ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Jul 2, 2019, 5:59 AM IST

Crime-545

ಬೈಕ್‌ಗೆ ಕಾರು ಢಿಕ್ಕಿ ಹೊಡೆಸಿ
ಬಿಎಂಎಸ್‌ ಕಾರ್ಯಕರ್ತನಿಗೆ ಇರಿತ
ಕಾಸರಗೋಡು: ಕಾರಿನಲ್ಲಿ ಬಂದ ತಂಡವೊಂದು ಬಿಎಂಎಸ್‌ ಕಾರ್ಯಕರ್ತನಿಗೆ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.

ವಿದ್ಯಾನಗರ ನೆಲ್ಕಳದ ಪ್ರಶಾಂತ್‌ (32) ಅವರಿಗೆ ಇರಿದು ಗಾಯಗೊಳಿಸಲಾಗಿದೆ. ಜೂ. 30ರಂದು ರಾತ್ರಿ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯಾನಗರದಲ್ಲಿರುವ ಕಾಸರಗೋಡು ಸರಕಾರಿ ಕಾಲೇಜು ಬಳಿ ತಲುಪಿದಾಗ ಕಾರಿನಲ್ಲಿ ಬಂದ ಅಕ್ರಮಿಗಳ ತಂಡ ಬೈಕ್‌ಗೆ ಕಾರು ಢಿಕ್ಕಿ ಹೊಡೆಸಿ ಬೀಳಿಸಿದೆ. ಆಗ ಕೆಳಕ್ಕೆ ಬಿದ್ದ ಪ್ರಶಾಂತ್‌ ಅವರಿಗೆ ತಂಡ ಇರಿದು ಗಾಯಗೊಳಿಸಿದೆ. ಪ್ರಶಾಂತ್‌ ಅಲ್ಲಿಂದ ತಪ್ಪಿಸಿಕೊಂಡು ಆಸ್ಪತ್ರೆಯೊಂದರ ಒಳಗೆ ಓಡಿ ಹೋಗಿದ್ದಾರೆ. ಆಗ ಕಾರಿನಲ್ಲಿ ಬಂದ ತಂಡ ಪರಾರಿಯಾಯಿತು.

ಗಾಯಗೊಂಡ ಪ್ರಶಾಂತ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಗೆ ಸಂಬಂಧಿಸಿ ಎಸ್‌ಡಿಪಿಐ ಕಾರ್ಯಕರ್ತರೆಂದು ಹೇಳಲಾಗುತ್ತಿರುವ ಆರು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ಎಲ್ಲೆಡೆ ಜಾಗ್ರತೆ ವಹಿಸಲಾಗಿದೆ.

2014ರ ಡಿ. 22ರಂದು ಕಾಸರಗೋಡು ನಗರದ ಎಂ.ಜಿ. ರಸ್ತೆಯಲ್ಲಿ ಹಾಸಿಗೆ ಮಾರಾಟದಂಗಡಿಯಲ್ಲಿ ತಳಂಗರೆ ನಿವಾಸಿ ಸೈನುಲ್‌ ಆಬಿದ್‌(25) ಕೊಲೆ ಪ್ರಕರಣದಲ್ಲಿ ಪ್ರಶಾಂತ್‌ ಮೂರನೇ ಆರೋಪಿಯೆಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆ
ಪ್ರಶಾಂತ್‌ ಅವರಿಗೆ ಇರಿದ ಘಟನೆಯನ್ನು ಪ್ರತಿಭಟಿಸಿ ಬಿಎಂಎಸ್‌ ಕಾರ್ಯಕರ್ತರು ಸೋಮವಾರ ಬೆಳಗ್ಗೆ ಕಾಸರಗೋಡು ನಗರದಲ್ಲಿ ಮೆರವಣಿಗೆ ನಡೆಸಿದರು. ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಮರ ಕಳವು : ಅಕ್ರಮ ಕೋವಿ ಪ್ರಕರಣದ ಆರೋಪಿ
ಸಹಿತ ಇಬ್ಬರ ಬಂಧನ
ಅಡೂರು: ವೃದ್ಧೆಯೋರ್ವರು ಏಕಾಂಗಿಯಾಗಿ ವಾಸಿಸುವ ಮನೆ ಹಿತ್ತಿಲಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೀಟಿ ಮರಗಳನ್ನು ಕಡಿದು ಸಾಗಿಸಿದ ಘಟನೆಯಲ್ಲಿ ಕೋವಿಯನ್ನು ಅಕ್ರಮವಾಗಿ ಕೈವಶವಿರಿಸಿದ್ದ ಪ್ರಕರಣದಲ್ಲಿ ಆರೋಪಿಗಳಿಬ್ಬರನ್ನು ಆದೂರು ಪೊಲೀಸರು ಬಂಧಿಸಿದ್ದಾರೆ.

