ಜಿಲ್ಲೆಯಲ್ಲಿ ವಿದ್ಯಾರ್ಥಿ ಪೊಲೀಸ್‌ ಕೆಡೆಟ್ ಕಾರ್ಯಕ್ರಮ

660 ಮಕ್ಕಳಿಗೆ ಪ್ರತಿ ಶನಿವಾರ ಪೊಲೀಸ್‌ ಇಲಾಖೆಯಿಂದ ತರಬೇತಿ | ಇದೇ ತಿಂಗಳಿಂದ ಆರಂಭ

Team Udayavani, Jul 4, 2019, 4:26 PM IST

04-July-39

ರಾಮನಗರದಲ್ಲಿ ವಿದ್ಯಾರ್ಥಿ ಪೊಲೀಸ್‌ ಕೆಡೆಟ್‌ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಚೇತನ್‌ ಸಿಂಗ್‌ ರಾಥೋಡ್‌, ತರಬೇತಿ ವಿಭಾಗದ ಪೊಲೀಸ್‌ ಕಮಾಂಡೆಂಟ್‌ ಕುಲದೀಪ್‌ ಜೈನ್‌ ಹಾಜರಿದ್ದರು.

ರಾಮನಗರ: ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಗರಿಕ ಜವಾಬ್ದಾರಿ, ಕಾನೂನು ಪಾಲನೆ ಹಾಗೂ ನಾಯಕತ್ವದ ಗುಣವನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಇದೇ ತಿಂಗಳಿಂದ ಜಿಲ್ಲೆಯಲ್ಲಿ ನಡೆಯಲಿದೆ.

ಜಿಲ್ಲೆಯ ಗ್ರಾಮಾಂತರ ಹಾಗೂ ಪಟ್ಟಣ ಪ್ರದೇಶದ 15 ಶಾಲೆಗಳ 8ನೇ ತರಗತಿಯ ಒಟ್ಟು 660 ಮಕ್ಕಳನ್ನು ಗುರುತಿಸಿ ಪ್ರತಿ ಶನಿವಾರದಂದು ಪೊಲೀಸ್‌ ಇಲಾಖೆ ವತಿಯಿಂದ ತರಬೇತಿ ನೀಡಲಾಗುವುದು.

ಈ ಸಂಬಂಧ ನಗರದ ಜಿಲ್ಲಾ ಕಚೇರಿಗಳ ಸಂಕಿರ್ಣದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಚೇತನ್‌ ಸಿಂಗ್‌ ರಾಥೋಡ್‌, ತರಬೇತಿ ವಿಭಾಗದ ಪೊಲೀಸ್‌ ಕಮಾಂಡೆಂಟ್ ಕುಲದೀಪ್‌ ಜೈನ್‌ ಅವರ ನೇತೃತ್ವದಲ್ಲಿ ಸಭೆ ನಡೆಯಿತು.

ವಿದ್ಯಾರ್ಥಿ ಪೊಲೀಸ್‌ ಕೆಡೆಟ್ ಅಂದರೇನು?: ಪೊಲೀಸ್‌ ಕೆಡೆಟ್ ಕಾರ್ಯಕ್ರಮವು ವಿದ್ಯಾರ್ಥಿಗಳ ಭಾವನಾತ್ಮಕ, ದೈಹಿಕ, ಸಾಮಾಜಿಕ ಕೌಶಲ್ಯ ಮತ್ತು ಪರಿಸರದ ಅಂಶಗಳನ್ನು ಬಲಪಡಿಸುವುದು ಹಾಗೂ ಅವರಲ್ಲಿ ಉತ್ಸಾಹ, ವಿಶ್ವಾಸ, ಸ್ವಯಂ ಶಿಸ್ತು ಮತ್ತು ಹೊಣೆಗಾರಿಕೆ ಬೇರೂರುವಂತೆ ಮಾಡುವ ತರಬೇತಿಯಾಗಿದೆ.

ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರೇರೇಪಣೆ ಹಾಗೂ ಶಿಸ್ತನ್ನು ಹೆಚ್ಚಿಸುವುದು. ಶಾಲೆಯ ಆವರಣದಲ್ಲಿ ಮಾದಕ ದ್ರವ್ಯಗಳ ಬಳಕೆ ನಿರ್ಮೂಲನೆ ಮಾಡುವುದು. ಯುವ ಪೀಳಿಗೆಯನ್ನು ಮನಃಪೂರ್ವಕವಾಗಿ ಗೌರವಿಸುವ ಸಂಸ್ಕೃತಿಯನ್ನು ಬೆಳೆಸುವುದು, ಕಾನೂನು ಅನುಸರಿಸುವುದು ಮತ್ತು ತನ್ಮೂಲಕ ಇತರರಿಗೂ ದಾರಿ ತೋರುವ ಗುಣ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ಆವರಲ್ಲಿ ನಾಗರಿಕ ಅರಿವು, ಸಮಾಜದತ್ತ, ಪ್ರಜಾಪ್ರಭುತ್ವದತ್ತ ನಡವಳಿಕೆ ಮತ್ತು ನಿಸ್ವಾರ್ಥ ಸೇವೆಯ ಮನೋಭಾವನೆ ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ.

