ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆಗೆ ನಿರ್ಣಯ
ಜು. 10ರೊಳಗೆ ಅಧ್ಯಯನ ವರದಿ ನೀಡಲು ಡಿಸಿ ಸೂಚನೆ
Team Udayavani, Jul 3, 2019, 2:35 PM IST
ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್‌ನಿಂದ ಕೆಎಂಎಫ್ ಡೈರಿ ಕ್ರಾಸ್‌ವರೆಗಿನ ರಸ್ತೆಯಲ್ಲಿ ಸುಸ್ಥಿರಸಂಚಾರ ವ್ಯವಸ್ಥೆ ರೂಪಿಸಲು ನಿರ್ಧರಿ ಸಲಾಗಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಇಲಾಖೆ, ನಗರಸಭೆ, ಮೆಸ್ಕಾಂ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳು ತಮ್ಮ ಅಗತ್ಯಗಳ ಬಗ್ಗೆ ಜು. 10ರೊಳಗೆ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆಗೆ ಯೋಜನೆ ರೂಪಿಸುವ ಮುನ್ನ ಈ ಪ್ರದೇಶವನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಬೇಕಿದೆ. ಯಾವ ಪ್ರದೇಶದಲ್ಲಿ ಏನು ಅಗತ್ಯವಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಅದಕ್ಕೆ ತಕ್ಕಂತೆ ಯೋಜನೆಯನ್ನು ರೂಪಿಸಬೇಕಿದೆ ಎಂದು ಹೇಳಿದರು.
ಫುಟ್‌ಪಾತ್, ಬಸ್‌ಬೇ ಇಂಟರ್‌ಲಾಕ್ ಅಳವಡಿಸಿ ಪಾದಚಾರಿ ಮಾರ್ಗ ನಿರ್ಮಾಣ ಮಾಡಬೇಕು, ಎಂಐಟಿ ಬಳಿ ಬಸ್ ನಿಲ್ದಾಣದ ಬದಲು ಬಸ್ ಬೇ ವ್ಯವಸ್ಥೆ ಮಾಡಬೇಕು. ಫುಟ್‌ಪಾತ್‌ನಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆ ತಪ್ಪಿಸಲು ರೇಲಿಂಗ್ ನಿರ್ಮಾಣ ಮಾಡಬೇಕು. ಈ ಬಗ್ಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಕೂಲಂಕಷ ಪರಿಶೀಲಿಸಬೇಕು ಎಂದರು.
ಮಾಹೆಗೆ ಜವಾಬ್ದಾರಿ
ಸುಸ್ಥಿರ ಸಂಚಾರ ವ್ಯವಸ್ಥೆಯನ್ನು ಹೊಸ ತಂತ್ರಜ್ಞಾನದೊಂದಿಗೆ ಮುಂದಿನ ಭವಿಷ್ಯದ ದೃಷ್ಟಿಯಿಂದ ದೀರ್ಘಕಾಲೀನ ಮಾದರಿ ಯೋಜನೆಯನ್ನಾಗಿ ರೂಪಿಸಬೇಕಿದೆ. ಈ ಜವಾಬ್ದಾರಿಯನ್ನು ಮಣಿಪಾಲ ಮಾಹೆಯ (ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್) ಆರ್ಕಿಟೆಕ್ ವಿಭಾಗಕ್ಕೆ ನೀಡಿ ಶೀಘ್ರದಲ್ಲಿ ನೀಲನಕ್ಷೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಬೇಕು. ರಸ್ತೆ ಅಗಲೀಕರಣ ಸಂದರ್ಭ ಸ್ಥಳಾಂತರ ಮಾಡುವ ವಿದ್ಯುತ್ ಕಂಬಗಳನ್ನು ಪ್ರಸ್ತುತ ಇರುವ ಗುತ್ತಿಗೆದಾರರಿಂದಲೇ ಮರು ನಿರ್ಮಾಣ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಮಣಿಪಾಲ ಆರ್ಕಿಟೆಕ್ ವಿಭಾಗದ ಮುಖ್ಯಸ್ಥೆ ದೀಪಿಕಾ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.