ಅಡೂರು ಬಳಿಯ ಬೆಳ್ಳಚ್ಚೇರಿಯ ಶ್ರೀಧರ (46) ಮತ್ತು ಕರ್ನೂರು ನಿವಾಸಿ ಗಣೇಶ (42)ನನ್ನು ಬಂಧಿಸಲಾಗಿದೆ. ಕಳವು ಮಾಡಿದ ಬೀಟಿ ಮರಗಳನ್ನು ಕುತ್ತಿಕೋಲ್‌ ಎಡಪರಂಬದಲ್ಲಿ ಬಚ್ಚಿಡಲಾಗಿತ್ತು. ಅವುಗಳನ್ನು ಆದೂರು ಪೊಲೀಸ್‌ ಠಾಣೆಗೆ ತಲುಪಿಸಲಾಗಿದೆ.

ಅಡೂರು ಓಲೆಕೊಚ್ಚಿಯ ಮಹಾಲಕ್ಷ್ಮೀ (68) ಅವರ ಹಿತ್ತಿಲಿ ನಿಂದ ಮೂರು ಬೀಟಿ ಮರಗಳನ್ನು ಕಳವು ಮಾಡಲಾಗಿತ್ತು. ಆರೋಪಿಗಳ ಪೈಕಿ ಶ್ರೀಧರ ಅಕ್ರಮ ಕೋವಿ ಕೈವಶವಿರಿಸಿಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದಾಗ ಒಂದು ವರ್ಷ ಹಿಂದೆ ಬಂಧಿತನಾಗಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಸ್ಕೂಟರ್‌ ಕಳವು
ಮಂಜೇಶ್ವರ: ಉದ್ಯಾವರ ಮಾಡ ಶ್ರೀ ಅರಸುಕೃಪಾ ವೀರ ಹನುಮಾನ್‌ ವ್ಯಾಯಾಮ ಶಾಲೆ ಬಳಿಯಲ್ಲಿ ನಿಲ್ಲಿಸಿದ್ದ ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಸಹಕಾರ್ಯದರ್ಶಿ ಶೈಲೇಶ್‌ ಅಂಜರೆ ಅವರ ಸ್ಕೂಟರ್‌ ಕಳವು ಮಾಡಲಾಗಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ.

ಕಳವು ಆರೋಪಿ ಬಂಧನ
ಹೊಸದುರ್ಗ: ಕುಖ್ಯಾತ ಕಳವು ಆರೋಪಿ ತೊರಪ್ಪನ್‌ ಸಂತೋಷ (35)ನನ್ನು ಕಾಲಿಕಡವಿನಿಂದ ಕಾಂಞಂಗಾಡ್‌ ಡಿವೈಎಸ್‌ಪಿ ಪಿ.ಕೆ. ಸುಧಾಕರನ್‌ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.

ಕಾಡುಹಂದಿ ತಿವಿದು ಗಾಯ
ಕಾಸರಗೋಡು: ಕಾಡುಹಂದಿ ತಿವಿದು ಬಾಲಕ ಗಾಯಗೊಂಡಿದ್ದಾನೆ. ವೆಸ್ಟ್‌ ಎಳೇರಿ ಪಂಚಾಯತ್‌ನ ಪೂತ್ತಂಕಲ್ಲಿನ ಇಸ್ಮಾಯಿಲ್‌ ಅವರ ಪುತ್ರ ಸಹದ್‌ (9) ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.

ತಾತ್ಕಾಲಿಕ ಸಿಬಂದಿ ಹೊರಕ್ಕೆ:
ಬಸ್‌ ಸೇವೆ ಮೊಟಕು
ಕಾಸರಗೋಡು: ಸುಪ್ರೀಂ ಕೋರ್ಟ್‌ ನೀಡಿದ ಕಾಲಾವಧಿಯ ವ್ಯಾಪ್ತಿ ಕೊನೆಗೊಂಡ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿಯ ಎಂ. ಪಾನಲ್‌ನಲ್ಲಿದ್ದ 49 ಮಂದಿಯನ್ನು ಸೇವೆಯಿಂದ ಹೊರತುಪಡಿಸಲಾಗಿದೆ. ಇದರಿಂದಾಗಿ ಕಾಸರಗೋಡು ಜಿಲ್ಲಾ ಡಿಪೋದಲ್ಲಿ 10 ಬಸ್‌ ಸೇವೆ ನಿಲುಗಡೆಗೊಳಿಸಿದೆ. ಮಂಗಳೂರು, ಸುಳ್ಯ, ಪುತ್ತೂರು ಇತ್ಯಾದಿ ರೂಟ್‌ಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ತಲಾ ಎರಡರಷ್ಟು ಬಸ್‌ ಸೇವೆ ನಿಲುಗಡೆಗೊಂಡಿದೆ. ಹೊಸದುರ್ಗ ಸಬ್‌ ಡಿಪೋದಲ್ಲಿ ಮೂರು ಬಸ್‌ ಸೇವೆ ನಿಲುಗಡೆಗೊಂಡಿದೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.