ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ಮಾಣಿಲ ಶ್ರೀ
ಮಾಣಿಲ: 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಆರಂಭ
Team Udayavani, Jul 1, 2019, 11:20 AM IST
ವಿಟ್ಲ: ವ್ರತ, ನಿಯಮಗಳನ್ನು ಪಾಲಿಸಿದಾಗ ಗುರಿ ಸಾಧನೆ ಸಾಧ್ಯ. ಎಳೆಯ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಜತೆಗೆ ಧಾರ್ಮಿಕ, ನೈತಿಕ ವಿಚಾರಗಳನ್ನು ತುಂಬಿಸ ಬೇಕಾದ ಆವಶ್ಯಕತೆಯಿದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.
ಅವರು ರವಿವಾರ ಆರಂಭಗೊಂಡ ಒಂದು ಮಂಡಲ (48 ದಿನಗಳ) ಸಾಮೂಹಿಕ ಶ್ರೀ ಲಕ್ಷ್ಮಿ ಪೂಜೆಯ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಶ್ರೀ ಮಹಾಲಕ್ಷ್ಮಿ ಸೇವಾ ಪ್ರತಿಷ್ಠಾನದ ಟ್ರಸ್ಟಿ ಟಿ. ತಾರಾನಾಥ ಕೊಟ್ಟಾರಿ ಮಾತನಾಡಿ, ಮಾಣಿಲ ಶ್ರೀಗಳ ಪ್ರತಿಯೊಂದು ಕಾರ್ಯಗಳಲ್ಲಿ ಸಾಮಾಜಿಕ ಅಭಿವೃದ್ಧಿಯ ಚಿಂತನೆಯಿದೆ ಎಂದರು.
ಟ್ರಸ್ಟಿಗಳಾದ ಚಂದ್ರಶೇಖರ್ ತುಂಬೆ, ಅಶೋಕ್ ಕುಮಾರ್ ರೈ ಅರ್ಪಿಣಿ
ಗುತ್ತು, ಮಾಣಿಲ ಗ್ರಾ. ಪಂ. ಅಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಸದಸ್ಯ ಶ್ರೀಧರ ಬಾಳೆಕಲ್ಲು, ಶ್ರೀ ಧಾಮ ಶ್ರೀ ಮಹಾಲಕ್ಷಿ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಉಪಸ್ಥಿತರಿದ್ದರು.
ಟ್ರಸ್ಟಿ ಮಂಜು ವಿಟ್ಲ ಸ್ವಾಗತಿಸಿ, ನಿರೂಪಿಸಿದರು. ಗೀತಾ ವಂದಿಸಿದರು.
ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ಗಣಪತಿ ಹವನ, ಪಂಚಾಮೃತ ಅಭಿಷೇಕ, ಕಲೊಕ್ತ ಲಕ್ಷ್ಮೀ ಪೂಜೆ, ಶ್ರೀ ಗುರು ಪೂಜೆ, ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಶ್ರೀದುರ್ಗಾ ಪೂಜೆ, ಆಶ್ಲೇಷಾ ಬಲಿ, ಮಹಾಪೂಜೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.