ರೈತರ ಮೇಲೆ ದ್ವೇಷ ಬಿಟ್ಟು ನೀರು ಬಿಡಿ

ರೈತ ಮುಖಂಡ ಮಂಜೇಶ್‌ಗೌಡ ನೇತೃತ್ವದಲ್ಲಿ ರೈತರ ಪ್ರತಿಭಟನೆ

Team Udayavani, Jul 6, 2019, 2:21 PM IST

mandya-tdy-1..

ಶ್ರೀರಂಗಪಟ್ಟಣದಲ್ಲಿ ಕೆಆರ್‌ಎಸ್‌ನಿಂದ ಜಿಲ್ಲೆಯ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣ: ನಾಲೆಗಳಿಗೆ ನೀರು ಹರಿಸದ ಸರ್ಕಾರದ ಕ್ರಮ ಖಂಡಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ರೈತಪರ ಸಂಘಟನೆಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಕುವೆಂಪು ವೃತ್ತದಲ್ಲಿ ರೈತ ಮುಖಂಡ ಮಂಜೇಶ್‌ಗೌಡ ನೇತೃತ್ವದಲ್ಲಿ ಜಮಾಯಿಸಿದ ರೈತ ಸಂಘ, ದಲಿತ ಸಂಘಟನೆ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಮೈಸೂರು-ಬೆಂಗಳೂರು ಹೆದ್ಧಾರಿ ತಡೆದು ಪ್ರತಿಭಟನೆ ನಡೆಸಿದರು.

ರೈತರ ಕಡೆಗಣನೆ: ನಾಲೆಗಳಿಗೆ ನೀರು ಹರಿಸಲು ಹಲವಾರು ದಿನಗಳಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಿದರೂ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸದೆ, ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಯಾವುದೇ ಮಂತ್ರಿಗಳು, ಶಾಸಕರು ಆಗಮಿಸದೆ ರೈತರನ್ನು ಕಡೆಗಣಿಸಿದೆ. ರೈತರ ಬಗ್ಗೆ ಗಮನ ಹರಿಸದೆ ಕಟಾವಿಗೆ ಬಂದ ಕಬ್ಬು ಸೇರಿದಂತೆ ಇತರ ಬೆಳೆಗಳಿಗೆ ನೀರಿಲ್ಲದೆ ಪರದಾಡುವಂತಾಗಿದೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್‌ ಗೌಡ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಕಿಡಿಕಾರಿದರು.

ಮಲತಾಯಿ ಧೋರಣೆ: ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು ಮಾತನಾಡಿ, ಜಿಲ್ಲೆಯ ಬಗ್ಗೆ ಅಪಾರ ಗೌರವವಿದ್ದ ಮುಖ್ಯಮಂತ್ರಿಗಳು ಲೋಕಸಭೆ ಚುನಾವಣೆ ಬಳಿಕ ಮಲತಾಯಿ ಧೋರಣೆ ಅನುಸರಿಸು ತ್ತಿದ್ದಾರೆ. ಕೂಡಲೆ ರೈತರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು.

ದ್ವೇಷ ಬೇಡ, ನೀರು ಹರಿಸಿ: ತಾಲೂಕು ರೈತ ಸಂಘದ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ಮುಖ್ಯಮಂತ್ರಿಗಳು ನಾಲೆಗಳಿಗೆ ನೀರು ಹರಿಸದೆ, ಕೇಂದ್ರ ಕಾವೇರಿ ನೀರು ನಿರ್ವಹಣಾ ಮಂಡಳಿಯತ್ತ ಕೈ ತೋರಿಸುವುದು ಮುಖ್ಯಮಂತ್ರಿ ಕುಮಾರಸ್ವಾಮಿ ಘನತೆಗೆ ತಕ್ಕುದಲ್ಲ. ಅವರನ್ನು ಬೆಂಬಲಿಸಿ ಜಿಲ್ಲೆ 7 ಶಾಸಕರನ್ನು ಕೊಟ್ಟಿದೆ. ಆದರೆ, ಮಗನನ್ನು ಎಂಪಿ ಮಾಡಲಿಲ್ಲ ಎಂದು ಜಿಲ್ಲೆಯ ಜನರ ಬಗ್ಗೆ ಕ್ರೂರವಾಗಿ ಮಾತನಾಡುವುದು. ನಾಲೆಗಳಿಗೆ ನೀರು ಹರಿಸದಿರುವುದು ಸರಿಯಲ್ಲ ಎಂದರು. ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಎಂ.ಬಿ.ನಾಗಣ್ಣ, ರೈತ ಸಂಘದ ಕಾಯ್ನಾಧ್ಯಕ್ಷ ಸ್ವಾಮೀಗೌಡ, ಅಧ್ಯಕ್ಷ ಶ್ರೀಕಂಠಯ್ಯ, ಕರವೇ ಅಧ್ಯಕ್ಷ ಶಂಕರ್‌, ದಲಿತ ಸಂಘಟನೆಯ ಮುಖಂಡರಾದ ಕುಬೇರಪ್ಪ, ರವಿಚಂದ್ರ, ಪಿಎಸ್‌ಎಸ್ಕೆ ಮಾಜಿ ನಿರ್ದೇಶಕ ಪಾಂಡು, ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಕರವೇ ಹರೀಶ್‌, ಚಂದ್ರಶೇಖರ್‌, ಜಯರಾಮು, ವಿವಿಧ ಜನಪರ ಸಂಘಟನೆಗಳ ಕಾರ್ಯಕರ್ತರು ಅಪಾರ ಸಂಖ್ಯೆ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸಂಚಾರ ಅಸ್ತವ್ಯಸ್ತ: ಒಂದು ಗಂಟೆಗೂ ಹೆಚ್ಚುಹೊತ್ತು ಹೆದ್ದಾರಿ ತಡೆ ಮಾಡಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿ ಕರು ಪರದಾಡುವಂತಾಗಿದೆ. ಬಳಿಕ‌ ಸ್ಥಳಕ್ಕೆ ತಹಶೀಲ್ದಾರ್‌ ನಾಗೇಶ್‌ ಆಗಮಿಸಿ ಪ್ರತಿಭಟನಾ ಕಾರರ ಮನವೊಲಿಸಿದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.