ದಕ್ಷಿಣ ಕನ್ನಡ: ಮಲೇರಿಯಾ, ಡೆಂಗ್ಯೂ ನಿಯಂತ್ರಣಕ್ಕೆ ಶಿಬಿರ
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ
Team Udayavani, Jul 3, 2019, 3:38 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳು ವರದಿಯಾಗುವ ಪ್ರದೇಶದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಿ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಆರ್. ಸೆಲ್ವಮಣಿ ತಿಳಿಸಿದರು.
ದ.ಕ. ಜಿ.ಪಂ.ನ 16ನೇ ಸಾಮಾನ್ಯ ಸಭೆಯ ಮುಂದುವರಿಕಾ ಸಭೆಯು ಮಂಗಳವಾರ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ಜರಗಿತು. ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಹಾವಳಿ ಕುರಿತಂತೆ ಜಿ.ಪಂ. ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಜಿ.ಪಂ. ಸಿಇಒ ಅವರು ಈಗಾಗಲೇ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮಲೇರಿಯಾ, ಡೆಂಗ್ಯೂ ವರದಿಯಾಗುವ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆ ಹಾಗೂ ಖಾಸಗಿ ವೈದ್ಯಕೀಯ ಆಸ್ಪತ್ರೆಗಳ ಸಹಯೋಗ ದೊಂದಿಗೆ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುವುದು ಎಂದರು.
ರೋಗ ನಿಯಂತ್ರಣದ ಬಗ್ಗೆ ಆರೋಗ್ಯ ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಅವರು, ಕಳೆದ ಸಾಲಿಗೆ ಹೋಲಿಸಿದರೆ ಮಲೇರಿಯಾ ಇಳಿಮುಖವಾಗಿದೆ. ಮಂಗಳೂರು ನಗರದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅಭಿನಂದನೆ
ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದ.ಕ. ಜಿಲ್ಲೆ ರ್‍ಯಾಂಕಿಂಗ್‌ನಲ್ಲಿ 7 ನೇ ಸ್ಥಾನಕ್ಕೆ ಕುಸಿದರೂ ಒಟ್ಟು ಉತ್ತೀರ್ಣತೆಯಲ್ಲಿ ಉತ್ತಮ ಸಾಧನೆ ಮಾಡಿದ್ದು ಇದಕ್ಕೆ ಜಿಲ್ಲೆಯ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನೀಯರು ಎಂದು ಸದಸ್ಯ ಸಾಹುಲ್ ಹಮೀದ್ ಹೇಳಿದರು. ಮಮತಾ ಗಟ್ಟಿ , ತುಂಗಪ್ಪ ಬಂಗೇರ ಮೊದಲಾದವರು ಸಹಮತ ವ್ಯಕ್ತಪಡಿಸಿದರು.
ಫಲಿತಾಂಶದ ವಿವರ ನೀಡಿದ ಡಿಡಿಪಿಐ ವೈ. ಶಿವರಾಮಯ್ಯ ಅವರು, ದ.ಕ. ಜಿಲ್ಲೆ ಎಸ್‌ಎಸ್‌ಎಲ್‌ಸಿಯಲ್ಲಿ 2017ರಲ್ಲಿ ಶೇ. 82.39, 2018ರಲ್ಲಿ ಶೇ. 85.56 ಹಾಗೂ 2019ರಲ್ಲಿ ಶೇ. 86.85 ಫಲಿತಾಂಶ ದಾಖಲಿಸಿದೆ. ಮರು ಮಾಪನದ ಬಳಿಕ ಇದು ಶೇ. 87.88ಕ್ಕೇರಿದೆ. ವರ್ಷದಿಂದ ವರ್ಷಕ್ಕೆ ಒಟ್ಟು ಉತ್ತೀರ್ಣದಲ್ಲಿ ಹೆಚ್ಚಳವಾಗಿದೆ. ಇದಲ್ಲದೆ ಮರುಮೌಲ್ಯ ಮಾಪನದ ಬಳಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯದಲ್ಲಿ ಮೊದಲ ಮೂರು ಸ್ಥಾನಗಳನ್ನು ಪಡೆದಿದ್ದಾರೆ. ಶೇ. 100 ಫಲಿತಾಂಶದಲ್ಲೂ ಜಿಲ್ಲೆ ಉತ್ತಮ ಸಾಧನೆ ತೋರಿದೆ ಎಂದರು.