ಅಪರಾಧಗಳ ತಡೆಗೆ ಸಹಕಾರಿ: ಒಳ್ಳೆಯ ಆರೋಗ್ಯ, ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಅಭಿವೃದ್ಧಿಗೆ ಅನುಕೂಲವಾಗುವಂತೆ ಕಠಿಣ ಕೆಲಸ ಮತ್ತು ವೈಯಕ್ತಿಕ ಸಾಧನೆಗಾಗಿ ಅವರ ಸಾಮರ್ಥ್ಯ ನಿರ್ಮಿಸುವುದು, ಪೊಲೀಸ್‌ ಮತ್ತು ಇತರ ಕಾನೂನು ಜಾರಿ ಪ್ರಾಧಿಕಾರಿಗಳಾದ ಅರಣ್ಯ, ಸಾರಿಗೆ ಮತ್ತು ಅಬಕಾರಿ ಇಲಾಖೆಗಳು ಅಪರಾಧವನ್ನು ತಡೆಗಟ್ಟುವಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು, ರಸ್ತೆಯ ಸುರಕ್ಷತೆಯನ್ನು ಉತ್ತೇಜಿಸುವುದು ಮತ್ತು ಅಂತರಿಕ ಭದ್ರತೆ ಮತ್ತು ಕೋಪ ನಿರ್ವಹಣೆಯನ್ನು ಸುಧಾರಿಸಲು ಈ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಸಹಕಾರಿಯಾಗಲಿದೆ.

ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ತಂಡದ ಕೆಲಸ, ನವೀನ ಚಿಂತನೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯ ಕೌಶಲ್ಯಗಳನ್ನು ವೃದ್ಧಿಸುವ ಮೂಲಕ ಯಶಸ್ಸನ್ನು ಸಾಧಿಸಲು ಪ್ರೇರಣೆ ನೀಡುವುದು. ಯುವಜನರಲ್ಲಿನ ಶಕ್ತಿಯನ್ನು ಹೊರತರುವ ಕಾರ್ಯ ಈ ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಮಾಡಲಿದೆ.

ಜಾತ್ಯಾತೀತ ದೃಷ್ಠಿಕೋನವನ್ನು ಅಭಿವೃದ್ಧಿಪಡಿಸಲು ಯುವಕರನ್ನು ಪ್ರೇರೇಪಿಸುವಂತೆ ಮಾಡುವುದು, ಇತರ ಮೂಲಭೂತ ಹಕ್ಕುಗಳ ಗೌರವ ಮತ್ತು ಭಾರತದ ಸಂವಿಧಾನದಲ್ಲಿ ಮತ್ತು ಮೂಲಭೂತ ಕರ್ತವ್ಯಗಳನ್ನು ಕೈಗೊಳ್ಳುವ ಇಚ್ಚೆ, ದೇಶ ಭಕ್ತಿಯ ಗುಣಗಳನ್ನು, ಮುಕ್ತ ಮನಸ್ಸು, ಉದಾರತೆ, ಸಾಮಾಜಿಕ ಅಂತರ್ಗತತೆ ಬೆಳೆಸುವ ಕಾರ್ಯವಾಗಲಿದೆ.

ವಿದ್ಯಾರ್ಥಿಗಳ ಆಯ್ಕೆಗೆ ಡೀಸಿ ಸೂಚನೆ: ವಿದ್ಯಾರ್ಥಿ ಪೊಲೀಸ್‌ ಕೆಡೆಟ್ ಬಗ್ಗೆ ತರಬೇತಿ ವಿಭಾಗದ ಪೊಲೀಸ್‌ ಕಮಾಂಡೆಂಟ್ ಕುಲದೀಪ್‌ ಜೈನ್‌ ವಿವರಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ.ಕೆ.ರಾಜೇಂದ್ರ, ವಿದ್ಯಾರ್ಥಿಗಳಿಗೆ ಪೊಲೀಸ್‌ ಕೆಡೆಟ್ ಕಾರ್ಯಕ್ರಮದ ಉದ್ದೇಶಗಳು ಭಾರತದ ರಾಷ್ಟ್ರೀಯ ಯುವ ನೀತಿಯ ಗುರಿಗಳೊಂದಿಗೆ ಸಮನ್ವಯವಾಗಿದೆ. ಇದು ರಾಷ್ಟ್ರ ನಿರ್ಮಾಣದ ಶ್ರೇಷ್ಟ ಕೆಲಸದಲ್ಲಿ ತೊಡಗಿಕೊಳ್ಳುವ ಯುವಕರನ್ನು ಅನುಸರಿಸುತ್ತದೆ ಎಂದರು.

ಆಯ್ದ 15 ಶಾಲೆಗಳಲ್ಲಿ 44 ಬಾಲಕ, ಬಾಲಕಿಯರನ್ನು ಅಯ್ಕೆ ಮಾಡುವಂತೆ ಡಿಡಿಪಿಐ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ಕೊಟ್ಟರು. ಜಿಲ್ಲಾಡಳಿತ ಈ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡಲಿದೆ ಎಂದರು. ಕರ್ನಾಟಕ ಸೇರಿದಂತೆ ಕೇರಳ, ಗುಜರಾತ್‌, ಹರಿಯಾಣ ಹಾಗೂ ರಾಜಸ್ಥಾನಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

ಟಾಪ್ ನ್ಯೂಸ್

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.