ಬಿತ್ತನೆ ಶೇಂಗಾ ಬೀಜಕ್ಕಾಗಿ ಕೃಷಿ ಇಲಾಖೆಗೆ ಮುತ್ತಿಗೆ

Team Udayavani, Jul 5, 2019, 3:11 PM IST

05-July-28

ಜಗಳೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಶೇಂಗಾ ಬಿತ್ತನೆ ಬೀಜ ಪಡೆಯಲು ಕಾಯುತ್ತಿರುವ ರೈತರು.

ಜಗಳೂರು: ಬಿತ್ತನೆ ಶೇಂಗಾ ಬೀಜಕ್ಕಾಗಿ ರಾತ್ರಿಯಿಡೀ ಜಾಗರಣೆ ಮಾಡಿದ ನೂರಾರು ರೈತರು ಬಿತ್ತನೆ ಬೀಜ ದೊರೆಯದೆ ಆಕ್ರೋಶಗೊಂಡು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿ ಸಹಾಯಕ ಕೃಷಿ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದಿಲ್ಲಿ ಗುರುವಾರ ಜರುಗಿದೆ.

ಪಟ್ಟಣದ ಎಪಿಎಂಸಿ ಆವರಣದಲ್ಲಿ ಕೃಷಿ ಇಲಾಖೆ ಮತ್ತು ಕೆಒಎಫ್‌ನಿಂದ ಶೇಂಗಾ ಬಿತ್ತನೆ ಬೀಜವನ್ನು ಕಳೆದ ಕೆಲವು ದಿನಗಳಿಂದ ವಿತರಿಸಲಾಗುತ್ತಿದೆ.

ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದರಿಂದ ಮೆಕ್ಕೆಜೋಳ ಬಿತ್ತನೆ ಅವಧಿ ಮುಗಿದು ಹೋಗಿದ್ದು, ರೈತರೆಲ್ಲ ಶೇಂಗಾ ಬಿತ್ತನೆಗೆ ಮುಂದಾಗಿದ್ದಾರೆ.

ಬೀಜ ಪಡೆಯಲು ರೈತರು ಬುಧವಾರ ರಾತ್ರಿ ಗೋದಾಮಿನ ಹತ್ತಿರ ಮಲಗಿದ್ದು, ಸಾರತಿ ಸಾಲಿನಲ್ಲಿ ಸಾವಿರಾರು ರೈತರು ನಿಂತು ಕಾಯುತ್ತಿದ್ದರು. ಬೆರಳೆಣಿಕೆಯಷ್ಟು ರೈತರಿಗೆ ಬೀಜ ವಿತರಿಸಿ ಶೇಂಗಾ ಬೀಜ ಖಾಲಿಯಾಗಿವೆ ಎಂದು ಅಧಿಕಾರಿಗಳು ಗೋದಾಮಿಗೆ ಬೀಗ ಜಡಿದು ತೆರಳಿದ್ದಾರೆ.

ಇದರಿಂದ ಆಕ್ರೋಶಗೊಂಡ ರೈತರು ಕೃಷಿ ಇಲಾಖೆ ಕಚೇರಿಗೆ ತೆರಳಿ ಸಹಾಯಕ ಕೃಷಿ ಅಧಿಕಾರಿಗೆ ಮುತ್ತಿಗೆ ಹಾಕಿದರು. ಸಾರತಿ ಸಾಲಿನಲ್ಲಿ ನಿಂತ ಸಾವಿರಾರು ರೈತರಿಗೆ ಬೀಜ ದೊರೆಯುತ್ತಿಲ್ಲ. ಅಲ್ಲದೇ ಇಂದು ಒಂದು ಪಾಕೇಟ್‌ಗೆ 300 ರೂ. ಹೆಚ್ಚಿನ ದರ ಪಡೆದಿದ್ದಾರೆ. ಅಧಿಕಾರಿಗಳು ಪಕ್ಕದ ತಾಲೂಕಿನ ರೈತರು, ತಮ್ಮ ಸಂಬಂಧಿಕರಿಗೆ ಬೀಜ ವಿತರಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಇದಲ್ಲದೇ ಪ್ರತಿನಿತ್ಯ 150 ಪಾಕೇಟ್ ಶೇಂಗಾ ಕಾಯಿ ಎಣ್ಣೆ ಮಿಲ್ಗೆ ಹೋಗುತ್ತಿವೆ. ಇದೊಂದು ದಂಧೆಯಾಗಿದೆ. ರೈತರಿಗೆ ಇಲಾಖೆಯವರು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲಿಂದ ಅಧಿಕಾರಿಗಳು ಮತ್ತು ರೈತರು ತಹಶೀಲ್ದಾರ್‌ ಕಚೇರಿಗೆ ತೆರಳಿದರು. ತಹಶೀಲ್ದಾರ್‌ರು ಕೆಒಎಫ್‌ ಸಿಬ್ಬಂದಿ ಹನುಮಂತಪ್ಪನನ್ನು ಕಚೇರಿಗೆ ಕರೆಸಿ ಮಾಹಿತಿ ಪಡೆದಾಗ, ಇಲಾಖೆಯವರು ಬೆಳಗ್ಗೆ ಹೇಳಿದಂತೆ ದರ ಹೆಚ್ಚಿಸಲಾಗಿದೆ. ಈಗ ಗೋದಾಮಿನಲ್ಲಿ 1000 ಪಾಕೇಟ್ ದಾಸ್ತಾನು ಇದೆ ಎಂದರು. ಕೂಡಲೇ ಉಳಿದ ಬೀಜ ವಿತರಣೆಗೆ ತಹಶೀಲ್ದಾರ್‌ ಸೂಚಿಸಿದರು. ರೈತರ ಮೇಲೆ ಕೆಒಎಫ್‌ ಸಿಬ್ಬಂದಿ ಹನುಮಂತಪ್ಪ ಮಗ ಹಲ್ಲೆಗೆ ಮುಂದಾದಾಗ ರೈತರನ್ನು ತಹಶೀಲ್ದಾರ್‌ ಸಮಾಧಾನ ಪಡಿಸಿದ ಘಟನೆಯೂ ನಡೆಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.