ನಸುಕಿನಲ್ಲೇ ಆಧಾರ್‌ ಕೇಂದ್ರ ಸುತ್ತ ಜನಸಂದಣಿ!

Team Udayavani, Jul 3, 2019, 3:00 AM IST

nasuki

ಎಚ್‌.ಡಿ.ಕೋಟೆ: ಅಧಾರ್‌ ಕಾರ್ಡ್‌ ನೋಂದಣಿ ಹಾಗೂ ತಿದ್ದುಪಡಿಗಾಗಿ ಪಟ್ಟಣದ ಅಂಚೆ ಕಚೇರಿಯ ಮುಂಭಾಗ ಪ್ರತಿದಿನವೂ ಬೆಳಗಿನ ಜಾವವೇ ಸಹಸ್ರಾರು ಮಂದಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೆಚ್ಚುವರಿ ಕೌಂಟರ್‌ ತೆರೆದು ಆಧಾರ್‌ ನೋಂದಣಿಗೆ ಅವಕಾಶ ಮಾಡಿಕೊಡಬೇಕಾಗಿದೆ.

ಆಧಾರ್‌ ತಿದ್ದುಪಡಿಗಾಗಿ ಅಂಚೆ ಕಚೇರಿಯಲ್ಲಿ ಎಲ್ಲರಿಗೂ ಟೋಕನ್‌ ವಿತರಿಸಲು ಅಂಚೆ ಕಚೇರಿಯ ಬಾಗಿಲು ತೆರೆಯಲು ಸಿಬ್ಬಂದಿ ಬೆಳಗ್ಗೆ 9 ಗಂಟೆಗೆ ಆಗಮಿಸುವಷ್ಟರಲ್ಲಿ ಟೋಕನ್‌ಗಾಗಿ ನಿಂತಿದ್ದ ಕ್ಯೂ ಹನುಮಂತನ ಬಾಲದಂತೆ ಬೆಳೆದು ದಿನಲೂ ಸುಮಾರು 300 ಮೀಟರ್‌ ನಷ್ಟು ಉದ್ದದ ಕ್ಯೂನಲ್ಲಿ ಜನರು ಜಮಾವಣೆಗೊಳ್ಳುತ್ತಿದ್ದಾರೆ.

ಸಂಚಾರ ವ್ಯತ್ಯಯ: ಪಟ್ಟಣದ ಮೊದಲ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಜನರು ಜಮಾವಣೆಗೊಳ್ಳುವುದರಿಂದ ಶಾಲಾ ವಾಹನಗಳು ಮತ್ತು ಸಾರಿಗೆ ಬಸ್‌ ಸಂಚರಿಸಲು ಹರಸಾಹಸ ಪಡುವಂತಾಗಿದೆ. ಟೋಕನ್‌ಗಾಗಿ ಬಂದವರ ದ್ವಿಚಕ್ರ ವಾಹನಗಳು ರಸ್ತೆಯುದ್ದಕ್ಕೂ ಗಂಟಗಟ್ಟಲೇ ನಿಲ್ಲುವುದರಿಂದ ಈ ಭಾಗದ ಶಾಲೆಗಳಿಗೆ ಬರುವ ಶಾಲೆಗಳ ಮಕ್ಕಳು ಹಾಗೂ ಪಾದಚಾರಿಗಳು ರಸ್ತೆ ಮಧ್ಯೆಯೇ ಸಂಚಾರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಮಕ್ಕಳ ಜತೆ ಆಗಮನ: ಇನ್ನೂ ಅಂಚೆ ಕಚೇರಿಯ ಆಧಾರ್‌ ಕೇಂದ್ರದಲ್ಲಿ ಪ್ರತಿದಿನ ಕ್ಯೂನಲ್ಲಿ ನಿಲ್ಲವ ಎಲ್ಲರಿಗೂ ಒಂದೇ ದಿನ ಟೋಕನ್‌ಗಳನ್ನು ನೀಡದೆ ದಿನಾಂಕಗಳನ್ನು ನಿಗದಿ ಮಾಡಿ ಟೋಕನ್‌ ವಿತರಿಸುತ್ತಿದ್ದಾರೆ. ಅದರೂ ತಾಲೂಕಿನ ವಿವಿಧ ಗ್ರಾಮಗಳ ಜನರು ದೈನಂದಿನ ಕೆಲಸ ಕಾರ್ಯಕ್ಕೂ ತೆರಳದೆ, ಮುಂಜಾನೆಯೇ ಬಂದು ಪಟ್ಟಣದ ಅಂಚೆ ಕಚೇರಿಯ ಮುಂಭಾಗ ಮಕ್ಕಳ ಜೊತೆಗೆ ಬಂದು ನಿಲ್ಲುತ್ತಿದ್ದಾರೆ.

ದಿನಕ್ಕೆ ಕನಿಷ್ಠ ನೋಂದಣಿ: ಆಗಸ್ಟ್‌ ತಿಂಗಳ ಅಂತ್ಯದವರೆಗೂ ದಿನಾಂಕವನ್ನು ಬರೆದು ಟೋಕನ್‌ಗಳನ್ನು ಈಗಾಗಲೇ ವಿತರಿಸಿದ್ದಾರೆ. ಅದರೂ ಇಲ್ಲಿ ಪ್ರತಿ ದಿನ ಕೇವಲ 15 ರಿಂದ 20 ಜನರಿಗೆ ಮಾತ್ರ ನೋಂದಣಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ತಾಲೂಕಿನ ಜನರು ತಾಲೂಕು ಆಡಳಿತ ಮತ್ತು ಇಲ್ಲಿನ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿರುವುದು ಸಾಮಾನ್ಯವಾಗಿದೆ.

ಇನ್ನಾದರೂ ಕ್ಷೇತ್ರದ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಆಧಾರ್‌ ತಿದ್ದುಪಡಿ ಹಾಗೂ ನೋಂದಣಿಗೆ ಹೆಚ್ಚುವರಿ ಕೌಂಟರ್‌ಗಳ‌ನ್ನು ತೆರೆದು ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸಾರ್ವಜನಿಕರ ಒತ್ತಾಯದಂತೆ ಇಲ್ಲಿ ಜಮಾಯಿಸಿರುವ ಜನರಿಗೆ ಟೋಕನ್‌ ವಿತರಿಸಿದ್ದೇವೆ. ಪ್ರತಿದಿನವೂ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ನೋಂದಣಿ ಮತ್ತು ತಿದ್ದುಪಡಿ ಮಾಡಲು ಕ್ರಮ ವಹಿಸುತ್ತೇವೆ. ಇನ್ನುಳಿದವರು ಟೋಕನ್‌ನಲ್ಲಿ ನಮೂದಿಸಿರುವ ದಿನಾಂಕದ ದಿನದಂದು ಬರಬೇಕು.
-ಶ್ರೀಕಾಂತ್‌, ಅಂಚೆ ಕಚೇರಿ ವ್ಯವಸ್ಥಾಪಕ

ತಾಲೂಕು ಕೇಂದ್ರದಲ್ಲಿ ಆಧಾರ್‌ ಮೇಳವನ್ನು ನಡೆಸಿ ತಾಲೂಕಿನ ಸಾಕಷ್ಟು ಜನರು ಒಂದೇ ಬಾರಿಗೆ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇನೆ.
-ಮಂಜುನಾಥ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

yoga-nara

Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ

Untitled-1

Mysuru: ಕೆಆರ್‌ಎಸ್‌ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್‌

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.