತ್ತು. ಇದು ವಗ್ವಾದಕ್ಕೂ ಕಾರಣವಾಯಿತು.

ಎಸ್‌ಎಸ್‌ಪಿ ಯೋಜನೆಯಡಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಧಾರ್‌ ಹೊಂದಾಣಿಕೆ ಆಗಿರಲಿಲ್ಲ. ಹೀಗಾಗಿ ಈ ಯೋಜನೆಯಡಿ ಶಿಷ್ಯವೇತನ ವಂಚಿತರು ಇನ್ನೆರಡು ದಿನಗಳಲ್ಲಿ ಆಧಾರ್‌ ಮಾಹಿತಿ ಸರಿಪಡಿಸಿಕೊಂಡು ಲಿಂಕ್‌ ಮಾಡಲು ಇತ್ತಿಚೆಗೆ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ಜಿಪಂ ಕಾರ್ಯನಿರ್ವಾಹಕಾಧಿಕಾರಿ (ಸಿಎಸ್‌) ಮೌಖೀಕ ಅದೇಶ ನೀಡಿದ್ದರು. ಆದರೆ, ಆಧಾರ್‌ ಕೇಂದ್ರದಲ್ಲಿನ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಯೋಜನೆಯಿಂದ ವಂಚಿತವಾಗಲಿದ್ದಾರೆ ಎನ್ನುವ ಆತಂಕ ಪಾಲಕರನ್ನು ಕಾಡುತ್ತಿದೆ.

ತಾಲೂಕಿನ ಎಲ್ಲ ಮುಖ್ಯ ಶಿಕ್ಷಕರಿಗೆ ಆಧಾರ ಲಿಂಕ್‌ ಮಾಡಿಸುವುದೂ ಸೇರಿದಂತೆ 10 ವರ್ಷದೊಳಗಿನ ಮತ್ತು ಅದಕ್ಕೂ ಮೆಲ್ಪಟ್ಟ ಮಕ್ಕಳಿಗೆ ಸ್ಥಳೀಯ ಅಂಚೆ ಕಚೇರಿಯಲ್ಲಿ ಜೂ.30 ಭಾನುವಾರು ವಿಶೇಷ ನೋಂದಣಿ ಅಭಿಯಾನ ಆಯೋಜನೆ ಮಾಡಿತ್ತು.

ಎರಡು ದಿನಗಳಲ್ಲಿ ಆಧಾರ್‌ ಲಿಂಕ್‌ ಮಾಡಿಸಬೇಕು ಎಂಬ ಸುದ್ದಿ ತಿಳಿದು ಶಿಕ್ಷಕರು ಮತ್ತು ಪಾಲಕರು ಬೆಳಗಿನಿಂದಲೇ ಸ್ಥಳೀಯ ಅಂಚೆ ಕಚೇರಿ ಏದುರು ಜಮಾಯಿಸಿದರು. ಆದರೆ, ಸಣ್ಣಗೆ ಸುರಿಯಲಾರಂಭಿಸಿದ ಮಳೆ ಪರಿಣಾಮ ಸರತಿಯಲ್ಲಿ ನಿಲ್ಲುವುದು ಕಷ್ಟವಾಗಿತ್ತು. ಅನಿವಾರ್ಯವಾಗಿ ಮಳೆಯನ್ನೂ ಲೆಕ್ಕಿಸದೆ ಆಧಾರ್‌ ಲಿಂಕ್‌ ಮಾಡಿಸಲು ಮತ್ತು ಬ್ಯಾಂಕ್‌ ಖಾತೆ ತೆರೆಯಲು ಮಕ್ಕಳೊಂದಿಗೆ ಆಗಮಿಸಿದ್ದ ಪಾಲಕರು ಮಾತ್ರ ಅಂಚೆ ಕಚೇರಿ ಆವರಣ ಬಿಟ್ಟು ಕದಲಲಿಲ್ಲ.

ಇವೆಲ್ಲದರ ಮಧ್ಯೆ ಅಂಚೆ ಕಚೇರಿಯಲ್ಲಿ ಸರ್ವರ್‌ ಕೈಕೊಟ್ಟ ಹಿನ್ನೆಲೆಯಲ್ಲಿ ಪಾಲಕರು ಮತ್ತು ಮಕ್ಕಳನ್ನು ಕೆಲಕಾಲ ಸಂಕಷ್ಟಕ್ಕೀಡು ಮಾಡಿತು. ಸರ್ವರ್‌ ನಡೆಸಿದ ಕಣ್ಣಾಮುಚ್ಚಾಲೆ ಆಟದಿಂದ ಬೇಸರಗೊಂಡ ಕೆಲ ಪಾಲಕರು ಬಂದ ದಾರಿಗೆ ಸುಂಕವಿಲ್ಲ ಎಂದು ಶಪಿಸುತ್ತ ಮನೆಗೆ ತೆರಳಿದರು.

ಭಾರತದ ಪ್ರತಿ ಪ್ರಜೆಯೂ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಆಧಾರ್‌ ನೋಂದಣಿ ಕಡ್ಡಾಯ ಮಾಡಿರುವ ಕ್ರಮ ಸ್ವಾಗತಾರ್ಹ. ಹೊಸದಾಗಿ ನೋಂದಣಿ ಸೇರಿದಂತೆ ಹೆಸರು, ಜನ್ಮ ದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ ಇನ್ನಿತರ ತಿದ್ದುಪಡಿಗಳಿಗಾಗಿ ಜನರು ಆಧಾರ್‌ ಮಾಡಿಸಬೇಕಾಗಿದೆ. ಆದರೆ, ತಾಲೂಕಿನ ವಿದ್ಯಾರ್ಥಿಗಳು ಹಾಗೂ ಜನರು ಅನುಭವಿಸುತ್ತಿರುವ ಗೋಳಂತೂ ಜಿಲ್ಲಾಡಳಿತ ಕೇಳುವ ಸ್ಥಿತಿಯಲ್ಲಿಲ್ಲ. ಆಧಾರ್‌ಗಾಗಿ ಜನರು ಪರದಾಡುವಂತಹ ಸ್ಥಿತಿ ಕಂಡೂ ಕಾಣದಂತೆ ತಾಲೂಕಾಡಳಿತ ವರ್ತಿಸುತ್ತಿರುವುದು ಬ್ಯಾಡಗಿ ಜನತೆಯ ದುರ್ದೈವವೇ ಸರಿ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.