2 ಲಕ್ಷ ರೈತರಿಗೆ ಕಿಸಾನ್‌ ಸಮ್ಮಾನ್‌

ಈವರೆಗೆ 1.82 ಲಕ್ಷ ರೈತರಿಂದ ಮಾಹಿತಿ ಸಂಗ್ರಹ•33000 ರೈತರಿಗೆ ಮೊದಲ ಕಂತು ಜಮೆ

Team Udayavani, Jul 4, 2019, 1:00 PM IST

04-July-27

ಎಚ್.ಕೆ. ನಟರಾಜ
ಹಾವೇರಿ:
ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿಯಡಿ ರೈತರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ಪರಿಷ್ಕೃತ ಯೋಜನೆಯಿಂದ ಫಲಾನುಭವಿ ರೈತರ ಸಂಖ್ಯೆ 1.58 ಲಕ್ಷದಿಂದ ಎರಡು ಲಕ್ಷಕ್ಕೆ ಏರಿದ್ದು ರೈತರಿಂದ ಮಾಹಿತಿ, ದಾಖಲೆ ಸಂಗ್ರಹ ಪ್ರಗತಿ ಶೇ. 80ರಷ್ಟಾಗಿದೆ.

ಈ ಯೋಜನೆಯಿಂದ ಲಾಭ ಪಡೆಯಬಹುದಾದ ರೈತರ ಸಂಖ್ಯೆ ಎರಡು ಲಕ್ಷದಷ್ಟಿದ್ದು, ಇದರಲ್ಲಿ ಈಗಾಗಲೇ 33,000 ರೈತರು ಮೊದಲ ಕಂತಾಗಿ ತಲಾ ಎರಡು ಸಾವಿರ ರೂ. ಪಡೆದುಕೊಂಡಿದ್ದಾರೆ.

ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿದ ರೈತರಿಗೆ ಕೇಂದ್ರ ಸರಕಾರದ ಕಿಸಾನ್‌ ಸಮ್ಮಾನ್‌ ಯೋಜನೆಯ ವಾರ್ಷಿಕ 6 ಸಾವಿರ ರೂ. ಹಣ ಮೂರು ಕಂತುಗಳಲ್ಲಿ ನೇರ ಖಾತೆಗೆ ಜಮೆಯಾಗಲಿದೆ.

ಈ ಮೊದಲು ಕೇಂದ್ರ ಸರಕಾರ ದೇಶದ ಸಣ್ಣ ಹಾಗೂ ಅತಿಸಣ್ಣ ರೈತರ ಬ್ಯಾಂಕ್‌ ಖಾತೆಗೆ ವಾರ್ಷಿಕ 6 ಸಾವಿರ ರೂ.ಗಳನ್ನು ಜಮೆ ಮಾಡುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಿತ್ತು. ಈ ಯೋಜನೆಯಂತೆ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದ್ದಾಗಲೇ ಲೋಕಸಭೆ ಚುನಾವಣೆ ಘೋಷಣೆಯಾಯಿತು. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆಯನ್ನು ಸ್ಥಗಿತಗೊಳಿ ಸಲಾಗಿತ್ತು. ಚುನಾವಣೆ ನಂತರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವೇ ಮರಳಿ ಅಧಿಕಾರಕ್ಕೆ ಬಂದ ತಕ್ಷಣ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ದೇಶದ ಎಲ್ಲ ರೈತರಿಗೂ ವಿಸ್ತರಿಸಿ, ಘೋಷಣೆ ಮಾಡಿತು.

ಈ ಮೊದಲು ಸಣ್ಣ, ಅತಿ ಸಣ್ಣ ರೈತರನ್ನಷ್ಟೇ ಯೋಜನೆಗೆ ಒಳಪಡಿಸಿದ್ದಾಗ ಜಿಲ್ಲೆಯಲ್ಲಿ 1.58 ಲಕ್ಷ ರೈತರಿಗಷ್ಟೇ ಈ ಯೋಜನೆಯ ಪ್ರಯೋಜನ ಲಭಿಸುತ್ತಿತ್ತು. ಆದರೀಗ ಎಲ್ಲ ರೈತರಿಗೂ ಯೋಜನೆ ವಿಸ್ತರಣೆಗೊಂಡಿದ್ದರಿಂದ ಜಿಲ್ಲೆಯ ಒಟ್ಟು 2 ಲಕ್ಷ ರೈತರು ಯೋಜನೆ ಪ್ರಯೋಜನ ಪಡೆಯಲಿದ್ದಾರೆ.

ಶೇ. 80ರಷ್ಟು ಪ್ರಗತಿ: ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ರೈತರ ಮಾಹಿತಿ ಸಂಗ್ರಹಿಸಿ, ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡುವ ಪ್ರಕ್ರಿಯೆಯಲ್ಲಿ ನಿರತರಾಗಿದ್ದಾರೆ. ಈವರೆಗೆ 1.82ಲಕ್ಷ ರೈತರ ಮಾಹಿತಿ, ದಾಖಲೆ ಅಪ್‌ಲೊಡ್‌ ಆಗಿದ್ದು ಇನ್ನೂ ಸರಾಸರಿ 20 ಸಾವಿರ ರೈತರ ಮಾಹಿತಿ, ದಾಖಲೆ ಅಪ್‌ಲೋಡ್‌ ಆಗಬೇಕಾಗಿದೆ. ರೈತರ ಮಾಹಿತಿ ಹಾಗೂ ದಾಖಲೆ ಅಪ್‌ಲೋಡ್‌ ಮಾಡುವಲ್ಲಿ ಶೇ. 80ರಷ್ಟು ಪ್ರಗತಿಯಾಗಿದ್ದು ಈ ತಿಂಗಳೊಳಗೆ ಎಲ್ಲ ರೈತರ ಮಾಹಿತಿ ಅಪ್‌ಲೋಡ್‌ ಮಾಡಿ ಮೊದಲ ಕಂತನ್ನು ರೈತರ ಖಾತೆಗೆ ತಲುಪುವಂತೆ ಮಾಡಲು ಕ್ರಮ ವಹಿಸಲಾಗಿದೆ.

