ಈ ಬಾರಿಯೂ ಡ್ಯಾಂಗಳು ಭರ್ತಿಯಾಗುವುದು ಡೌಟು?

ಕೈಕೊಟ್ಟಿರುವ ಮುಂಗಾರು, ಮುಂಗಾರು ಪೂರ್ವ ಮಳೆ; ಜಲಾಶಯಗಳಿಗೆ ಹರಿದು ಬರದ ನಿರೀಕ್ಷಿತ ಒಳಹರಿವು

Team Udayavani, Jul 2, 2019, 6:00 AM IST

ud

ಬೆಂಗಳೂರು: ಸತತ ಬರದಿಂದ ಬರಿದಾಗಿರುವ ರಾಜ್ಯದ ಜಲಾಶಯಗಳು ಈ ಬಾರಿಯೂ ಭರ್ತಿಯಾಗುವುದು ಅನುಮಾನವಾಗಿದ್ದು, ಇದು ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

‘ಉದಯವಾಣಿ’ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮಂಕಾದ ಮುಂಗಾರು; ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ’ ಕುರಿತ ಸಂವಾದದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ)ದ ನಿರ್ದೇಶಕ ಡಾ.ಜಿ.ಎಸ್‌. ಶ್ರೀನಿವಾಸ ರೆಡ್ಡಿ, ಈ ಬಾರಿ ಮುಂಗಾರು ಪೂರ್ವ ಉತ್ತಮ ಮಳೆಯಾಗಿದ್ದರೆ, ಮುಂಗಾರು ಮಳೆಯಿಂದ ಒಳಹರಿವು ಹೆಚ್ಚಳ ಆಗುತ್ತಿತ್ತು. ಆದರೆ, ಜೂನ್‌ 14ಕ್ಕೆ ಮುಂಗಾರು ಮಳೆ ಪ್ರವೇಶ ಆಗಿದೆ. ಅದೂ ನಿರೀಕ್ಷಿತ ಮಟ್ಟದಲ್ಲಿ ಪ್ರಬಲವಾಗಿಲ್ಲ. ಇದರಿಂದ ಕೆಆರ್‌ಎಸ್‌ಗೆ ಕೇವಲ 2.85 ಟಿಎಂಸಿ ನೀರು ಬಂದಿದೆ. ವಾಡಿಕೆಯಂತೆ ಜೂನ್‌ನಲ್ಲಿ ಅಣೆಕಟ್ಟೆಗೆ 31.57 ಟಿಎಂಸಿ ನೀರು ಬರಬೇಕಿತ್ತು ಎಂದರು. ಕಳೆದ ವರ್ಷ ಈ ಹೊತ್ತಿಗೆ 76 ಟಿಎಂಸಿ ಒಳಹರಿವು ಇತ್ತು.

ಜೂನ್‌ನಲ್ಲಿ ಶೇ. 27ರಷ್ಟು ಮಳೆ ಕೊರತೆ ಆಗಿದೆ. ಜುಲೈನಲ್ಲಿ ವಾಡಿಕೆ ಮಳೆಯಾದರೂ ಎಂದಿನಂತೆ ಒಳಹರಿವು ಬರುವುದು ಅನುಮಾನ. ಹಾಗಾಗಿ, ಜಲಾಶಯಗಳ ಸ್ಥಿತಿ ಆಶಾದಾಯಕವಾಗಿರುವುದಿಲ್ಲ. ಆದ್ದರಿಂದ ರೈತರು ಅದಕ್ಕೆ ಪೂರಕವಾಗಿ ಬೆಳೆಗಳ ಬಿತ್ತನೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೆಆರ್‌ಎಸ್‌ಗೆ ಜುಲೈನಲ್ಲಿ 92 ಟಿಎಂಸಿ ಹಾಗೂ ಆಗಸ್ಟ್‌ನಲ್ಲಿ 90 ಟಿಎಂಸಿ ನೀರು ಬರಬೇಕಿದೆ. ಆಗಸ್ಟ್‌ನಲ್ಲಿ ಮತ್ತೆ ಕೊಂಚ ಮಳೆ ಕೊರತೆ ನಿರೀಕ್ಷೆ ಇದೆ. ಹೀಗಾಗಿ ಡ್ಯಾಂಗಳ ಸ್ಥಿತಿ ಆಶಾದಾಯಕವಾಗಿಲ್ಲ ಎಂದರು.

