ಶೀಘ್ರದಲ್ಲೇ ಬಸ್‌ನಿಲ್ದಾಣ ಕಾಮಗಾರಿ ಪೂರ್ಣ

ನಿಲ್ದಾಣದ ಮೊದಲನೆ ಅಂತಸ್ತು ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣ: ವಿನೋದ್‌ಕುಮಾರ್‌

Team Udayavani, Jul 5, 2019, 10:00 AM IST

cn-tdy-1..

ಪಟ್ಟಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ಯಿಂದ ನಿರ್ಮಾಣವಾಗುತ್ತಿರುವ ಮೊದಲನೇ ಅಂತಸ್ತಿನ ಬಸ್‌ನಿಲ್ದಾಣದ ಕಟ್ಟಡ.

ಕೊಳ್ಳೇಗಾಲ: ರಸ್ತೆ ಸಾರಿಗೆ ಇಲಾಖೆಗೆ ಎಲ್ಲಾ ತಾಲೂಕುಗಳಲ್ಲಿ ಸುಸರ್ಜಿತ ಬಸ್‌ ನಿಲ್ದಾಣ ನಿರ್ಮಿಸಿ ಪ್ರಯಾಣಿಕ‌ರಿಗೆ ಸೌಕರ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಟ್ಟಣದ ಬಸ್‌ ನಿಲ್ದಾಣ ನಿರ್ಮಾಣದ ಕಾಮಗಾರಿ ಬರದಿಂದ ಸಾಗುತ್ತಿದ್ದು, ಮೊದಲನೇ ಅಂತಸ್ತಿನ ಕಾಮಗಾರಿ ಪೂರ್ಣಗೊಂಡಿದೆ.

ರಾಜ್ಯದಲ್ಲಿ ಕಳೆದ ಬಾರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಟ್ಟಣದಲ್ಲಿ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಬಸ್‌ ನಿಲ್ದಾಣ ನಿರ್ಮಾಣಕ್ಕೆ 22 ಕೋಟಿ ರೂ. ಅಂದಾಜಿನ‌ಲ್ಲಿ 3 ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಿಸುವಲ್ಲಿ ಕ್ಷೇತ್ರದ ಶಾಸಕ ಎಸ್‌.ಜಯಣ್ಣ ಮುಂದಾಗಿದ್ದನ್ನು ಸ್ಮರಿಸಬಹುದು.

ವಿಭಜನೆ: ತಾಲೂಕು ಕೇಂದ್ರದಲ್ಲಿ ಎರಡು ವಿಧಾನಸಭಾ ಕ್ಷೇತ್ರ ಹೊಂದಿರುವ ಕೊಳ್ಳೇಗಾಲ ಅತ್ಯಂತ ದೊಡ್ಡ ತಾಲೂಕಾಗಿದ್ದು, ಸರ್ಕಾರ ಹನೂರನ್ನು ಬೇರ್ಪಡಿಸಿ ಪ್ರತ್ಯೇಕ ತಾಲೂಕು ಕೇಂದ್ರವನ್ನಾಗಿ ಮಾಡುವ ಮೂಲಕ ರಾಜ್ಯದಲ್ಲೇ ಬೃಹತ್‌ ತಾಲೂಕು ಕೇಂದ್ರವಾಗಿದ್ದನ್ನು ಎರಡು ತಾಲೂಕು ಕೇಂದ್ರವನ್ನಾಗಿ ಮಾಡಿ ಜನರಿಗೆ ಮತ್ತಷ್ಟು ಸೇವಾ ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಸರ್ಕಾರ ಮುಂದಾಗಿದೆ.

ಪ್ರಸಿದ್ಧ ದೇವಾಲಯ: ತಾಲೂಕು ಕೇಂದ್ರದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ ಮತ್ತು ಅಂತಾರಾಜ್ಯದಿಂದ ಲಕ್ಷಾಂತರ ಭಕ್ತರು ಆಗಮಿಸಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಹಾಗೂ ಅಪಾರ ಆದಾಯ ತಂದುಕೊಡುವ ದೇವಾಲಯ ಮತ್ತು ತಾಲೂಕಿನ ಶಿವನಸಮುದ್ರದ ಸಮೂಹ ದೇವಾಲಯ ಮತ್ತು ಗಗನಚುಕ್ಕಿ, ಭರಚುಕ್ಕಿ ಜಲಪಾತ, ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಾಲಯ, ಕುರುಬನಕಟ್ಟೆಯ ಚೆನ್ನಯ್ಯ, ಲಿಂಗಯ್ಯ ಗದ್ದುಗೆ ಸೇರಿದಂತೆ ಅನೇಕ ಪವಾಡ ಪುರುಷರ ನೆಲೆಬೀಡಿನ ದೇವಾಲಯಗಳು ಖ್ಯಾತಿ ಪಡೆದಿದೆ.

