ಕ್ರೀಡಾ ಬಜೆಟ್: ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿಗೆ ಅಸ್ತು
Team Udayavani, Jul 6, 2019, 5:51 AM IST
ನವದೆಹಲಿ: ಈ ಸಲ ಕೇಂದ್ರ ಸರ್ಕಾರದಿಂದ ಮಂಡಿಸಲ್ಪಟ್ಟ ಬಜೆಟ್ನಲ್ಲಿ ಕ್ರೀಡೆಗೆ ನಿರೀಕ್ಷೆಯ ಮಟ್ಟದಲ್ಲಿ ಅನುದಾನ ದೊರಕಿಲ್ಲ. ಖೇಲೊ ಇಂಡಿಯಾದಡಿ ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ (ಎನ್ಎಸ್ಇಬಿ) ಆರಂಭಿಸುತ್ತಿರುವುದು ಹೊಸ ವಿಚಾರ. ಉಳಿದಂತೆ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ನಲ್ಲಿ ಪ್ರಕಟಿಸಲಾಗಿದ್ದುದ್ದೆ ಪುನರಾವರ್ತನೆಯಾಗಿದೆ. ಈ ಸಲ ಒಟ್ಟಾರೆ ಕ್ರೀಡೆಗೆ 411 ಕೋಟಿ ರೂ. ಮೀಸಲಿಡಲಾಗಿದೆ. ಕಳೆದ ಸಲ 316 ಕೋಟಿ ರೂ. ಕೊಡಮಾಡಲಾಗಿತ್ತು.
‘2017ರಲ್ಲಿ ಖೇಲೊ ಇಂಡಿಯಾ ಆರಂಭಿಸಲಾಗಿದೆ. ದೇಶದಲ್ಲಿ ಕ್ರೀಡಾಭಿವೃದ್ದಿಗೆ ಹೊಸದೊಂದು ಆಯಾಮ ನೀಡುವ ದೃಷ್ಟಿಯಿಂದ ರಾಷ್ಟ್ರೀಯ ಕ್ರೀಡಾ ಶಿಕ್ಷಣ ಮಂಡಳಿ ಆರಂಭಿಸಲಾಗುತ್ತಿದೆ. ಖೇಲೋ ಇಂಡಿಯಾದ ವ್ಯಾಪ್ತಿಯ ವಿಸ್ತರಣೆಗೆ ನಾವು ಬದ್ಧರಾಗಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಖೇಲೊ ಇಂಡಿಯಾ ಯೋಜನೆಯನ್ನು ಎನ್ಎಸ್ಇಬಿ ಸ್ಥಾಪಿಸುವ ಮೂಲಕ ಬಲಪಡಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿರ್ಧಾರವನ್ನು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್ಗೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
MUST WATCH
ಹೊಸ ಸೇರ್ಪಡೆ
China Badminton: ಚಿರಾಗ್- ಸಾತ್ವಿಕ್ ಸೆಮಿಫೈನಲ್ಗೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.