43 ಶಾಲೆಗಳಲ್ಲಿ ಆಂಗ್ಲಮಾಧ್ಯಮ
ಜಿಲ್ಲೆಯ 43 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲಾಗಿದ್ದು ಹೆಚ್ಚುವರಿಯಾಗಿ 14 ಶಾಲೆಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಡಿಡಿಪಿಐ ತಿಳಿಸಿದರು.
ಕ್ರೀಡಾ ಇಲಾಖೆಯ ಅನುದಾನ ವಿನಿಯೋಗ, ಕಾರ್ಯನಿರ್ವಹಣೆ ಬಗ್ಗೆ ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಸದಸ್ಯೆ ಆಶಾ ತಿಮ್ಮಪ್ಪ, ಸುಚರಿತ ಶೆಟ್ಟಿ , ಹರೀಶ್ ಕಂಜಿಪಿಲಿ ಅಸಮಾಧಾನ ವ್ಯಕ್ತಪಡಿಸಿ ಈ ಬಗ್ಗೆ ಇಲಾಖೆ ಸಮಗ್ರ ವಿವರ ನೀಡಬೇಕು ಎಂದರು. ಇದಕ್ಕೆ ಉತ್ತರಿಸಿದ ಜಿ.ಪಂ. ಸಿಇಒ, ತಾಲೂಕು ಕ್ರೀಡಾ ಸಮಿತಿಗಳ ಸಭೆಯನ್ನು ಜು. 17ರೊಳಗೆ ನಡೆಸಿ ವರದಿ ನೀಡಬೇಕು ಎಂದರು.
ಪ್ರತಿಧ್ವನಿಸಿದ ಪುತ್ತೂರು ಪ್ರಕರಣ
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಪುತ್ತೂರಿನಲ್ಲಿ ಸರಕಾರಿ ಆಸ್ಪತ್ರೆಯ ವೈದ್ಯೆಯೊಂದಿಗೆ ದುರ್ವರ್ತನೆ ತೋರಿ ಕರ್ತವ್ಯಕ್ಕೆ ಅಡ್ಡಿಪಡಿಸಿದರೆನ್ನಲಾದ ಪ್ರಕರಣ ಜಿ.ಪಂ. ಸಭೆಯಲ್ಲೂ ಪ್ರತಿಧ್ವನಿಸಿತು. ವಿಷಯ ಪ್ರಸ್ತಾವಿಸಿದ ಸದಸ್ಯ ಎಂ.ಎಸ್. ಮಹಮ್ಮದ್ ಅವರು ಸರಕಾರಿ ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕುರಿತು ಜಿ.ಪಂ. ಅಧ್ಯಕ್ಷರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ವೈದ್ಯರಿಂದಲೂ ಪ್ರತಿಭಟನೆ ವ್ಯಕ್ತವಾಗಿದೆ. ಈ ಬಗ್ಗೆ ಜಿ.ಪಂ. ಅಧ್ಯಕ್ಷರು ಸತ್ಯಾಂಶ ಸದನಕ್ಕೆ ತಿಳಿಸಬೇಕು ಎಂದರು
ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯನ್ನು ಭೇಟಿಯಾಗಲು ಆಸ್ಪತ್ರೆಗೆ ತೆರಳಿದ್ದೆ. ವೈದ್ಯರಿಂದ ಮಾಹಿತಿ ಕೋರಿದಾಗ ಸರಿಯಾದ ಅವರಿಂದ ಸ್ಪಂದನೆ ದೊರಕಿಲ್ಲ ಎಂದರು. ಎಫ್‌ಐಆರ್ ದಾಖಲಾಗಿರುವುದರಿಂದ ಅಧ್ಯಕ್ಷರು ಸಭೆಯ ಅಧ್ಯಕ್ಷತೆ ವಹಿಸಬಹುದೇ ಎಂದು ಸಾಹುಲ್ ಹಮೀದ್ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಿ.ಪಂ. ಸಿಇಒ ಈ ಬಗ್ಗೆ ಕರ್ನಾಟಕ ಪಂಚಾಯತ್‌ರಾಜ್ ಕಾಯ್ದೆಯಲ್ಲಿ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.