ವಾಸ್ತವದ ಸಂಘರ್ಷ ಕಥೆಗಳ ಹುಟ್ಟಿಗೆ ಕಾರಣ: ಹರೀಶ್‌ ಪೆರ್ಲ


Team Udayavani, Jul 2, 2019, 5:16 AM IST

01KSDE4

ಪೆರ್ಲ: ಸಾಹಿತ್ಯ ಚರಿತ್ರೆಯಲ್ಲಿ ಕಥಾ ಕ್ಷೇತ್ರದ ಮಹತ್ತರ ಕೊಡುಗೆಗಳಿಂದ ಭಾಷೆಯ ಸಮೃದ್ಧ ಬೆಳವಣಿಗೆಗೆ ತನ್ನದೇ ಕೊಡುಗೆಗಳನ್ನು ನೀಡಿದೆ. ಜೀವನಾನುಭವಗಳು, ವರ್ತ ಮಾನದ ಬದುಕು ಮತ್ತು ವಾಸ್ತವತೆಗಳ ಸಂಘರ್ಷಗಳು ಕಥೆಗಳ ಹುಟ್ಟಿಗೆ ಕಾರಣವಾಗುತ್ತವೆ ಎಂದು ಹಿರಿಯ ಸಾಹಿತಿ, ಲೇಖಕ ಹರೀಶ್‌ ಪೆರ್ಲ ಅವರು ಹೇಳಿದರು.

ಸಾಹಿತ್ಯ ಸಾಂಸ್ಕೃತಿಕ ಸಂಘಟನೆ ಯಾದ ಪೆರ್ಲದ ಸವಿ ಹೃದಯದ ಕವಿ ಮಿತ್ರರು ವೇದಿಕೆಯ ನೇತೃತ್ವದಲ್ಲಿ ಪೆರ್ಲದ ಗುಲಾಬಿ ನಿವಾಸದಲ್ಲಿ ಆಯೋಜಿಸಲಾಗಿದ್ದ ಮುಂಗಾರ ಕಥಾಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನುಭವ, ವಿಶ್ಲೇಷಣೆಗಳನ್ನು ಅಕ್ಷರ ರೂಪದಲ್ಲಿ ಕಟ್ಟಿಕೊಡುವ ಕಲೆ ಬಹುಮುಖೀ ಆಯಾಮದ್ದಾಗಿದ್ದು, ಮುಗಿಯದೆ ನಿತ್ಯ ಕಾಡುವ ಕಥೆಗಳು ಜನಮಾನಸದಲ್ಲಿ ಬೇರೂರಿ ಹೊಸ ಸೃಷ್ಟಿಗೆ ಕಾರಣವಾಗುತ್ತವೆ ಎಂದ ಅವರು ಹೊಸತೊಂದರ ಶಿಲ್ಪಿಯಾಗುವ ಕಥೆಗಾರ ಪಾತ್ರಗಳ ಸೃಷ್ಟಿಯ ಮೂಲಕ ಬ್ರಹ್ಮ ಸದೃಶದಿಂದ ರೂಪಕಗಳನ್ನು ಸೃಜಿಸಿ ಹೊಸ ಲೋಕವನ್ನು ಸೃಷ್ಟಿಸಿ ಆರಿವಿನ ವಿಸ್ತಾರತೆಗೆ ಕಾರಣನಾಗುತ್ತಾನೆ ಎಂದು ತಿಳಿಸಿದರು.

ಕಥಾಗೋಷ್ಠಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ಮಾತನಾಡಿ, ಕಥೆಗಳ ಓದು ಬದುಕಿನ ಬೌದ್ಧಿಕ ಬೆಳವಣಿಗೆಯನ್ನು ಪಕ್ವಗೊಳಿಸುತ್ತದೆ. ವ್ಯಕ್ತಿಗಳಲ್ಲಿ ಅಡಗಿರುವ ನೋವು, ನಲಿವುಗಳನ್ನು ತೆರೆದಿಡುವ ಕಥಾನಕಗಳು ಕಾಲಘಟ್ಟಗಳ ಇತಿಹಾಸವನ್ನು ವರ್ತಮಾನದಲ್ಲಿ ಪ್ರತಿಬಿಂಬಿಸುತ್ತದೆ ಎಂದರು.

ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ಮಾಜಿ ಸೇನಾನಿ ತಾರಾನಾಥ ಬೋಳಾರ್‌, ಕವಿ ಶ್ರೀಕೃಷ್ಣಯ್ಯ ಅನಂತಪುರ, ಕವಯಿತ್ರಿ, ಶಿಕ್ಷಕಿ ಕವಿತಾ ಟಿ.ಎ.ಎನ್‌. ಖಂಡಿಗೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭಹಾರೈಸಿದರು. ಈ ಸಂದರ್ಭ ಹಿರಿಯ ಸಾಹಿತಿ, ಲೇಖಕ ಹರೀಶ್‌ ಪೆರ್ಲ ಅವರನ್ನು ಸುದೀರ್ಘ‌ ಕಾಲದ ಸಾಹಿತ್ಯ ಸೇವೆಯ ಕೊಡುಗೆಗಳಿಗಾಗಿ ಅಭಿನಂದಿಸಿ ಗೌರವಿಸಲಾಯಿತು.

ಪುರುಷೋತ್ತಮ ಭಟ್‌ ಕೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸುಭಾಶ್‌ ಪೆರ್ಲ ವಂದಿಸಿದರು. ಆನಂದ ರೈ ಅಡ್ಕಸ್ಥಳ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ಅನಂತಪುರ ಪ್ರಾರ್ಥನೆ ಹಾಡಿದರು.

ಬಳಿಕ ನಡೆದ ಕಥಾಗೋಷ್ಠಿಯಲ್ಲಿ ಉದಯೋನ್ಮುಖ ಕತೆಗಾರರಾದ ಪ್ರಭಾವತಿ ಕೆದಿಲಾಯ, ಸುಶೀಲಾ ಪದ್ಯಾಣ, ಜ್ಯೋಸ್ನಾ ಎಂ.ಕಡಂದೇಲು, ನಿರ್ಮಲಾ ಸೇಸಪ್ಪ ಖಂಡಿಗೆ, ಸೀತಾಲಕ್ಷ್ಮೀ ವರ್ಮ ವಿಟ್ಲ, ಅಭಿಲಾಷ್‌ ಎಸ್‌.ಬಿ., ಶ್ರೀಧರ ಭಟ್‌ ನಲ್ಕ ಬನಾರಿ, ಶ್ವೇತಾ ಕಜೆ, ರಾಮ ವೈ.ಬಿ. ಏದಾರ್‌, ಚಿತ್ತರಂಜನ್‌ ಕಡಂದೇಲು, ಗೋಪಾಲಕೃಷ್ಣ ಭಟ್‌ ವಾಟೆ ಸ್ವರಚಿತ ಕಥೆಗಳನ್ನು ವಾಚಿಸಿದರು.

ಕವಿಗಳಾದ ಶಿವ ಪಡ್ರೆ, ಆಳ್ವಾಸ್‌ ಕಾಲೇಜಿನ ಪ್ರಾಧ್ಯಾಪಕ ಟಿ.ಎ.ಎನ್‌. ಖಂಡಿಗೆ, ಡಾ| ಎಸ್‌.ಎನ್‌. ಭಟ್‌ ಪೆರ್ಲ, ರಿತೇಶ್‌ ಕಿರಣ್‌, ಪಾಂಡುರಂಗ ಶೆಣೈ ಪೆರ್ಲ, ಸತ್ಯನಾರಾಯಣ ಹೆಗ್ಡೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಅಖೀಲೇಶ್‌, ಮೀಡಿಯಾ ಕ್ಲಾಸಿಕಲ್ಸ್‌ ನ ಕಾರ್ಯದರ್ಶಿ ಶ್ರೀಕಾಂತ್‌ ನಾರಾಯಣ್‌ ನೆಟ್ಟಣಿಗೆ, ಕವಯಿತ್ರಿ ಚೇತನಾ ಕುಂಬಳೆ, ಗೀತಾ ಜಿ. ನಾಯಕ್‌, ವಿಜಯಲಕ್ಷ್ಮೀ ಶೆಣೈ ಉಪಸ್ಥಿತರಿದ್ದು ಸಹಕರಿಸಿದರು. ಆನಂದ ರೈ ಅಡ್ಕಸ್ಥಳ ಗೋಷ್ಠಿ ನಿರ್ವಹಿಸಿದರು.

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.