ಅಂಬೇಡ್ಕರ್‌ ಚಿಂತನೆ ಅಳವಡಿಸಿಕೊಳ್ಳಲು ಸಲಹೆ

ಜನತೆಗೆ ಸಲಹೆ ನೀಡಿದ ದಲಿತ ಕವಿ ಸಿದ್ದಲಿಂಗಯ್ಯ, ಅರಳಾಳು ಗ್ರಾಮದಲ್ಲಿ ಭೀಮರಾವ್‌ ಟ್ರಸ್ಟ್‌ ಉದ್ಘಾಟನೆ

Team Udayavani, Jul 3, 2019, 3:40 PM IST

rn-tdy-3..

ಅರಳಾಳು ಗ್ರಾಮದಲ್ಲಿ ಭೀಮರಾವ್‌ ಟ್ರಸ್ಟ್‌ ಉದ್ಘಾಟನೆಯಲ್ಲಿ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ್‌, ಪ್ರೇಮ್‌ಕುಮಾರ್‌, ಮುನಿಚಿಕ್ಕಯ್ಯ ಇದ್ದರು.

ಕನಕಪುರ: ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ರ ಹೆಸರಿನಲ್ಲಿ ಪ್ರತಿದಿನ ಸಾವಿರಾರು ಸಂಘ-ಸಂಸ್ಥೆಗಳು, ಟ್ರಸ್ಟ್‌ಗಳು, ಮಹಿಳಾ ಸಂಘಗಳು ಹುಟ್ಟುತ್ತಿವೆ. ಆದರೆ, ಬಹುತೇಕರು ಅಂಬೇಡ್ಕರ್‌ರ ಚಿಂತನೆಗಳನ್ನು ಅಳವಡಿಸಿಕೊಳ್ಳುತ್ತಿಲ್ಲ ಎಂದು ದಲಿತ ಕವಿ ಡಾ.ಸಿದ್ದಲಿಂಗಯ್ಯ ವಿಷಾದಿಸಿದರು.

ತಾಲೂಕಿನ ಕಸಬಾ ಅರಳಾಳು ಗ್ರಾಮದಲ್ಲಿ ಭೀಮರಾವ್‌ ಟ್ರಸ್ಟ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಹುತೇಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಡಾ.ಬಿ.ಆರ್‌.ಅಂಬೇಡ್ಕರ್‌ರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ವಿಚಾರ ಕ್ರಾಂತಿಗಳನ್ನು ಮೈಗೂಡಿಸಿ ಕೊಳ್ಳದೇ ವಿಜೃಂಭಣೆ ಜಯಂತಿ ಆಚರಣೆಗಳಲ್ಲಿ ತೊಡಗಿಸಿಕೊಳ್ಳುತ್ತಿವೆ. ಇದರಿಂದ ಅಂಬೇಡ್ಕರ್‌ರ ತತ್ವಸಿದ್ಧಾಂತಗಳು ಏಳ್ಗೆ ಹೊಂದುವುದಿಲ್ಲ ಎಂದರು.

ದಲಿತ, ಹಿಂದುಳಿದವರ, ಅಲ್ಪಸಂಖ್ಯಾತರ ವರ್ಗದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿದ್ದಾರೆ. ಅಸ್ಪೃಶ್ಯತೆ, ಅನಾಗರಿಕತೆ ತೊಡೆದು ಹಾಕುವ ನಿಟ್ಟಿನಲ್ಲಿ ಉತ್ತಮ ಸಮಾಜ ಕಟ್ಟುವ ಅಗತ್ಯವಿದೆ. ಇಂತಹ ಸಾಮಾಜಿಕ ಬದಲಾವಣೆಯನ್ನು ತರುವ ರಾಷ್ಟ್ರೀಯ ಪಕ್ಷದ ನಾಯಕರು ಇತ್ತ ಗಮನಹರಿಸದೇ ವೈಯಕ್ತಿಕ ಹಿತಾಸಕ್ತಿಗೆ ಜನರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆಂದರು.

