ಇಡಿಗೆ ಮಾಹಿತಿ ನೀಡಿದ ಸಚಿವ ಜಮೀರ್
Team Udayavani, Jul 6, 2019, 5:00 AM IST
ಬೆಂಗಳೂರು: ಸಾವಿರಾರು ಮಂದಿ ಹೂಡಿಕೆದಾರರಿಗೆ ವಂಚಿಸಿರುವ ಐಎಂಎ ಕಂಪೆನಿಯ ಜತೆಗಿನ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ಖಾನ್ ಶುಕ್ರವಾರ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿ ಮಾಹಿತಿ ನೀಡಿದರು.
ಐಎಂಎ ಕಂಪೆನಿಗೆ ಆಸ್ತಿ ಮಾರಾಟ ಮಾಡಿ ಹಣ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಜುಲೈ 5ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸಚಿವ ಜಮೀರ್ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಶುಕ್ರವಾರ ಶಾಂತಿನಗರದಲ್ಲಿರುವ ಇ.ಡಿ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿದ್ದರು. ಸಚಿವ ಜಮೀರ್ ಅವರನ್ನು ತನಿಖಾಧಿಕಾರಿಗಳ ತಂಡ ಐಎಂಎ ಜತೆಗಿನ ಹಣದ ವ್ಯವಹಾರದ ಬಗ್ಗೆ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಸಚಿವ ಜಮೀರ್ ಅಹ್ಮದ್ ಐಎಎಂ ಕಂಪೆನಿಗೆ ಆಸ್ತಿ ಮಾರಾಟ ಮಾಡಿ ಹಣ ಪಡೆದ ಸಂಬಂಧ ಐಎಂಎ ಕೆಲವು ದಾಖಲೆಗಳನ್ನು ಸಲ್ಲಿಸಿದ್ದಾರೆ.
ಇ.ಡಿ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ‘ನಾನು ಯಾವುದೇ ಅಕ್ರಮ ಎಸಗಿಲ್ಲ. 2008ರಲ್ಲಿ ನಿವೇಶನ ಮಾರಾಟ ಕುರಿತ ದಾಖಲೆಗಳನ್ನು ಇಡಿ ಕೇಳಿದ್ದು ಅವುಗಳನ್ನು ನೀಡಿದ್ದೇನೆ. ಈ ಕುರಿತು ಆದಾಯ ತೆರಿಗೆ ಇಲಾಖೆ, ಲೋಕಾಯುಕ್ತ, ಚುನಾವಣಾ ಆಯೋಗದ ಅಫಿಡವಿಟ್ನಲ್ಲಿ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.