ಆಗಸ್ಟ್‌ 4ರವರೆಗೆ ಅವಕಾಶ ಇದೆ: ಹವಾಮಾನ ತಜ್ಞ ಹಾಗೂ ಬೆಂಗಳೂರು ಕೃಷಿ ವಿವಿ ಕುಲಸಚಿವ ಪ್ರೊ.ಎಂ.ಬಿ. ರಾಜೇಗೌಡ ಮಾತನಾಡಿ, ಮುಂಗಾರು ತಡವಾಗಿದ್ದರೂ ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾಕೆಂದರೆ, ಆಗಸ್ಟ್‌ 4ರವರೆಗೂ ದೀರ್ಘಾವಧಿ ಬೆಳೆಗಳ ಬಿತ್ತನೆಗೆ ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ವರ್ಷಗಳಲ್ಲಿ ಮಳೆ ಪ್ರಮಾಣ ಶೇ. 1ರಿಂದ 1.5ರಷ್ಟು ಹೆಚ್ಚಳ ಆಗಿದೆ. ಆದರೆ, ಅದರ ಹಂಚಿಕೆ ಸರಿಯಾಗಿ ಆಗುತ್ತಿಲ್ಲ. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ವೈಜ್ಞಾನಿಕವಾಗಿ ಮಳೆ ಹಂಚಿಕೆಯನ್ನು ವಿಶ್ಲೇಷಿಸಿ, ಲಭ್ಯತೆಗೆ ತಕ್ಕಂತೆ ಕೃಷಿ ಪದ್ಧತಿ ಮಾರ್ಪಾಡು ಮಾಡಿಕೊಳ್ಳಬೇಕು ಎಂದರು.

11 ಜಿಲ್ಲೆಗಳಲ್ಲಿ ಕೊರತೆ

ಮುಂಗಾರಿನ ಮೊದಲ ತಿಂಗಳು ರಾಜ್ಯದಲ್ಲಿ ಶೇ. 27ರಷ್ಟು ಮಳೆ ಕೊರತೆ ಆಗಿದ್ದು, 11 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಡಾ.ಶ್ರೀನಿವಾಸ ರೆಡ್ಡಿ ತಿಳಿಸಿದರು. ಒಟ್ಟಾರೆ 30 ಜಿಲ್ಲೆಗಳ ಪೈಕಿ 5 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, 14 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಉಳಿದ 11ರಲ್ಲಿ ವಾಡಿಕೆಗಿಂತ ಕಡಿಮೆ ಆಗಿದ್ದು, ಇದರಲ್ಲಿ 76 ತಾಲ್ಲೂಕುಗಳು ಬರುತ್ತವೆ. ಆದರೆ, ರಾಜ್ಯದಲ್ಲಿ ಜುಲೈನಲ್ಲಿ ಅತಿ ಹೆಚ್ಚು ಮಳೆ ಬರುತ್ತದೆ ಎಂದ ಅವರು, ವರ್ಷದಲ್ಲಿ ಸುರಿಯುವ ಮಳೆಯಲ್ಲಿ ಶೇ. 35ರಷ್ಟು ಪ್ರಮಾಣ ಇದೇ ತಿಂಗಳಲ್ಲಿ ಬೀಳುತ್ತದೆ ಎಂದೂ ಹೇಳಿದರು.

ಬೆಳೆ ಉಳಿಸಿಕೊಳ್ಳಲು ಆದ್ಯತೆ

‘ಮುಂಗಾರು ಪೂರ್ವ ಮಳೆ ಕೈಕೊಟ್ಟಿದ್ದರಿಂದ ಆ ಅವಧಿಯಲ್ಲಿ ಹೆಸರು, ಉದ್ದು ಹಾಗೂ ಎಳ್ಳು ಬೆಳೆಗಳನ್ನು ಕಳೆದುಕೊಂಡಿದ್ದೇವೆ. ಈಗ ಮುಂಗಾರು ಮತ್ತು ಹಿಂಗಾರು ಬೆಳೆಗಳನ್ನು ಉಳಿಸಿಕೊಳ್ಳಲು ಆದ್ಯತೆ ನೀಡಬೇಕು’ ಎಂದು ತಜ್ಞರು ತಿಳಿಸಿದರು. ಮುಂಗಾರು ಪೂರ್ವ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು ಐದು ಲಕ್ಷ ಹೆಕ್ಟೇರ್‌ನಲ್ಲಿ ಹೆಸರು, ಉದ್ದು, ತೊಗರಿ, ಮೇವಿನ ಬೆಳೆಗಳು, ಎಣ್ಣೆಕಾಳುಗಳು ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಮಳೆ ಕೈಕೊಟ್ಟಿದ್ದರಿಂದ ಈ ಬೆಳೆ ಬರಲಿಲ್ಲ. ಈ ಅವಧಿಯಲ್ಲಿ ಕೇವಲ ಶೇ. 41ರಷ್ಟು ಬಿತ್ತನೆ ಆಗಿತ್ತು ಎಂದು ಡಾ.ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.