ಅಂಗನವಾಡಿ ಕಾರ್ಯಕರ್ತೆಯರ ಧರಣಿ ಶುರು
ಅಂಗನವಾಡಿಗಳಲ್ಲೇ ಎಲ್ಕೆಜಿ-ಯುಕೆಜಿ ನಡೆಸಲು ಮನವಿ | ಇಡಿಗಂಟು-ಎನ್‌ಪಿಎಸ್ ಹಣ ಕೂಡಲೇ ನೀಡಲು ಆಗ್ರಹ
Team Udayavani, Jul 6, 2019, 9:25 AM IST
ಧಾರವಾಡ: ಡಿಸಿ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಅಹೋರಾತ್ರಿ ಧರಣಿ ಆರಂಭಿಸಿದರು.
ಧಾರವಾಡ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಗರದ ಡಿಸಿ ಕಚೇರಿ ಎದುರು ಶುಕ್ರವಾರದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸಿದ್ದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಿ ಮುಚ್ಚುವಂತಾಗಿದೆ. ಹೀಗಾಗಿ ಕೇಂದ್ರಗಳಲ್ಲೇ ಎಲ್ಕೆಜಿ, ಯುಕೆಜಿ ನಡೆಸುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಿವೃತ್ತಿಯಾದ ಬಳಿಕ ಅವರಿಗೆ ನೀಡಬೇಕಾದ ಇಡಿಗಂಟು ಹಾಗೂ ಎನ್‌ಪಿಎಸ್ ಹಣವನ್ನು ಸರ್ಕಾರ ಕೂಡಲೇ ನೀಡಬೇಕು. ಗೋವಾ ಸರ್ಕಾರದ ಮಾದರಿಯಲ್ಲೇ ಸೇವಾ ಅವಧಿಯ ಆಧಾರದ ಮೇಲೆ ಗೌರವಧನವನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದರು.
ಅಧ್ಯಕ್ಷೆ ಎನ್.ಎಫ್. ಸಮುದ್ರಿ, ಸಾವಕ್ಕಾ ಕಮ್ಮಾರ, ಎಸ್.ಎಸ್. ಕುಲಕರ್ಣಿ, ವಿಜಯಲಕ್ಷ್ಮೀ ಹಿರೇಮಠ, ಲತಾ ಗೋಡಕೆ, ಕಸ್ತೂರಿ ಬೇಂದ್ರೆ, ರತ್ನವ್ವ ಶಿರೂರ, ಗಿರಿಜಾ ಬಡಿಗೇರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.