ಹೊರಗುತ್ತಿಗೆ ನೌಕರರ ಪರ ಧ್ವನಿ ಎತ್ತುವಂತೆ ಆಗ್ರಹಿಸಿ ಮನವಿ
ಕೋರ್ಟ್ ತೀರ್ಪಿನಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯ
Team Udayavani, Jul 5, 2019, 11:07 AM IST
ಯಾದಗಿರಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹೊರಗುತ್ತಿಗೆ ಡಾಟಾ ಎಂಟ್ರಿ ಆಪರೇಟರ್‌ಗಳ ಸಮಸ್ಯೆ ಕುರಿತು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಯಾದಗಿರಿ: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳ ಸಮಸ್ಯೆ ಕುರಿತು ಸರ್ಕಾರದ ಗಮನ ಸೆಳೆಯುವಂತೆ ಒತ್ತಾಯಿಸಿ ಆಪರೇಟರ್‌ಗಳ ಸಂಘದಿಂದ ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಬೆಂಗಳೂರಿನಲ್ಲಿ ಎನ್. ರವಿಕುಮಾರ ಅವರನ್ನು ಭೇಟಿಯಾದ ಸಂಘದ ಪ್ರಮುಖರು, ಹೊರಗುತ್ತಿಗೆ ನೌಕರರಿಗೆ ಕಳೆದ 3 ತಿಂಗಳಿಂದ ವೇತನ ನೀಡಿಲ್ಲ. ಇಲಾಖೆಯಲ್ಲಿ ಕಳೆದ 16 ವರ್ಷಗಳಿಂದ ಸುಮಾರು ಸಾವಿರ ಜನರು ಸೇವೆ ಸಲ್ಲಿಸುತ್ತಿದ್ದು, ಸೇವಾ ಭದ್ರತೆಯೂ ಇಲ್ಲದಂತಾಗಿದೆ. ತಮ್ಮ ಬೇಡಿಕೆ ಈಡೇರಿಸುವಂತೆ ಹಲವು ಬಾರಿ ಇಲಾಖೆ ಮುಖ್ಯಸ್ಥರಿಗೆ ಮನವಿ ಮಾಡಲಾಗಿದೆ. ತಮ್ಮನ್ನು ಕೆಲಸಕ್ಕೆ ನೇಮಿಸಿಕೊಂಡ ಎಚ್ಸಿಎಲ್ ಮತ್ತು ಶ್ರೀವೆನ್ ಇನೊಧೀ ಲಿಮಿಟೆಡ್ ಕಂಪನಿ ಗುತ್ತಿಗೆ ಮುಗಿದಿದೆ ಎಂದು ಹೇಳುತ್ತಿದ್ದು, ಯಾವುದೇ ಅಧಿಕೃತ ಪತ್ರ ನೀಡಿಲ್ಲ. ಅಲ್ಲದೇ ಜನವರಿಯಿಂದ ಮಾರ್ಚ್‌ವರೆಗಿನ ಪಿಎಫ್ ಕೂಡ ಜಮಾ ಮಾಡಿಲ್ಲ ಎಂದು ಮನವಿಯಲ್ಲಿ ಉಲ್ಲೇಖೀಸಿದ್ದಾರೆ.
2017ರಿಂದ ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನದ ಬಾಕಿ ಮೊತ್ತ ನೀಡುವುದು, 3 ತಿಂಗಳ ವೇತನ ಜತೆಗೆ ಪಿಎಫ್ ಕೂಡಲೇ ಭರಿಸುವುದು, ಗುತ್ತಿಗೆ ಬದಲಾಯಿಸಿದರೂ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರನ್ನೇ ಮುಂದುವರಿಸುವುದು, ಕೋರ್ಟ್ ತೀರ್ಪಿನಂತೆ ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಸರ್ಕಾರ ಗಮನ ಸೆಳೆಯುವಂತೆ ಮನವಿ ಮಾಡಿದ್ದಾರೆ.
ಸರಕಾರ ಶೀಘ್ರದಲ್ಲಿ ಬೇಡಿಕೆ ಈಡೇರಿಸಲು ಮುಂದಾಗದಿದ್ದರೆ ಜುಲೈ 8ರಿಂದ ಬೆಂಗಳೂರಿನಲ್ಲಿ ಅರ್ನಿಷ್ಠಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಘ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
MUST WATCH
ಹೊಸ ಸೇರ್ಪಡೆ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.