ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸಂಗ್ರಹ: ಅಧಿಕಾರಿಗಳಿಂದ ದಾಳಿ
Team Udayavani, Jul 5, 2019, 5:57 AM IST
ಸುರತ್ಕಲ್: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ವ್ಯಾಪಾರ ಮಳಿಗೆಗಳಿಗೆ ಗುರುವಾರ ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ತಂಡ ದಾಳಿ ನಡೆಸಿ 50 ಕೆ.ಜಿ.ಗೂ ಅಧಿಕ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ.
ಸುರತ್ಕಲ್‌ನ ಮಾರ್ಕೆಟ್, ಸೂಪರ್ ಬಜಾರ್, ಮತ್ತಿತರ ಅಂಗಡಿಗಳಿಗೆ ದಾಳಿ ನಡೆಸಿದಾಗ ಅಗಾಧ ಪ್ರಮಾಣದ ನಿಷೇತ ಪ್ಲಾಸ್ಟಿಕ್ ಸಂಗ್ರಹ ಪತ್ತೆಯಾಗಿದೆ.
ವ್ಯಾಪಾರಿಗಳಿಗೆ ನಿಷೇತ ಪ್ಲಾಸ್ಟಿಕ್ ಸಂಗ್ರಹದ ಆಧಾರದಲ್ಲಿ ರೂ. ಐದು ಸಾವಿರದಿಂದ ದಂಡ ವಿಧಿಸಲಾಯಿತು. ರಾಜ್ಯ ಸರಕಾರ ಎಲ್ಲ ತರದ ಕ್ಯಾರ ಬ್ಯಾಗ್ ಪ್ಲಾಸ್ಟಿಕ್ ಲೋಟ, ತಟ್ಟೆ, ಚಮಚ ನಿಷೇ ಧಿಸಲಾಗಿದೆ. ಇದನ್ನು ಮಾರಾಟ ಮಾಡದಂತೆ ಅಥವಾ ಬಳಸದಂತೆ ಎಚ್ಚರಿಸಲಾಯಿತು. ಪಾಲಿಕೆ ಆರೋಗ್ಯಾ ಕಾರಿ ಡಾ| ಮಂಜಯ್ಯ ಶೆಟ್ಟಿ ಮಾಧ್ಯಮದೊಂದಿಗೆ ಮಾತನಾಡಿ, ಈಗಾಗಲೇ ಸರಕಾರ ನಿಷೇತ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಪೂರ್ಣವಾಗಿ ನಿರ್ಮೂಲನೆಗೆ ಕ್ರಮ ಕೈಗೊಂಡಿದ್ದೇವೆ. ವ್ಯಾಪಾರಿಗಳು ಕಾನೂನನ್ನು ಪಾಲಿಸಬೇಕು. ಇಲ್ಲದಿದ್ದಲ್ಲಿ ವ್ಯಾಪಾರಾ ಪರವಾನಿಗೆ ರದ್ದು ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.
ಇದೇ ಸಂದರ್ಭ ಸುರತ್ಕಲ್ ಕೃಷ್ಣಾಪುರದಲ್ಲಿ ಮತ್ತೆ ರಸ್ತೆ ಬದಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ಸೂಕ್ತ ವಿಲೇವಾರಿ ನಡೆಯುತ್ತಿಲ್ಲ ಎಂಬ ಪ್ರಶ್ನೆಗೆ ಆ್ಯಂಟನಿ ವೇಸ್ಟ್ ಸಂಸ್ಥೆ ಸಮರ್ಪಕ ತ್ಯಾಜ್ಯ ವಲೇವಾರಿ ಮಾಡಬೇಕು. ಅವರ ವಾಹನ ಹಾಳಾದರೂ ಪರ್ಯಾಯ ವ್ಯವಸ್ಥೆ ಕೈಗೊಂಡು ತ್ಯಾಜ್ಯ ವಿಲೇವಾರಿ ಮಾಡಬೇಕು. ಈ ಬಗ್ಗೆ ಸಂಸ್ಥೆಗೆ ಹಲವು ಬಾರಿ ನೋಟಿಸ್ ನೀಡಲಾಗಿದೆ ಎಂದರು.
ಆರೋಗ್ಯ ನಿರೀಕ್ಷಕರು ಭಾಸ್ಕರ್, ಪರಿಸರ ಅಭಿಯಂತರ ದಯಾನಂದ ಪೂಜಾರಿ, ಆರೋಗ್ಯ ನಿರೀಕ್ಷಕರಾದ ಅರುಣ್ ಕುಮಾರ್ ಬಿ.ಕೆ., ಕಿರಣ್ ಗಿರಿ ಧರ್, ಸಂಜಯ್ ಕುಮಾರ್, ಸಿಬಂದಿ ಸತೀಶ್ ಕೆ., ಅರ್ಜುನ್, ಚೇತನ್, ಮೋಹನ್ ದಾಸ್, ಆಂಟನಿ ಸಂಸ್ಥೆಯ ಪೌರ ಕಾರ್ಮಿಕರು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.