ಮಂಕು ಕವಿದ ಮಣಕಿ ಕ್ರೀಡಾ ಮೈದಾನ!

Team Udayavani, Jul 2, 2019, 9:43 AM IST

uk-tdy-1..

ಕುಮಟಾ: ಮೈದಾನದುದ್ದಕ್ಕೂ ಮದ್ಯದ ಬಾಟಲಿಗಳ ಕಾರುಬಾರು. ಕತ್ತಲಾಯಿತೆಂದರೆ ವ್ಯಸನಿಗರ ಅಡ್ಡಾವಾಗುತ್ತಿದ್ದರೂ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ. ಹಲವು ಕಾರ್ಯಕ್ರಮಗಳಿಗೆ ಸಾಕ್ಷಿಯಾದ ಪಟ್ಟಣದ ಐತಿಹಾಸಿಕ ಮಣಕಿ ಮೈದಾನ ಈಗ ಮಂಕು ಕವಿದಂತಾಗಿದೆ.

ಪಟ್ಟಣದ ಮಹಾತ್ಮಗಾಂಧಿ ಮೈದಾನ (ಮಣಕಿ ಗ್ರೌಂಡ್‌) ಅಭಿವೃದ್ಧಿ ಕಾಣದೆ, ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಪಟ್ಟಣದ ಹೃದಯಭಾಗದಲ್ಲಿರುವ ಮಣಕಿ ಮೈದಾನ ಸುಮಾರು 11 ಎಕರೆಗಳಷ್ಟಿರುವ ಜಿಲ್ಲೆಯಲ್ಲಿಯೇ ವಿಶಾಲವಾದ ಮೈದಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಈ ಮೈದಾನದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಸೇರಿದಂತೆ ಹಲವು ಗಣ್ಯರ ಕಾರ್ಯಕ್ರಮಗಳಿಗೆ ಈ ಮೈದಾನ ಸಾಕ್ಷಿಯಾಗಿದೆ.

ಕುಮಟಾ ಉತ್ಸವ, ಹಬ್ಬ, ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಹಲವು ಕ್ರೀಡಾ ಚಟುವಟಿಕೆಗಳು ನಡೆಯುತ್ತವೆ. ಅಲ್ಲದೇ ವಿವಿಧ ರಾಜಕೀಯ ಪಕ್ಷಗಳ ರಾಜ್ಯ ಮತ್ತು ರಾಷ್ಟ್ರ ಮುಖಂಡರುಗಳಿಗೂ ಈ ಮೈದಾನದ ಪರಿಚಯವಿದೆ. ಇಂಥ ಐತಿಹಾಸಿಕ ಹಿನ್ನೆಲೆಯಿರುವ ಮೈದಾನವು ಮೂಲ ಸೌಕರ್ಯಗಳಿಲ್ಲದೆ ಬಣಗುಡುತ್ತಿದೆ.

ಅಲ್ಲದೆ ತಾಲೂಕು ಆಡಳಿತ ಈ ಮೈದಾನದಲ್ಲಿ ಎಲ್ಲ ರಾಷ್ಟ್ರೀಯ ದಿನಾಚಣೆ ಮತ್ತು ಹಬ್ಬಗಳನ್ನು ಆಚರಿಸುತ್ತದೆಯೇ ಹೊರತು ಅಭಿವೃದ್ಧಿ ಕಡೆಗೆ ಗಮನ ಹರಿಸಿಲ್ಲ. ಹಾಗಾಗಿ ಇತ್ತೀಚಿನ ವರ್ಷಗಳಲ್ಲಿ ಈ ಮೈದಾನ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ರಾತ್ರಿಯಾಯಿತೆಂದರೆ ಮದ್ಯ ವ್ಯಸನಿಗರ ಅಡ್ಡಾವಾಗುತ್ತಿದೆ. ಎಲ್ಲಿ ನೋಡಿದರೂ ಮದ್ಯದ ಬಾಟಿಲಿಗಳು ಹಾಗೂ ಬಾಟಲಿಯ ಚೂರುಗಳು ಕಾಣ ಸಿಗುತ್ತದೆ. ಇದರಿಂದ ಪ್ರತಿನಿತ್ಯ ಆಡಲು ಬರುವವರಿಗೆ ಹಾಗೂ ವಾಯವಿಹಾರಕ್ಕೆಂದು ಬರುವ ಜನರಿಗೆ ತೊಂದರೆಯಾಗುತ್ತಿದೆ. ಇಂಥ ಸುಂದರ ಮತ್ತು ವಿಶಾಲ ಮೈದಾನ ಅಭಿವೃದ್ಧಿ ಹೊಂದದಿರುವುದಕ್ಕೆ ಅನೇಕ ಕ್ರೀಡಾ ಪ್ರೇಮಿಗಳು, ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸಂಜೆ ಸಮಯದಲ್ಲಿ ವಾಯುವಿಹಾರಕ್ಕೆಂದು ಪ್ರತಿದಿನ ಬರುತ್ತಿದ್ದೆವು. ಆದರೆ ಈಗಿನ ಮೈದಾನದ ಸ್ಥಿತಿ ಗಮನಿಸಿದರೆ ಮಹಿಳೆಯರು ಹಾಗೂ ಮಕ್ಕಳು ಇತ್ತ ಬರದಂತಹ ಭಯದ ವಾತಾವರಣ ನಿರ್ಮಾಣವಾಗಿದೆ. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಿ.• ಶ್ರೀಲತಾ ಭಟ್,ಸ್ಥಳೀಯರು

ಮೈದಾನದ ಸುತ್ತಲೂ ರಾತ್ರಿಯ ಸಂದರ್ಭದಲ್ಲಿ ಕನಿಷ್ಠ ಎರಡು ಬಾರಿ ಪಹರೆಯನ್ನ ನಡೆಸುತ್ತೇವೆ. ಇಂತಹ ದುಷ್ಟ ಕೃತ್ಯ ಎಸಗುವವರು ಕಂಡು ಬಂದರೆ ಕಾನೂನಾತ್ಮಕವಾಗಿ ಕಠಿಣಕ್ರಮ ಕೈಗೊಳ್ಳತ್ತೇವೆ.• ಕುಮಟಾ ಪೊಲೀಸ್‌ ಇಲಾಖೆ

•ಕೆ. ದಿನೇಶ ಗಾಂವ್ಕರ

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.