ರಾಜ್ಯದಲ್ಲೇ ಮೊದಲ ರೇಷ್ಮೆ ಕೃಷಿ ಮೆಗಾ ಕ್ಲಸ್ಟರ್ ರಚನೆ
ರೈತರ ಆರ್ಥಿಕ ಸುಧಾರಣೆಗಾಗಿ ಮದ್ದೂರಲ್ಲಿ ಆರಂಭ, ರೈತ ಉತ್ಪಾದಕ ಕಂಪನಿ ಕುರಿತು ಕಾರ್ಯಾಗಾರಕ್ಕೆ ಚಾಲನೆ
Team Udayavani, Jul 4, 2019, 4:20 PM IST
ಮದ್ದೂರಲ್ಲಿ ನಡೆದ ರೇಷ್ಮೆ ಕೃಷಿ ಮೆಗಾ ಕ್ಲಸ್ಟರ್ ಹಾಗೂ ರೈತ ಉತ್ಪಾದಕ ಕಂಪನಿ ಕಾರ್ಯಗಾರಕ್ಕೆ ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿ ರಜಿನ್ ರಂಜನ್ ಒಖಂಡಿಯಾರ್ ಚಾಲನೆ ನೀಡಿದರು.
ಮಂಡ್ಯ ಮಂಜುನಾಥ್
ಮದ್ದೂರು: ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ರೈತರ ಆರ್ಥಿಕ ಸುಧಾರಣೆಗಾಗಿ ತಾಲೂಕಿನಲ್ಲಿ ರೇಷ್ಮೆ ಕೃಷಿ ಮೆಗಾ ಕ್ಲಸ್ಟರ್ ರಚನೆ ಹಾಗೂ ರೈತ ಉತ್ಪಾದಕ ಕಂಪನಿ ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯ ಸದಸ್ಯ ಕಾರ್ಯದರ್ಶಿ ರಜಿತ್ ರಂಜನ್ ಒಖಂಡಿಯಾರ್ ತಿಳಿಸಿದರು. ಪಟ್ಟಣದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಮತ್ತು ರಾಜ್ಯ ರೇಷ್ಮೆ ಇಲಾಖೆಯ ಸಹಯೋಗದಲ್ಲಿ ನಡೆದ ರೇಷ್ಮೆ ಕೃಷಿ ಮೆಗಾ ಕ್ಲಸ್ಟರ್ ರಚನೆ, ರೈತ ಉತ್ಪಾದಕ ಕಂಪನಿ ಕುರಿತು ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೇರ ಮಾರಾಟಕ್ಕೆ ಸಹಕಾರ: ರೈತರು ಬೆಳೆದ ರೇಷ್ಮೆ ಬೆಲೆಗೆ ವೈಜ್ಞಾನಿಕ ಬೆಲೆ ಸಿಗದೆ ಕಂಗಾಲಾಗುವ ಜತೆಗೆ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದ್ದು, ಇದನ್ನು ನಿಯಂತ್ರಿಸಲು ತಾಲೂಕಿನಲ್ಲಿ ರೈತ ಉತ್ಪಾದಕ ಕಂಪನಿಯನ್ನು ಪ್ರಾರಂಭಿಸುವ ಜತೆಗೆ ರೈತರೇ ನೇರವಾಗಿ ಮಾರಾಟ ಮಾಡುವ ಮೂಲಕ ಹೆಚ್ಚು ಲಾಭ ಗಳಿಕೆಗೆ ಸಹಕಾರಿಯಾಗಲಿದೆ. ರಾಜ್ಯದಲ್ಲೇ ಪ್ರಥಮ ಬಾರಿಗೆ ರೈತ ಉತ್ಪಾದಕ ಕಂಪನಿ ತೆರೆಯುತ್ತಿರುವುದು ಸಂತಸದ ವಿಚಾರ. ತಾಲೂಕಿನ ಬಿದರಕೋಟೆ, ತೊರೆಶೆಟ್ಟಹಳ್ಳಿ ಹಾಗೂ ಮಳವಳ್ಳಿ ತಾಲೂಕಿನ ಗಾಜನೂರು, ಅಲಸದಹಳ್ಳಿ ಗ್ರಾಮಗಳನ್ನು ಒಟ್ಟುಗೂಡಿಸಿ ಮೆಗಾ ರೇಷ್ಮೆ ರಹಿತ ಉತ್ಪಾದಕ ಕಂಪನಿ ಪ್ರಾರಂಭಿಸಲು ಮುಂದಾಗಿದ್ದು, ರೈತರು ಇದರ ಸದುಪಯೋಗಕ್ಕೆ ಮುಂದಾಗುವಂತೆ ಮನವಿ ಮಾಡಿದರು.
ಮಿಶ್ರತಳಿ ಬೆಳೆಗಳಿಗೆ ಆದ್ಯತೆ: ಜಿಲ್ಲಾದ್ಯಂತ ಮಿಶ್ರತಳಿ ಬೆಳೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರಿಂದಾಗಿ ಉತ್ತಮ ಲಾಭ ಗಳಿಕೆಯಿಂದ ವಿಮುಖವಾಗುತ್ತಿವೆ. ಆದ್ದರಿಮದ ಇಲಾಖೆ ಅಧಿಕಾರಿಗಳು ದ್ವಿತಳಿ ರೇಷ್ಮೆಗೂಡನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹ ಧನ ನೀಡುತ್ತಿವೆ. ಗುಣಮಟ್ಟದ ರೇಷ್ಮೆ ಬೆಳೆಗೆ ಹೆಚ್ಚಿನ ಗಮನಹರಿಸಬೇಕು. ನೇರವಾಗಿ ತಾವೇ ಪ್ರಾರಂಭಿಸಿದ ರೈತರ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರೈತ ಉತ್ಪಾದಕ ಕಂಪನಿ ಪ್ರಾರಂಭಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತ ಜಿ.ಸಿ.ವೃಷೇಬೇಂದ್ರಮೂರ್ತಿ, ನಿರ್ದೇಶಕ ಡಾ.ಆರ್.ಎಸ್.ತೆವತಿಯಾ, ನಿವೃತ್ತ ಉಪ ಕುಲಪತಿ ಡಾ.ಎಸ್.ಬಿ.ದಂಡಿನ್, ಮೈಸೂರು ಜಂಟಿ ನಿರ್ದೇಶಕ ಬಿ.ರಾಧಾಕೃಷ್ಣ ರೈ, ಜಿಲ್ಲಾ ಉಪನಿರ್ದೇಶಕಿ ಬಿ.ಆರ್.ಪ್ರತಿಮಾ, ಸಹಾಯಕ ನಿರ್ದೇಶಕ ಎಂ.ಬಸವರಾಜು, ಸಿಇಒ ಎನ್.ವೈ.ಚಿಗರಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.