ಅಂಗನವಾಡಿಯಲ್ಲಿ ಎಲ್ಕೆಜಿ ಯುಕೆಜಿ ಆರಂಭಿಸಲು ಒತ್ತಾಯ

•ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ

Team Udayavani, Jul 6, 2019, 11:23 AM IST

hv-tdy-3..

ಹಾವೇರಿ: ಜಿಲ್ಲಾಡಳಿತ ಭವನ ಎದುರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ನಡೆಸಿದರು.

ಹಾವೇರಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಾಯಕಿಯರಿಗೆ ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.

ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದರು.

ಗೋವಾ ಸರ್ಕಾರ ಅಂಗನವಾಡಿ ಕಾರ್ಯಕರ್ತೆರಿಗೆ ಸೇವಾ ಅವಧಿಯ ಆಧಾರದ ಮೇಲೆ ಗೌರವ ಧನ ನೀಡುತ್ತಿದ್ದು, ಇದೇ ಮಾದರಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿರುವ 1914 ಅಂಗನವಾಡಿ ಕೇಂದ್ರಗಳನ್ನು ಕಿಂಡರ್‌ ಗಾರ್ಡ್‌ನ್‌ಗಳಾಗಿ ಪರಿವರ್ತಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸುವ ಮೂಲಕ ಅಂಗನವಾಡಿ ನರ್ಸರಿ ಸ್ಕೂಲ್ನಿಂದ ಸರ್ಟಿಫಿಕೆಟ್ ತರುವ ಮಕ್ಕಳಿಗೆ ಪ್ರಾಥಮಿಕ ಶಾಲೆಗಳಿಗೆ ಸೇರಿಸಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.

ಜು. 6ರಂದು ಸಹ ಧರಣಿ ಸತ್ಯಾಗ್ರಹ ಮುಂದುವರೆಯಲಿದ್ದು, ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆರು ಹಾಸಿಗೆ ಸಮೇತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ಜಿಲ್ಲಾ ಸಮಿತಿಯ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಪ್ರಧಾನ ಕಾರ್ಯದರ್ಶಿ ಜಿ.ಡಿ. ಪೂಜಾರ, ಸಂಚಾಲಕಿ ಸುನಂದಮ್ಮ ರೇವಣಕರ, ಲಲಿತಾ ನಾಗನಗೌಡ್ರ, ಜಯಮ್ಮ ದೇಸಳ್ಳಿ, ಶೀವಲೀಲಾ ಪಾಟೀಲ, ಗುರುನಾಥ ಲಕಮಾಪೂರ, ಬೇಬಿ ನಡುವಿನಮಠ ಸೇರಿದಂತೆ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.