ನಿಲ್ಲದ ಅಕ್ರಮ ಗಣಿಗಾರಿಕೆ, ಮರಳು ದಂಧೆ
Team Udayavani, Jul 2, 2019, 1:02 PM IST
ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಮಾತನಾಡಿದರು.
ತುಮಕೂರು: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಹಾಗೂ ಮರಳು ದಂಧೆಗೆ ಸಂಬಂಧಿಸಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಹಾಗೂ ಅರಣ್ಯ ಇಲಾಖೆಗಳಿಗೆ ಸೇರಿದ ಭೂಪ್ರದೇಶವನ್ನು ಕೂಡಲೇ ಜಂಟಿ ಸರ್ವೆಗೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಕಟ್ಟುನಿಟ್ಟಿನ ಕ್ರಮ: ಅನಧಿಕೃತವಾಗಿ ನಡೆಸುವ ಕ್ರಷರ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸ ಬೇಕು. ಗುತ್ತಿಗೆ ಪಡೆದ ಕ್ವಾರಿಗಳು ಸ್ಥಳಾಂತರ ಗೊಂಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ವಾಹನಗಳಲ್ಲಿ ಜಲ್ಲಿ, ಮರಳು, ಅಲಂಕಾರಿಕ ಶಿಲೆ ಮತ್ತಿತರ ಖನಿಜ ಹಾಗೂ ಗಣಿಗಾರಿಕೆ ಸರಕುಗಳನ್ನು ನಿಗದಿತ ಭಾರಕ್ಕಿಂತ ಅತಿಯಾಗಿ ಹೇರಿ ಸಾಗಿಸು ವಂತಿಲ್ಲ. ಗಣಿಬಾಧಿತ ಪ್ರದೇಶಗಳಿಗೆ ಸರ್ಕಾರ ಮೀಸಲಿಟ್ಟಿರುವ ಜಿಲ್ಲಾ ಗಣಿಗಾರಿಕೆ ನಿಧಿ ಅನುದಾನ ಖರ್ಚು ಮಾಡಬೇಕೆಂದು ಅಧಿಕಾರಿಗಳಿಗೆ ರಾಜಶೇಖರ ಪಾಟೀಲ್ ಸೂಚಿಸಿದರು.
ಶಾಸಕ ಡಿ.ಸಿ.ಗೌರಿಶಂಕರ್ ಮಾತನಾಡಿ, ಜಿಲ್ಲೆ ಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಮರಳು ದಂಧೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿಯೇ ಇರುವುದಿಲ್ಲ. ದೂರು ನೀಡಿದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ನೆಪ ಹೇಳದೆ ಪ್ರಕರಣ ದಾಖಲಿಸಿ: ದೂರಿನ ಕರೆಗಳಿಗೆ ಕೂಡಲೇ ಸ್ಪಂದಿಸಬೇಕು ಎಂದು ಈಗಾಗಲೇ ರಾಜ್ಯಮಟ್ಟದ ಸಭೆಯಲ್ಲಿ ಅಧಿಕಾರಿ ಗಳಿಗೆ ಸೂಚಿಸಿದ್ದರೂ ಸುಧಾರಣೆ ಕಾಣದಿರುವುದು ಬೇಸರ ತಂದಿದೆ. ಹೊಸದಾಗಿ ನೇಮಕವಾಗಿರುವ ಭೂ ವಿಜ್ಞಾನಿಗಳು ಸಿಬ್ಬಂದಿ ಕೊರತೆ, ವಾಹನ ಕೊರತೆ ಎಂದು ನೆಪ ಹೇಳದೆ ಗಣಿಕಾರಿಕೆಗೆ ಸಂಬಂಧಿಸಿ ಪ್ರಕರಣ ದಾಖಲಿಸಬೇಕು ಎಂದು ಸಚಿವರು ತಾಕೀತು ಮಾಡಿದರು.
ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ಮಾತ ನಾಡಿ, ಇನ್ನೊಂದು ವಾರದೊಳಗೆ ಕಂದಾಯ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವ ಪ್ರದೇಶ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಸಭೆಗೆ ತಿಳಿಸಿದರು.
ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪಂಕಜಾ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 64 ಕ್ರಷರ್‌ಗಳಿದ್ದು, ಎಲ್ಲ ಕ್ರಷರ್‌ಗಳು ಪರ ವಾನಗಿ ಪಡೆದು ಅಧಿಕೃತವಾಗಿ ಕಾರ್ಯನಿರ್ವಹಿ ಸುತ್ತಿವೆ. ಮರಳಿಗೆ ಬೇಡಿಕೆಯಿದ್ದರೂ ಇದಕ್ಕೆ ಪರ್ಯಾಯವಾಗಿರುವ ಎಂ-ಸ್ಯಾಂಡ್ ಬಳಕೆ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಯಾಗುತ್ತಿಲ್ಲ ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನವಂಶಿಕೃಷ್ಣ, ಉಪವಿಭಾಗಾಧಿಕಾರಿಗಳಾದ ಶಿವಕುಮಾರ್ ಹಾಗೂ ಪೂವಿತಾ, ಭೂವಿಜ್ಞಾನಿ ರೂಪ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಇಂಜಿನಿಯರ್ ವಿನಯ್ ಕುಮಾರ್, ಅರಣ್ಯ ಇಲಾಖೆಯ ಗಿರೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.