ಪ್ರಜಾಪ್ರಭುತ್ವ ಉಳಿವಿಗೆ ಮಾಧ್ಯಮ ಪಾತ್ರ ಮುಖ್ಯ

•ಪತ್ರಿಕಾ ದಿನಾಚರಣೆ •ಗಾಳಿ ಸುದ್ದಿಗೆ ಅವಕಾಶ ನೀಡದಿರುವಂತೆ ಪತ್ರಕರ್ತರಿಗೆ ಸಚಿವ ಖರ್ಗೆ ಕಿವಿಮಾತು

Team Udayavani, Jul 2, 2019, 7:50 AM IST

gb-tdy-1..

ಕಲಬುರಗಿ: ದೇಶದ ಪ್ರಜಾಪ್ರಭುತ್ವ ಉಳಿಯಬೇಕಾದರೆ ಹಾಗೂ ಗಟ್ಟಿಗೊಳ್ಳಲು ಮಾಧ್ಯಮ ಪಾತ್ರವೇ ಬಹು ಮುಖ್ಯವಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಪತ್ರಕರ್ತ ಮಕ್ಕಳ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವು ಹಾಗೂ ಬೆಳವಣಿಗೆಗೆ ನಾಲ್ಕನೇ ಅಂಗ ಎಂದು ಕರೆಸಿಕೊಳ್ಳುವ ಪತ್ರಿಕಾರಂಗದ ಪ್ರಾಮುಖ್ಯತೆ ಇದೆ. ಪರ್ತಕರ್ತರು ಗಾಳಿ ಸುದ್ದಿಗೆ ಅವಕಾಶ ನೀಡದೇ ನೈಜ ಸುದ್ದಿಗಳನ್ನು ಸರಳೀಕರಣಗೊಳಿಸಿ ಜನರಿಗೆ ತಲುಪಿಸುವಲ್ಲಿ ಗಮನ ಕೊಡಬೇಕು ಎಂದು ಕವಿಮಾತು ಹೇಳಿದರು.

ಮಂಗಳೂರು ಸಮಾಚಾರ ಪತ್ರಿಕೆ ಪ್ರಾರಂಭ ಮತ್ತು ಜನರಿಗೆ ತಲುಪಿದ್ದ ರೀತಿ ಅನನ್ಯ. ಅಂದಿನಿಂದ ಇಂದಿನವರೆಗೆ ಪತ್ರಿಕೆಗಳು ಬೃಹದಾಕಾರವಾಗಿ ಬೆಳೆದು ಬಂದಿವೆ. ಅದಕ್ಕೆ ಆಯಾ ಕಾಲಕ್ಕೆ ಪತ್ರಕರ್ತರ ಕೊಡುಗೆ ಅಪಾರವಾಗಿದೆ. ಪತ್ರಿಕೆಗಳು ಮತ್ತು ಮಾಧ್ಯಮಗಳ ವರದಿಗಳು ಸರ್ಕಾರದ ಮೇಲೆ ನೇರ ಪರಿಣಾಮ ಬೀರುತ್ತವೆ. ಪತ್ರಿಕೆಗಳಿಗೆ ಒದಗಿಸಲಾಗಿರುವ ಮುಕ್ತ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಪಾಲಕರು ಮಕ್ಕಳಿಗೆ ವೈಜ್ಞಾನಿಕ ಮನೋಭಾವ ಮೂಡಿಸಲು ಶ್ರಮಿಸಬೇಕು. ಶಿಕ್ಷಣದಲ್ಲಿ ಹಾಕಿದ ಬಂಡವಾಳ ಮರಳಿ ಬರುತ್ತದೆ. ಅಂದರೆ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಮಾಡುವ ಖರ್ಚು ಮುಂದೆ ಅಪಾರ ಪ್ರಮಾಣದಲ್ಲಿ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಮರಳಿ ಬರುತ್ತದೆ ಎಂದು ಹೇಳಿದರು.

ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಜನರ ಹಣೆಬರಹ ಬರೆಯುವಲ್ಲಿ ಪತ್ರಕರ್ತರ ಪಾತ್ರವೇ ಬಹು ಮುಖ್ಯವಾಗಿದೆ. ಅಂತಹ ತಾಕತ್ತು ಪತ್ರಕರ್ತರ ಬರವಣಿಗೆಯಲ್ಲಿ ಅಡಗಿದೆ. ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿರುವುದು ಮಾದರಿ ಕಾರ್ಯವಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ಸದಸ್ಯರಾದ ಬಿ.ಜಿ.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಯುನೈಟೆಡ್‌ ಆಸ್ಪತ್ರೆ ಚೇರ್ಮನ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ| ವಿಕ್ರಮ ಸಿದ್ಧಾರೆಡ್ಡಿ, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿದರು. ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಣಮಂತರಾವ ಭೈರಾಮಡಗಿ ಸೇರಿದಂತೆ ಮುಂತಾದವರು ವೇದಿಕೆ ಮೇಲಿದ್ದರು.

ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್‌ ಠಾಕೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ ಅವಂಟಿ ಸ್ವಾಗತಿಸಿದರು. ಆರ್‌.ಜೆ ಮಂಜು, ನಾಗೇಶ್ವರಿ ಕದಂ ನಿರೂಪಿಸಿದರು. ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ದೇವೇಂದ್ರಪ್ಪ ಕಪನೂರ ವಂದಿಸಿದರು. ಸಂಘದ ಪದಾಧಿಕಾರಿಗಳಾದ ಸಂಗಮನಾಥ ರೇವತಗಾಂವ್‌, ಡಾ. ಶಿವರಾಮ ಅಸುಂಡಿ, ರಾಜಕುಮಾರ ಉದನೂರ ಮಕ್ಕಳ ಪ್ರತಿಭಾ ಪುರಸ್ಕಾರ, ಪತ್ರಕರ್ತರ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು.

ಸಂಘದ ಪದಾಧಿಕಾರಿಗಳು, ಸದಸ್ಯರು, ಹಿರಿಯ ಪತ್ರಕರ್ತರು, ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪತ್ರಕರ್ತರ ಕಾಲೋನಿಗೆ ಬದ್ಧ: ಸಚಿವ ಖರ್ಗೆ

ಬಹಳ ದಿನಗಳಿಂದ ಸಾಕಾರಗೊಳ್ಳದೇ ಕನಸಾಗಿ ಉಳಿದಿರುವ ಪತ್ರಕರ್ತರ ಕಾಲೋನಿಗೆ ಬದ್ಧವಿರುವುದಾಗಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಪತ್ರಕರ್ತರಿಗೆ ನಿವೇಶನ ಒದಗಿಸಲು ನಗರದ ಹೊರವಲಯದ ಸಿಂದಗಿ (ಬಿ) ಗ್ರಾಮದ ಬಳಿ 20 ಎಕರೆ ಸ್ಥಳ ಗುರುತಿಸಿ ಪತ್ರಕರ್ತರ ಕಾಲೋನಿ( ಪ್ರಸ್‌ ಲೇಔಟ್) ನಿರ್ಮಿಸಲು ಉದ್ದೇಶಿಸಿಸಲಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಶೀಘ್ರವೇ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು. ಪತ್ರಕರ್ತರಿಗೆ ಹೇಗೆ ಹಾಗೂ ಯಾವ ನಿಟ್ಟಿನಲ್ಲಿ ನಿವೇಶನ ಹಂಚಬೇಕು ಎಂಬುದನ್ನು ಪತ್ರಕರ್ತ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲರಿಗೂ ಅನುಕೂಲವಾಗುವ ಹಾಗೆ ಕಾರ್ಯಸೂಚಿ ರೂಪಿಸಲಾಗುವುದು ಎಂದು ಹೇಳಿದರು. ಪ್ರತಿಕಾ ಭವನವನ್ನು ಮರಳಿ ಪತ್ರಕರ್ತರ ಸಂಘದ ಸುಪರ್ದಿಗೆ ವಹಿಸುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಬಹು ಮುಖ್ಯವಾಗಿ ಜತೆಗೆ ಧೀಮಂತ ಪತ್ರಕರ್ತ ದಿ| ವಿ.ಎನ್‌. ಕಾಗಲ್ಕರ್‌ ಅವರ ಹೆಸರಲ್ಲಿ ಸರ್ಕಾರದ ವತಿಯಿಂದ ಪ್ರಶಸ್ತಿ ನೀಡಲು ಸಂಬಂಧಪಟ್ಟವರ ಮೇಲೆ ಒತ್ತಡ ಹಾಕಲಾಗುವುದು. ಈ ಕುರಿತು ಸಂಘ ತಮಗೆ ಮನವಿ ಪತ್ರವೊಂದನ್ನು ಸಲ್ಲಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.