ಅಭಿವೃದ್ಧಿ ಮಾಡಿ:ಹೊಸ ಸಂಘ-ಸಂಸ್ಥೆಗಳು ಹುಟ್ಟುವುದು ಕೊನೆಗೊಳ್ಳುವುದು ಸಾಮಾನ್ಯ. ಹುಟ್ಟಿದ ಸಂಘಗಳು ತಾವಿರುವ ಸ್ಥಳದ ಜನರ ಪ್ರಗತಿಗಾಗಿ ಮತ್ತು ಅಲ್ಲಿನ ಅಭಿವೃದ್ಧಿಗಾಗಿ ಜನರನ್ನು ಜಾಗೃತಗೊಳಿಸುವ ಮೂಲಕ ಹೋರಾಟದ ಮೂಲಕ ಅವರಿಗೆ ಸರ್ಕಾರಿ ಸವಲತ್ತು ಕೊಡಿಸುವಂತಹ ಕೆಲಸವನ್ನು ಮಾಡಿದಾಗ ಸಂಘ ಸ್ಥಾಪನೆಯಾಗಿದ್ದಕ್ಕೆ ಒಂದು ಅರ್ಥ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹೋರಾಟಮನೋಭಾವವಿರಲಿ:ರಾಜ್ಯ ಬಿಎಸ್‌ಪಿ ಕಾರ್ಯದರ್ಶಿ ಮಲ್ಲಿಕಾ ರ್ಜುನ್‌, ಕಳೆದ 20 ವರ್ಷಗಳ ಹಿಂದೆ ಅರಳಾಳು ಗ್ರಾಮದಲ್ಲಿ ಜಮೀನೊಂದರ ವಿಚಾರದಲ್ಲಿ ಉಂಟಾದ 2 ಕೋಮುಗಳ ಘರ್ಷಣೆಯಲ್ಲಿ ಅಮಾಯಕ ಮುಗ್ಧ ದಲಿತರಾದ 98 ಮಂದಿಯನ್ನು ಸುಳ್ಳು ಪ್ರಕರಣ ದಾಖಲಿಸಿ ಜೈಲಿಗೆ ಹಾಕಲಾಗಿತ್ತು. ಅಂದು ಪರಿಷತ್‌ ಸದಸ್ಯರಾಗಿದ್ದ ಸಿದ್ದಲಿಂಗಯ್ಯ ನವರು ದಲಿತರ ಪರ ನಿಂತು ರಾಜ್ಯ ಮತ್ತು ಕೇಂದ್ರ ಸರ್ಕಾರದ ಗಮನ ಸೆಳೆದು ದಲಿತರ ಪರಿಸ್ಥಿತಿಯನ್ನು ಗಮನಕ್ಕೆ ತಂದಾಗ 24 ಗಂಟೆಯೊಳಗಾಗಿ ಅಂದಿನ ಸರ್ಕಾರ ಎಲ್ಲರನ್ನೂ ಬಿಡುಗಡೆಗೊಳಿಸಿದ ಕೀರ್ತಿ ಡಾ.ಸಿದ್ದಲಿಂಗಯ್ಯ ನವರಿಗೆ ಸಲ್ಲುತ್ತದೆ. ಇಂತಹ ನೂರಾರು ಹೋರಾಟಗಳನ್ನು ಮಾಡುವ ಮೂಲಕ ದೀನ, ದಲಿತರ, ದುರ್ಬಲರ ದನಿಯಾಗಿರುವ ಇವರ ಹೋರಾಟ ಇನ್ನೂ ಸಮಾಜಕ್ಕೆ ಬೇಕಾಗಿದೆ ಎಂದರು. ಈ ವೇಳೆ ವಿವಿಧ ಸ್ಥರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯ ರನ್ನು ಸನ್ಮಾನಿಸಲಾಯಿತು. ಆಕಾಶ್‌, ಶಿವರಾಮ್‌, ರಮೇಶ್‌ ಮತ್ತವರ ತಂಡ ಅಂಬೇಡ್ಕರ್‌ರ ಕ್ರಾಂತಿಗೀತೆ ಹಾಡಿದರು. ಶಿವನಹಳ್ಳಿ ಗ್ರಾಪಂ ಸದಸ್ಯ ಪ್ರೇಮ್‌ಕುಮಾರ್‌, ವಕೀಲ ಮುನಿಚಿಕ್ಕಯ್ಯ, ಅಂಬೇಡ್ಕರ್‌ ಕಾಲೇಜಿನ ಎ.ಪಿ.ಕುಮಾರ್‌, ಶಿವಲಿಂ ಗಯ್ಯ, ಟ್ರಸ್ಟ್‌ ಪದಾಧಿಕಾರಿಗಳಾದ ಕುಮಾರ್‌, ಆನಂದ್‌, ಪ್ರತಾಪ್‌, ರಾಜು, ಮಹದೇವ, ಭೀಮಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.