‘ಕರ್ನಾಟಕ ಒನ್‌’ ಕೇಂದ್ರ ಶೀಘ್ರ ಆರಂಭ

ನಾಮಫ‌ಲಕವಿದ್ರೂ ಒಂದೂವರೆ ವರ್ಷದಿಂದ ಸೇವೆಗಳು ಜನರಿಗೆ ಮರೀಚಿಕೆ

Team Udayavani, Jul 1, 2019, 11:19 AM IST

kolar-tdy-1..

ಕೋಲಾರ ನಗರದಲ್ಲಿ ಕರ್ನಾಟಕ ಒನ್‌ಸೇವೆಗೆ ಸಜ್ಜುಗೊಳಿಸುತ್ತಿರುವ ತೊಟ್ಟಿಬಾವಿ ನೀರು ಸರಬರಾಜು ಕೇಂದ್ರದ ಕಟ್ಟಡ.

ಕೋಲಾರ: ಅಂತೂ ಇಂತೂ ಕರ್ನಾಟಕ ಒನ್‌ ಸೇವೆಯನ್ನು ನಗರದ ಜನತೆಗೆ ಕಲ್ಪಿಸಲು ಜಿಲ್ಲಾಡಳಿತ ಮತ್ತು ನಗರಸಭೆ ಮುಂದಾಗಿದೆ.

ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿಗಳ ನಿವಾಸದ ಮುಂಭಾಗದ ತೊಟ್ಟಿ ಬಾವಿ ನೀರು ಪೂರೈಕೆ ಕೇಂದ್ರದ ಕಟ್ಟಡವೊಂದನ್ನು ‘ಕರ್ನಾಟಕ ಒನ್‌’ ಸೇವೆಗಳಿಗಾಗಿ ಪುನಶ್ಚೇಚನಗೊಳಿಸಿ ಸಿದ್ಧಪಡಿಸಲಾಗಿತ್ತು. ಆದರೆ, ಒಂದೂವರೆ ವರ್ಷಗಳಿಂದಲೂ ಕಟ್ಟಡ ಮುಂಭಾಗ ನಾಮಫ‌ಲಕ ಅಳವಡಿಸಲಾಯಿತಾದರೂ, ಯಾವುದೇ ಸೇವೆ ಜನತೆಗೆ ಲಭ್ಯವಾಗಲಿಲ್ಲ. ಈ ಕುರಿತು ಪತ್ರಿಕೆಗಳಲ್ಲಿ ವಿಶೇಷ ವರದಿಗಳು ಪ್ರಕಟವಾದರೂ ಜಿಲ್ಲಾಡಳಿತ ಮತ್ತು ನಗರಸಭೆ ಎಚ್ಚೆತ್ತುಕೊಂಡಿರಲಿಲ್ಲ.

ಮಧ್ಯದಲ್ಲಿ ಎದುರಾಗಿದ್ದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಿಂದ ಕರ್ನಾಟಕ ಒನ್‌ ಸೇವೆ ಕೋಲಾರ ಜನತೆಗೆ ಸಿಗುವಲ್ಲಿ ವಿಳಂಬವಾಗುತ್ತಿದೆ ಎಂಬ ನೆಪವನ್ನು ಹೇಳಲಾಗುತ್ತಿತ್ತು. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಕೊನೆಗೆ ಕೇಂದ್ರದ ಸೇವೆ ಜನತೆಗೆ ನೀಡಲು ಸ್ಥಳೀಯ ಆಡಳಿತ ಮುಂದಾಗಿದೆ.

ಸಲಕರಣೆಗಳ ಅಳವಡಿಕೆ: ಕರ್ನಾಟಕ ಒನ್‌ ಸೇವೆಯನ್ನು ಜುಲೈ 1 ರಿಂದ ಕೋಲಾರ ನಗರದ ಜನತೆಗೆ ಸಿಗುವಂತೆ ಮಾಡಲು ಅಧಿಕಾರಿಗಳ ತಂಡವೊಂದು ಒಂದು ವಾರದಿಂದಲೂ ಕಾರ್ಯೋನ್ಮುಖವಾಗಿದೆ.

ಕರ್ನಾಟಕ ಒನ್‌ ಕೇಂದ್ರಕ್ಕೆ ನಿಗದಿಪಡಿಸಿರುವ ಕೇಂದ್ರಕ್ಕೆ ಅಗತ್ಯವಿರುವ ಪೀಠೊಪಕರಣ, ಕಂಪ್ಯೂಟರ್‌ ಇತ್ಯಾದಿ ಸೇವೆ ಅಳವಡಿಸಲಾಗುತ್ತಿದೆ.