ವ್ಯಾಪಾರ ಕೇಂದ್ರ: ಪವಾಡ ಪುರುಷರು ನೆಲೆಸಿರುವ ಸ್ಥಳಗಳಿಗೆ ಭಕ್ತಾದಿಗಳು ಮತ್ತು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ವೀಕ್ಷಣೆ ಮಾಡಿ ರೇಷ್ಮೆನಗರಿ ಎಂದು ಖ್ಯಾತಿ ಪಡೆದಿರುವ ಕೊಳ್ಳೇಗಾಲದಲ್ಲಿ ರೇಷ್ಮೆ ಸೀರೆ ಮತ್ತು ಬಟ್ಟೆಗಳನ್ನು ಖರೀದಿಸಿ ವ್ಯಾಪಾರ ಕೇಂದ್ರವಾಗಿ ಹೆಸರುವಾಸಿಯಾಗಿತ್ತು.

ಬರದ ಸಿದ್ಧತೆ: ದೇವಾಲಯ ಮತ್ತು ಪ್ರವಾಸಿ ತಾಣಗಳ ಬಿಡಾಗಿರುವ ತಾಲೂಕು ಕೇಂದ್ರದಲ್ಲಿ ರಸ್ತೆ ಸಾರಿಗೆ ಇಲಾಖೆ ಬಸ್‌ ನಿಲ್ದಾಣ ನಿರ್ಮಾಣ ಮಾಡಿ ಪ್ರಯಾಣಿಕರಿಗೆ ಮತ್ತಷ್ಟು ಸೌಕರ್ಯಗಳನ್ನು ಕಲ್ಪಿಸಲು ಬಸ್‌ ನಿಲ್ದಾಣದ ಮೊದಲನೇ ಅಂತಸ್ತಿನ ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣಗೊಳ್ಳಲು ಕಾಮಗಾರಿ ಬರದ ಸಿದ್ಧತೆ ಕಾರ್ಯ ನಡೆಯುತ್ತಿದೆ.

ತಾತ್ಕಾಲಿಕ ಬಸ್‌ ನಿಲ್ದಾಣ: ಪಟ್ಟಣದ ಬಸ್‌ ನಿಲ್ದಾಣದ ಕಾಮಗಾರಿ ಆರಂಭಗೊಂಡ ಬಳಿಕ ಪ್ರಯಾಣಿಕರಿಗೆ ಬೇರೆಡೆಗೆ ತೆರಳಲು ಅವಕಾಶ ಕಲ್ಪಿಸುವ ಸಲುವಾಗಿ ನಗರಸಭಾ ವತಿಯಿಂದ ಹೊಸ ಅಣಗಳ್ಳಿ ಬಡಾವಣೆಯ ಸಮೀಪ ಇರುವ ಖಾಸಗಿ ಜಮೀನೊಂದರಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣ ನಿರ್ಮಿಸಿದ್ದು, ನಿಲ್ದಾಣದಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದಾಗಿ ಅದನ್ನು ನಿವಾರಣೆ ಮಾಡಲು ಪ್ರಥಮ ಅಂತಸ್ತು ನಿಲ್ದಾಣವನ್ನು ಪ್ರಯಾಣಿಕ ರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿ ಗಳು ಪ್ರಯತ್ನಿಸುತ್ತಿದ್ದಾರೆ.

ಮೊದಲನೆ ಅಂತಸ್ತು: ನಿಲ್ದಾಣದ ಮೊದಲನೆ ಅಂತಸ್ತು ಕಾಮಗಾರಿ ಎರಡು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಕಾಮಗಾರಿಯನ್ನು ಚುರುಕುಗೊಳಿಸಿದ್ದು, ಶೀಘ್ರದಲ್ಲಿ ಸಿದ್ಧವಾಗಲಿದೆ ಎಂದು ಅಪೂರ್ವ ಕನ್ಸ್‌ಸ್ಟ್ರಕ್ಷನ್‌ ಪ್ರಾಜೆಕ್ಟ್ ವ್ಯವಸ್ಥಾಪಕ ವಿನೋದ್‌ ಕುಮಾರ್‌ ಉದಯವಾಣಿಗೆ ತಿಳಿಸಿದ್ದಾರೆ.

 

● ಡಿ.ನಟರಾಜು

ಟಾಪ್ ನ್ಯೂಸ್

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.