ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಹಿರಿದು

ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ

Team Udayavani, Jul 2, 2019, 11:09 AM IST

press-meet

ಮಂಗಳೂರು: ಪ್ರಜಾಪ್ರಭುತ್ವ ಬಲಗೊಳಿಸಲು ಮತ್ತು ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಹಿರಿದು ಎಂದು ನಾಗಾಲ್ಯಾಂಡ್‌ ರಾಜ್ಯಪಾಲ ಪಿ.ಬಿ. ಆಚಾರ್ಯ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ಪುರಭವನದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಕೊಡುಗೆ ನೀಡುವ ಮೂಲಕ ದ.ಕ. ಮತ್ತು ಉಡುಪಿ ಜಿಲ್ಲೆಯ ಪತ್ರಕರ್ತರು ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸುತ್ತಿರುವುದು ಅಭಿನಂದನೀಯ. ಈಶಾನ್ಯ ರಾಜ್ಯಗಳ ಅಭಿವೃದ್ಧಿಯತ್ತ ಮಾಧ್ಯಮ ಗಮನಹರಿಸಬೇಕು. ಈ ರಾಜ್ಯಗಳಲ್ಲಿರುವ ಸಂಪನ್ಮೂಲ ಬಳಸಿಕೊಂಡು ರಾಜ್ಯಗಳ ಆರ್ಥಿಕ ಅಭಿವೃದ್ಧಿ ಮೂಲಕ ದೇಶದ ಅಭ್ಯುದಯದಲ್ಲಿ ಸಹಕರಿಸಬೆಕು ಎಂದರು.

ಸಮ್ಮೇಳನದ ಸ್ಮರಣ ಸಂಚಿಕೆ “ಸಮಾಚಾರ’ ಬಿಡುಗಡೆಗೊಳಿಸಿದ ಶಾಸಕ ಡಿ. ವೇದವ್ಯಾಸ ಕಾಮತ್‌ ಮಾತನಾಡಿ, ಕರಾವಳಿಯಲ್ಲಿ ಅಪೂರ್ವವಾದ ನೈಸ
ರ್ಗಿಕ ಸಂಪನ್ಮೂಲಗಳಿವೆ. ಇದನ್ನು ದೇಶಾದ್ಯಂತ ಮುಟ್ಟಿಸುವ ಕೆಲಸ ಬ್ರ್ಯಾಂಡ್‌ ಮಂಗಳೂರು ಆಂದೋಲನದ ಮೂಲಕ ನಡೆಯಲಿ ಎಂದರು.
ಸಸಿ ವಿತರಿಸಿ “ಹಸಿರು ಉಸಿರು’ ಕಾರ್ಯಕ್ರಮಕ್ಕೆ ಚಾಲನೆ ನೀಡಿದಶಾಸಕ ಡಾ| ವೈ. ಭರತ್‌ ಶೆಟ್ಟಿ, ಪರಿಸರವನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಿ ಹಸುರುಳಿಸುವ ಕೆಲಸಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು. ಜಲ ಸಂಪನ್ಮೂಲಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದಾಗಬೇಕು ಎಂದು ಆಶಿಸಿದರು.

ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆ ವಹಿಸಿದ್ದರು. ನಾಗಾಲ್ಯಾಂಡ್‌ ರಾಜ್ಯಪಾಲರ ಪತ್ನಿ ಕವಿತಾ ಆಚಾರ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಪೊಲೀಸ್‌ ಅಧೀಕ್ಷಕ ಲಕ್ಷ್ಮೀಪ್ರಸಾದ್‌, ಮಂಗಳೂರು ಪ್ರಸ್‌ ಕ್ಲಬ್‌ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ಕೆ. ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಕಂಪ್ಯೂಟರ್‌ ಕೊಡುಗೆ
ಪತ್ರಕರ್ತರ ಸಂಘದ ವತಿಯಿಂದ ಡಿಸೆಂಬರ್‌ನಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆಗೆ ಎಂಎಸ್‌ಇಝಡ್‌ ನೀಡಿದ ಕಂಪ್ಯೂಟರ್‌ನ ದಾಖಲೆಗಳನ್ನು ಪಿ.ಬಿ. ಆಚಾರ್ಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಎಂಎಸ್‌ಇಝಡ್‌ನ‌ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ಭಂಡಾರ್ಕರ್‌ ಹಾಜರಿದ್ದರು. ದ.ಕ. ಜಿಲ್ಲಾ ಪತ್ರಕರ್ತರ ಸಂಘದಅಧ್ಯಕ್ಷ ಶ್ರೀನಿವಾಸ ಇಂದಾಜೆ ಪ್ರಸ್ತಾವನೆಗೈದರು. ಸಮ್ಮೇಳನ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ ಸ್ವಾಗತಿಸಿದರು. ಸಂಘದ ಪ್ರ. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ ನಿರೂಪಿಸಿದರು.

