ಕಡೇಕೊಪ್ಪ ಯುವಕನ ಮನವಿಗೆ ಸ್ಪಂದಿಸಿದ ಸಿಎಂ
Team Udayavani, Jul 1, 2019, 2:15 PM IST
ಕುಷ್ಟಗಿ: ಕಡೇಕೊಪ್ಪ ಗ್ರಾಮದಲ್ಲಿ ಆರಂಭವಾಗಿರುವ ಶುದ್ಧ ನೀರಿನ ಘಟಕ.
ಕುಷ್ಟಗಿ: ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ, ಆದರೆ ಕುಡಿಯುವ ನೀರಲ್ಲಿ ಫ್ಲೋರೈಡ್ ಹೆಚ್ಚಾಗಿಗಿದೆ. ಸರ್ಕಾರ ಶುದ್ಧ ನೀರಿನ ಘಟಕ ದುಸ್ಥಿತಿಯಲ್ಲಿದೆ. ಸಂಬಂಧಿಸಿದ ಅಧಿಕಾರಿಗಳು ನಾಲ್ಕು ವರ್ಷಗಳಿಂದ ಸರಿಪಡಿಸಲು ಮುಂದಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಲ್ಲಿನ ಜನರ ಹಲ್ಲುಗಳು ಹಳದಿ, ಕಂದು ವರ್ಣಕ್ಕೆ ತಿರುಗಿರುವ ಕಾರಣಕ್ಕೆ ಕಡೇಕೊಪ್ಪ ಗ್ರಾಮದ ಯುವಕರಿಗೆ ಹೆಣ್ಣು ಕೊಡಲು ಹಿಂಜರಿಯುತ್ತಿರುವ ಬಗ್ಗೆ ಗ್ರಾಮದ ಯುವಕ ನಿಂಗಪ್ಪ ಜೀಗೇರಿ ಅವರ ಮನವಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಸ್ಪಂದಿಸಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ಗ್ರಾಮದಲ್ಲಿ ಶುದ್ಧ ನೀರಿನ ಘಟಕ ಅಳವಡಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಆರಂಭಿಸಿರಲಿಲ್ಲ. ಅಧಿಕಾರಿಗಳ ವಿಳಂಬ ಧೋರಣೆಗೆ ಬೇಸತ್ತಿದ್ದ ಗ್ರಾಮದ ಯುವಕ ನಿಂಗಪ್ಪ ಜೀಗೇರಿ, ಪಿಡಿಒ, ಇಒ, ಜಿಲ್ಲಾಧಿಕಾರಿ, ಜಿಪಂ ಸಿಇಒ ಹಾಗೂ ಸ್ಥಳೀಯ ಶಾಸಕ, ಗ್ರಾಮೀಣ ಪಂಚಾಯತ್ ರಾಜ್ ಸಚಿವರಿಗೆ ಮನವಿ ಸಲ್ಲಿಸಿದ್ದರು ಯಾರೂ ಸ್ಪಂದಿಸಿರಲಿಲ್ಲ. ಫೆಬ್ರುವರಿ 12ರಂದು ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿ ನಿವೇದಿಸಿಕೊಂಡಿದ್ದರು.
ಮನವಿಗೆ ಸಿಎಂ ಅವರ ಕ್ರಮದ ಆದೇಶದ ಸಹಿ ಹಾಕುತ್ತಿದ್ದಂತೆ, ಅಪರ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಗ್ರಾಮೀಣ ನೀರು ಸರಬರಾಜು, ನೈರ್ಮಲ್ಯ ಇಲಾಖೆ ಎಇಇ ಅವರಿಗೆ ಪತ್ರ ಬರೆದು ಕ್ರಮವಹಿಸಲು ಆದೇಶಿಸಿದ್ದರು. ಆದೇಶದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕ ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಕೃಪೆಯಿಂದ ಕಾರ್ಯಾರಂಭವಾಗಿದೆ.
ನಮ್ಮೂರಲ್ಲಿ ಶುದ್ಧ ನೀರಿನ ಘಟಕ ನಾಲ್ಕು ವರ್ಷಗಳ ನಂತರ ಆರಂಭವಾಗಿದ್ದು ಖುಷಿಯಾಗಿದೆ. ಈ ಘಟಕ ಆರಂಭಿಸಲು ಸಿಎಂ ಮಟ್ಟದವರೆಗೂ ಮನವಿ ಸಲ್ಲಿಸಬೇಕಿರುವುದು ದುಃಖದ ಸಂಗತಿ. ಗ್ರಾಮ ವಾಸ್ತವ್ಯದಿಂದ ಇಂತಹ ಸಮಸ್ಯೆಗಳ ನೈಜಸ್ಥಿತಿ ಅರಿವಾಗುತ್ತಿವೆ. •ನಿಂಗಪ್ಪ ಜೀಗೇರಿ ಕಡೇಕೊಪ್ಪ ಗ್ರಾಮಸ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.