ಅಂಗವಿಕಲರ ಅನುದಾನ ಸಮರ್ಪಕ ಬಳಸಿ

ಉದ್ಯೋಗ ಖಾತ್ರಿಯಲ್ಲಿ ಅಂಗವಿಕಲರಿಗೆ ಕನಿಷ್ಠ 100 ದಿನ ಕೆಲಸ ದೊರೆಯಲಿ

Team Udayavani, Jul 4, 2019, 10:42 AM IST

04-July-9

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ವಿಜಯಪುರ: ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂಗವಿಕಲ ಫಲಾನುಭವಿಗಳಿಗಾಗಿ ಮೀಸಲಿಡಲಾದ ಶೇ. 5ರ ಅನುದಾನವನ್ನು ಕ್ರಿಯಾಯೋಜನೆ ಅನ್ವಯ ಸಮರ್ಪಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ವೈ.ಎಸ್‌ .ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಉದ್ದೇಶ ಮತ್ತು ಕಾರ್ಯಸೂಚಿ ಹಾಗೂ ಅಂಗವಿಕಲರಿಗೆ ನೀಡಿದ ಸೌಲಭ್ಯ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಸರ್ಕಾರದ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ಲಭ್ಯವಿರುವ ಶೇ. 5ರ ಅನುದಾನ ಶೇ. ನೂರರಷ್ಟು ಬಳಕೆಯಾಗುವಂತೆ ನೋಡಿಕೊಳ್ಳುವ ಅವಶ್ಯಕತೆ ಇದೆ. ಆಯಾ ಇಲಾಖೆಗಳ ಅಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಈ ಅನುದಾನ ಸಮರ್ಪಕವಾಗಿ ಬಳಸುವ ಜೊತೆಗೆ ಅಂಗವಿಕಲ ಪುನರ್ವಸತಿಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದರು.

ಜಿಲ್ಲೆಯ ವಿವಿಧ ಶಾಲಾ-ಕಾಲೇಜಗಳು, ಆಸ್ಪತ್ರೆಗಳು, ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರ ಅನುಕೂಲಕ್ಕಾಗಿ ರ್‍ಯಾಂಪ್‌ಗ್ಳು ವೈಜ್ಞಾನಿಕ ರೀತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. 6 ವರ್ಷದೊಳಗಿನ ಅಂಗವಿಕಲ ಮಕ್ಕಳಿಗೆ ಜಿಲ್ಲಾ ಆಸ್ಪತ್ರೆಯಿಂದ ನೀಡಲಾಗುವ ಗುರುತಿನ ಚೀಟಿಯನ್ನು ತಾತ್ಕಾಲಿಕವಾಗಿ ನೀಡದೇ ಶಾಶ್ವತವಾಗಿ ನೀಡುವ ಕುರಿತು ಆರೋಗ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ 2018-19ನೇ ಸಾಲಿನ ಸಾಧನ-ಸಲಕರಣೆಗಳನ್ನು ಅರ್ಹ ಅಂಗವಿಕಲ ಫಲಾನುಭವಿಗಳಿಗೆ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಅದರಂತೆ ಜಿಲ್ಲೆಯ ಎಲ್ಲ ತಾಪಂ, ತಹಶೀಲ್ದಾರ್‌ರು ತ್ತೈ ಮಾಸಿಕ ಸಭೆಗಳನ್ನು ತಪ್ಪದೇ ನಡೆಸುವ ಮೂಲಕ ಅಂಗವಿಕಲರ ಕುಂದು-ಕೊರತೆಗಳನ್ನು ನಡೆಸುವಂತೆ ಸೂಚಿಲಾಗುವುದು ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿರುವ ಅಂಗವಿಕಲ ಫಲಾನುಭವಿಗಳಿಗೆ ಅವರ ಅಂಗವಿಕಲತೆ ಪ್ರಮಾಣಕ್ಕೆ ತಕ್ಕಂತೆ ಕನಿಷ್ಠ 100 ದಿನಗಳಿಗೆ ಕೆಲಸ ದೊರೆಯುವಂತೆ ನೋಡಿಕೊಳ್ಳಬೇಕು. ಎಲ್ಲ ಪ್ರಮಾಣದ ಅಂಗವಿಕಲರ ಅನುಕೂಲಕ್ಕಾಗಿ ಫಿಜಿಯೋಥೆರಫಿ ಸಂಸ್ಥೆ ಲಭ್ಯವಿದ್ದು, ಮೆದುಳುವಾತ ಮಕ್ಕಳಿಗೆ ಹಾಗೂ ಬುದ್ಧಿಮಾಂಧ್ಯ ಮಕ್ಕಳ ನೆರವಿಗಾಗಿ ಈಗಾಗಲೇ ನಿವೇಶನ ಲಭ್ಯವಿದ್ದು ಸುಸಜ್ಜಿತ ಫಿಜಿಯೋಥೆರಪಿ ಕೇಂದ್ರದ ಜೊತೆಗೆ ಅವಶ್ಯಕ ಸಾಧನ-ಸಲಕರಣೆಗಳನ್ನು ಪೂರೈಕೆಗೆ ಕಳೆದ ಸಾಲಿನ ಮೂರು ಲಕ್ಷ ರೂ. ಬಳಸುವಂತೆ ತಿಳಿಸಿದರು.

ಅಂಗವಿಕಲ ಮಕ್ಕಳ ಅನುಕೂಲಕ್ಕಾಗಿ ಸಮನ್ವಯ ಶಿಕ್ಷಣ ದೊರಕಿಸಲಾಗುತ್ತಿದ್ದು, ಸರ್ಕಾರದ ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈಗಾಗಲೇ ಸರ್ಕಾರದ ನಿರ್ದೇಶನದಂತೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸುವ ಜವಾಬ್ದಾರಿ ಜಿಲ್ಲಾ ಸಮಿತಿ ಹೊಂದಿದ್ದು, ಸರ್ಕಾರದ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯೋಜನೆಗಳ ಲಾಭವನ್ನು ಫಲಾನುಭವಿಗಳಿಗೆ ದೊರಕಿಸುವ ಜೊತೆಗೆ ಗುಣಮಟ್ಟದ ಸಾಧನಾ ಸಲಕರಣೆಗಳು ದೊರಕಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರ ಉಪನಿರ್ದೇಶಕ ಸಿ.ಬಿ. ಕುಂಬಾರ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಡಾ| ಎಂ.ಸಿ. ಯಡವಣ್ಣವರ, ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಅಧಿಕಾರಿ ವಿ.ಜಿ. ಉಪಾಧ್ಯೆ, ಎಪಿಡಿ ಸಂಚಾಲಕ ಗುರುಶಾಂತ ಹಿರೇಮಠ, ಅಂಗವಿಕಲರ ಪ್ರತಿನಿಧಿ ಮಲ್ಲಿಕಾರ್ಜುನ ಉಮರಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ| ರಾಜೇಶ್ವರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.