20ಸಾವಿರ ರೈತರು ಅನರ್ಹರು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಫಲ ಪಡೆಯಲು ಕೇಂದ್ರವು ರೂಪಿಸಿರುವ ನಿಯಮಾವಳಿ ಪ್ರಕಾರ ಜಿಲ್ಲೆಯ ಅಂದಾಜು 28ಸಾವಿರ ರೈತರು ಈ ಯೋಜನೆಯ ಲಾಭ ಸಿಗುವುದಿಲ್ಲ. ರೈತರಾಗಿದ್ದರೂ ಹಾಲಿ, ಮಾಜಿ ಸಂವಿಧಾನಿಕ ಹುದ್ದೆ ಹೊಂದಿದ್ದರೆ, ಸರಕಾರಿ ನೌಕರಿಯಲ್ಲಿದ್ದರೆ, ನಿವೃತ್ತರಾಗಿ ಪಿಂಚಣಿ ಪಡೆಯುತ್ತಿದ್ದರೆ, ಆದಾಯ ತೆರಿಗೆ ಪಾವತಿದಾರರಿಗೆ ಯೋಜನೆಯ ಸವಲತ್ತು ಸಿಗುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 2.28 ಲಕ್ಷ ರೈತರಿದ್ದು ಇದರಲ್ಲಿ 28ಸಾವಿರ ರೈತರು ಈ ನಿಯಮಾವಳಿಯಡಿ ಬರುವುದರಿಂದ ಜಿಲ್ಲೆಯಲ್ಲಿ ಅಂದಾಜು ಎರಡು ಲಕ್ಷ ರೈತರು ಕಿಸಾನ್‌ ಸಮ್ಮಾನ್‌ ಯೋಜನೆಯ ಲಾಭಕ್ಕೆ ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಕೆ ಕಡ್ಡಾಯ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಪ್ರಯೋಜನ ಪಡೆಯಲು ರೈತರು ಅರ್ಜಿ ಸಲ್ಲಿಸಲೇಬೇಕು. ಅರ್ಜಿಯೊಂದಿಗೆ ಆಧಾರ್‌ ಕಾರ್ಡ್‌ ಪ್ರತಿ ನೀಡಬೇಕಾಗಿದೆ. ಹೊಸ ಆಧಾರ್‌, ಆಧಾರ್‌ ತಿದ್ದುಪಡಿ ಸೇರಿದಂತೆ ಆಧಾರ್‌ಗೆ ಸಂಬಂಧಿಸಿದ ಪ್ರಕ್ರಿಯೆಗಾಗಿ ಜನರು ಆಧಾರ್‌ ಕೇಂದ್ರಗಳತ್ತ ಧಾವಿಸುತ್ತಿದ್ದು, ಆಧಾರ್‌ ಕೇಂದ್ರಗಳತ್ತ ಜನದಟ್ಟಣೆ ಹೆಚ್ಚಾಗಿದ್ದು, ಎರಡ್ಮೂರು ದಿನ ಓಡಾಡಿ ಆಧಾರ್‌ ಮಾಡಿಸಿಕೊಳ್ಳುವ ಸ್ಥಿತಿ ಇರುವುದರಿಂದ ಕಿಸಾನ್‌ ಸಮ್ಮಾನ್‌ ಯೋಜನೆಯೇ ವೇಗದ ಪ್ರಗತಿಗೆ ಅಡ್ಡಿಯಾಗಿದೆ.

ಒಟ್ಟಾರೆ ಕಿಸಾನ್‌ ಸಮ್ಮಾನ್‌ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ ರೈತರಿಗೆ ಲಾಭ ದೊರಕಿಸುವ ಕಾರ್ಯ ಕೃಷಿ ಇಲಾಖೆಯಿಂದ ಮುಂದುವರಿದಿದೆ.

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಎಲ್ಲ ರೈತರಿಗೂ ವಿಸ್ತರಿಸಲಾಗಿರುವುದರಿಂದ ಜಿಲ್ಲೆಯಲ್ಲಿ 48000 ರೈತರಿಗೆ ಹೆಚ್ಚುವರಿಯಾಗಿ ಲಾಭ ದೊರಕಲಿದೆ. ರೈತರಿಂದ ಮಾಹಿತಿ ಸಂಗ್ರಹ ಕಾರ್ಯ ಶೇ. 80ರಷ್ಟು ಆಗಿದ್ದು, ಈ ತಿಂಗಳಲ್ಲಿ ಶೇ. 100ರಷ್ಟು ಪ್ರಗತಿ ಸಾಧಿಸುವ ಗುರಿ ಹೊಂದಲಾಗಿದೆ.
ಬಿ. ಮಂಜುನಾಥ
ಜಂಟಿ ನಿರ್ದೇಶಕರು, ಕೃಷಿ ಇಲಾಖೆ

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1

Kundapura; ಜಪ್ತಿ: ಅಂಗಡಿಗೆ ಬೆಂಕಿ: ‘ದ್ವೇಷದ ಕಿಡಿ’ ಎಂಬ ಶಂಕೆ; ದೂರು

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.