ಸಂಪರ್ಕ ಸೇವೆ ಅಳವಡಿಕೆ: ಕಟ್ಟಡ ಇರುವ ತೊಟ್ಟಿಬಾವಿ ಕೇಂದ್ರದ ಆವರಣವನ್ನು ಜೆಸಿಬಿ ಯಂತ್ರಗಳ ಮೂಲಕ ಸ್ವಚ್ಛಗೊಳಿಸಲಾಗುತ್ತಿದೆ. ಆದರೆ, ಕೇಂದ್ರ ಆರಂಭದ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಜಿಲ್ಲಾಡಳಿತ ಹಾಗೂ ನಗರಸಭೆಯಿಂದ ಹೊರ ಬಿದ್ದಿಲ್ಲದಿರುವುದು ಅನುಮಾನಕ್ಕೆ ಎಡೆ ಮಾಡಿದೆ. ಆದರೂ, ಕೇಂದ್ರದ ಬೀಗ ತೆರೆದು ಕಂಪ್ಯೂಟರ್‌, ಇಂಟರ್‌ನೆಟ್ ಸೇವೆ, ಪೀಠೊಪಕರಣಗಳ ವ್ಯವಸ್ಥೆ ಇತ್ಯಾದಿ ಸೇವೆಗಳನ್ನು ಮಾಡಲಾಗುತ್ತಿರುವುದರಿಂದ ಕರ್ನಾಟಕ ಒನ್‌ಸೇವೆ ಶೀಘ್ರವೇ ಕೋಲಾರ ಜನತೆಗೆ ಸಿಗುತ್ತದೆಯೆಂದು ನಿರೀಕ್ಷಿಸಲಾಗುತ್ತಿದೆ.

ಇತ್ಯಾದಿ ಸೇವೆಗಳು: ಈಗಾಗಲೇ ಬೆಂಗಳೂರು ಸೇರಿ ವಿವಿಧ ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ಒನ್‌ ಸೇವೆಯು ಆರಂಭವಾಗಿದ್ದು, ಈ ಕೇಂದ್ರದಲ್ಲಿ ಆಧಾರ್‌, ಪಡಿತರ ಚೀಟಿ, ಪಾಸ್‌ಪೋರ್ಟ್‌, ನಗರಸಭೆ ತೆರಿಗೆ ಪಾವತಿ, ಮೊಬೈಲ್ ರೀಚಾರ್ಜ್‌, ಕಂದಾಯ ಇಲಾಖೆಯ ಸೇವೆಗಳು, ಜಾತಿ, ಆದಾಯ ಪ್ರಮಾಣ ಪತ್ರಗಳ ಪಡೆಯುವಿಕೆ, ಇತ್ಯಾದಿ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಸೇವಾ ನಾಮಫ‌ಲಕ ಸಿದ್ಧ: ಈಗಾಗಲೇ ಕೋಲಾರ ಕೇಂದ್ರದಲ್ಲಿ ಯಾವ್ಯಾವ ಸೇವೆ ನೀಡಲಾಗುತ್ತದೆಯೆಂಬ ಕುರಿತು ಮಾಹಿತಿ ಫ‌ಲಕವನ್ನು ಸಿದ್ಧಪಡಿಸಲಾಗುತ್ತಿದ್ದು, ಕೇಂದ್ರದಲ್ಲಿ ಅಳವಡಿಸಲಾಗಿದೆ. ಆದರೆ, ಕರ್ನಾಟಕ ಒನ್‌ ಸೇವೆ ಆರಂಭ ಕುರಿತಂತೆ ಅಧಿಕಾರಿಗಳು ಗುಟ್ಟಾಗಿಟ್ಟಿರುವ ರಹಸ್ಯವೇನು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಕರ್ನಾಟಕ ಒನ್‌ ಕೇಂದ್ರದಲ್ಲಿ ಹಾಲಿ ವ್ಯವಸ್ಥೆ ಮಾಡುತ್ತಿರುವ ವ್ಯಕ್ತಿಗಳು ತಮ್ಮದೇನಿದ್ದರೂ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸುವುದು ಮಾತ್ರವೇ ಆಗಿದ್ದು, ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದಲೇ ಪಡೆದುಕೊಳ್ಳಬೇಕೆಂದು ಸೂಚಿಸುತ್ತಿದ್ದಾರೆ.

ಆದರೂ, ಕರ್ನಾಟಕ ಒನ್‌ ಸೇವೆ ಜಿಲ್ಲಾ ಕೇಂದ್ರದಲ್ಲಿ ಆರಂಭವಾಗಿ ಸಾರ್ವಜನಿಕರಿಗೆ ಸೇವೆ ಶೀಘ್ರವೇ ಪೂರ್ಣ ಪ್ರಮಾಣದಲ್ಲಿ ಸಿಗುವಂತಾಗಲಿ ಎಂದು ಜನರು ಆಶಿಸಿದ್ದಾರೆ.

ಟಾಪ್ ನ್ಯೂಸ್

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Bannana-Leaf

Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.