ಕರ್ಣಾಟಕ ಬ್ಯಾಂಕ್‌ನಿಂದ ಆದ್ಯತಾ ಕ್ಷೇತ್ರಕ್ಕೆ ಶೇ.43 ಸಾಲ

ಕರ್ಣಾಟಕ ಬ್ಯಾಂಕ್‌ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಚಂದ್ರಶೇಖರರಾವ್‌ ಅಭಿಮತ

Team Udayavani, Jul 5, 2019, 9:54 AM IST

br-tdy-2..

ತಾಲೂಕಿನ ಕಾಡನೂರು ಗ್ರಾಮದಲ್ಲಿ ನೂತನ ಕಟ್ಟಡದಲ್ಲಿ ಪ್ರಾರಂಭವಾದ ಕರ್ಣಾಟಕ ಬ್ಯಾಂಕ್‌ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬ್ಯಾಂಕ್‌ ಮಹಾ ಪ್ರಬಂಧಕ ಚಂದ್ರಶೇಖರರಾವ್‌, ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ಕರ್ಣಾಟಕ ಬ್ಯಾಂಕ್‌ ಲಾಭ ಗಳಿಸುವುದಷ್ಟೇ ಸೀಮಿತವಾಗದೇ ಗ್ರಾಹಕ ಸ್ನೇಹಿಸಯಾಗಿದ್ದು, ಆದ್ಯತಾ ಕ್ಷೇತ್ರಕ್ಕೆ ಶೇ.43ರಷ್ಟು ಸಾಲ ನೀಡುವ ಮೂಲಕ ದೇಶದ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಕರ್ಣಾಟಕ ಬ್ಯಾಂಕ್‌ ಮಹಾ ಪ್ರಬಂಧಕ ಚಂದ್ರಶೇಖರರಾವ್‌ ಹೇಳಿದರು.

ತಾಲೂಕಿನ ಕಾಡನೂರು ಗ್ರಾಮದಲ್ಲಿ ನೂತನ ಕಟ್ಟಡದಲ್ಲಿ ಪ್ರಾರಂಭವಾದ ಕರ್ಣಾಟಕ ಬ್ಯಾಂಕ್‌ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ 186 ಶಾಖೆ: ಕರ್ಣಾಟಕ ಬ್ಯಾಂಕ್‌ ಷೇರುದಾರರ ಹಣದಲ್ಲಿ ನಡೆಯುತ್ತಿರುವ ಬ್ಯಾಂಕ್‌ ಆಗಿದೆ. ಇದು ಲಾಭ ಮಾಡುವ ದೃಷ್ಟಿಯಿಂದ ಮಾತ್ರ ಕೆಲಸ ಮಾಡುತ್ತಿರುವ ಬ್ಯಾಂಕ್‌ ಅಲ್ಲ. ರಾಜ್ಯದಲ್ಲಿ 186 ಶಾಖೆಗಳನ್ನು ಗ್ರಾಮಾಂತರ ಪ್ರದೇಶದ ಹಳ್ಳಿಗಳಲ್ಲಿಯೇ ತೆರೆಯಲಾಗಿದೆ. ರೈತರು, ದುಡಿಯುವ ವರ್ಗದವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ಅವರ ಪ್ರಗತಿಯಲ್ಲಿ ಭಾಗಿಯಾಗಬೇಕು ಎನ್ನುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ ಎಂದರು.

ವಿಮಾ ಪರಿಹಾಕ್ಕೆ ಅವಕಾಶ: ರೈತರು ಬ್ಯಾಂಕಿನಲ್ಲಿ ಪಡೆಯುವ ಸಾಲ ಸೌಲಭ್ಯಗಳನ್ನು ನಿಗದಿತ ಉದ್ದೇಶಕ್ಕೆ ಬಳಸುವ ಮೂಲಕ ಸಕಾಲದಲ್ಲಿ ಸಾಲವನ್ನು ಮರುಪಾವತಿ ಮಾಡಿದರೆ ಇತರರು ಸಾಲ ಪಡೆಯಲು ಸಹಕಾರಿಯಾಗಲಿದೆ. ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿರುವ ಗ್ರಾಹಕರು 125 ರೂಪಾಯಿ ವಿಮಾ ಹಣ ಪಾವತಿ ಮಾಡಿದರೆ ಅಪಘಾತ ಸಂದರ್ಭದಲ್ಲಿ ಕುಟುಂಬದವರಿಗೆ 10 ಲಕ್ಷ ರೂಪಾಯಿಗಳವರೆಗೆ ವಿಮಾ ಪರಿಹಾರ ಪಡೆಯಲು ಅವಕಾಶವಿದೆ ಎಂದರು.

ಕೆರೆ ಅಭಿವೃದ್ಧಿಪಡಿಸುವ ಭರವಸೆ: ಬ್ಯಾಂಕಿನ ನೂತನ ಕಟ್ಟಡವನ್ನು ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ರೈತರು ಖಾಸಗಿಯವರಿಂದ ಸಾಲ ಪಡೆದು ಅಧಿಕ ಬಡ್ಡಿ ಪಾವತಿ ಮಾಡಿ ಸಂಕಷ್ಟಕ್ಕೆ ಸಿಲುಕುವುದನ್ನು ನಿಲ್ಲಿಸಬೇಕು. ಬ್ಯಾಂಕುಗಳಲ್ಲಿ ಬೆಳೆ ಸಾಲ ಮಾತ್ರವಲ್ಲದೆ ಕಡಿಮೆ ಬಡ್ಡಿದರದಲ್ಲಿ ಹಲವಾರು ರೀತಿಯ ಸಾಲ ಸೌಲಭ್ಯಗಳು ದೊರೆಯುತ್ತಿವೆ. ಇವುಗಳನ್ನು ರೈತರು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ಕರ್ಣಾಟಕ ಬ್ಯಾಂಕ್‌ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕೆರೆ ಅಭಿವೃದ್ದಿ ಕೆಲಸಕ್ಕೆ 10 ಲಕ್ಷ ರೂಪಾಯಿ ದೇಣಿಗೆ ನೀಡುತ್ತಿದೆ ಎಂದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.