BJP ಕಾರ್ಯಕರ್ತೆಯ ವಿಳಂಬಿತ ಜೈಲು ಬಿಡುಗಡೆ: ಮಮತಾ ಸರಕಾರಕ್ಕೆ ಸುಪ್ರೀಂ ನೊಟೀಸ್
Team Udayavani, Jul 1, 2019, 6:26 PM IST
ಹೊಸದಿಲ್ಲಿ : ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಿರುಚಿದ ಚಿತ್ರವನ್ನು ಸಾಮಾಜಿಕ ಜಾಲ ತಾಣಕ್ಕೆ ಹಾಕಿದ ಕಾರಣಕ್ಕೆ ಜೈಲುಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರನ್ನು ಬಿಡುಗಡೆ ಮಾಡುವಲ್ಲಿ ಏಕೆ ವಿಳಂಬ ಮಾಡಲಾಯಿತು ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಲ ಸರಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಈ ನೊಟೀಸಿಗೆ ನಾಲ್ಕು ದಿನಗಳ ಒಳಗೆ ಉತ್ತರಿಸುವಂತೆ ಅಪ್ಪಣೆ ಮಾಡಿದೆ.
ಪ್ರಿಯಾಂಕಾ ಶರ್ಮಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಲ್ಲಿ ತೋರಲಾದ ಎರಡು ದಿನಗಳ ವಿಳಂಬವು ಉನ್ನತ ನ್ಯಾಯಾಲಯದ ನಿಂದನೆ ಆಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಿಯಾಂಕಾ ಶರ್ಮಾ ಅವರ ಸಹೋದರ ರಾಜೀಬ್ ಶರ್ಮಾ ಪಶ್ಚಿಮ ಸರಕಾರದ ವಿರುದ್ಧ ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದ್ದರು. ತನ್ನ ಸಹೋದರಿಯನ್ನು 15 ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾದ ಕ್ರಮವು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿರುತ್ತದೆ ಎಂದು ದೂರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.