ಸಮಾರೋಪ
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಈಶ್ವರ ದೈತೋಟ, ಪತ್ರಕರ್ತರಲ್ಲಿ ವೃತ್ತಿಪರತೆ, ಆತ್ಮಾವಲೋಕನ ಮಾಡಿಕೊಳ್ಳುವ ಗುಣ ಅತಿ ಅಗತ್ಯ. ಯಾವುದೇ ಗೊಂದಲವಿಲ್ಲದಂತೆ ಸತ್ಯ ಸಂಗತಿಯನ್ನು ಸಮಾಜದ ಮುಂದಿಡಬೇಕಾದರೆ ಪತ್ರಕರ್ತರು ಸತ್ಯಾನ್ವೇಷಕರಾಗಿರಬೇಕು. ಪಾರದರ್ಶಕ ಮತ್ತು ಸತ್ಯ, ನಿಖರ ಸುದ್ದಿ ನೀಡುವ ಗುಣವನ್ನು ಪ್ರಸ್ತುತ ಪತ್ರಕರ್ತರು ಬೆಳೆಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಹಂಪಿ ವಿವಿ ವಿಶ್ರಾಂತ ಕುಲಪತಿ ಪ್ರೊ| ಬಿ. ವಿವೇಕ್‌ ರೈ ಮಾತನಾಡಿ, ಪತ್ರಕರ್ತರು ಘಟನಾವಳಿಯ ಸೂಕ್ಷ್ಮತೆ ಗ್ರಹಿಸುವ ಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ನಗರ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಮಾತನಾಡಿ, ಪೊಲೀಸರ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆಗಳಿದ್ದು, ಪೊಲೀಸರ ಉತ್ತಮ ಕೆಲಸಗಳನ್ನು ಪತ್ರಿಕೆಗಳು ಸಮಾಜದ ಮುಂದೆ ತೆರೆದಿಡುವ ಯತ್ನ ಮಾಡಬೇಕು ಎಂದರು. ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಎಡಪಡಿತ್ತಾಯ, ಜಿಲ್ಲಾ ವಾರ್ತಾಧಿಕಾರಿ ಖಾದರ್‌ ಷಾ ಮುಖ್ಯ ಅತಿಥಿಗಳಾಗಿದ್ದರು. ಪತ್ರಕರ್ತ ಜಿತೇಂದ್ರ ಕುಂದೇಶ್ವರ ಸ್ವಾಗತಿಸಿದರು. ಭಾಸ್ಕರ್‌ ರೈ ಕಟ್ಟ ಸಮ್ಮಾನಿತರ ಪರಿಚಯ ನೀಡಿದರು. ಅನ್ಸಾರ್‌ ಇನೋಳಿ ಬಹುಮಾನಿತರ ವಿವರ ನೀಡಿದರು. ಲೋಕೇಶ್‌ ಪೆರ್ಲಂಪಾಡಿ ವಂದಿಸಿದರು. ಹರೀಶ್‌ ರೈ ನಿರೂಪಿಸಿದರು.

ಪತ್ರಿಕಾ ರಂಗದ ಹಿರಿಯರಿಗೆ ಸಮ್ಮಾನ
ಪತ್ರಿಕಾ ರಂಗದಲ್ಲಿ ಮೂರು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಉದಯವಾಣಿಯ ಮನೋಹರ ಪ್ರಸಾದ್‌, ಹಿಲರಿ ಕ್ರಾಸ್ತಾ, ಕೇಶವ ಕುಂದರ್‌, ಧನಂಜಯ ಮೂಡಬಿದಿರೆ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತರನ್ನು ಸಮ್ಮಾನಿಸಲಾಯಿತು.
ಮುಂಬಯಿಯಲ್ಲಿ ಪತ್ರಕರ್ತರಾಗಿರುವ ರೋನ್ಸ್‌ ಬಂಟ್ವಾಳ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಇದೇ ವೇಳೆ ಪತ್ರಕರ್ತರ ಸಂಘದಿಂದ ಚೊಚ್ಚಲ “ಬ್ರಾಂಡ್ ಮಂಗಳೂರು’ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಮುಹಮ್ಮದ್‌ ಆರಿಫ್‌ ಪಡುಬಿದ್ರಿ ಅವರಿಗೆ ಪ್ರದಾನ ಮಾಡಲಾಯಿತು.

ಪತ್ರಕರ್ತರಿಗೆ ನಿವೇಶನ
ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಪತ್ರಕರ್ತರಿಗೆ ನಿವೇಶನ ಒದಗಿಸುವ ವಿಚಾರವಾಗಿ ಸ್ಥಳ ಗುರುತಿಸಲು ದ.ಕ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರಿಗೆ ಸೂಚಿಸಲಾಗಿದೆ.
 - ಯು.ಟಿ. ಖಾದರ್‌, ಸಚಿವ

ಟಾಪ್ ನ್ಯೂಸ್

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.