ಗ್ರಾಮೀಣರು ನರೇಗಾ ಯೋಜನೆ ಬಳಸಿಕೊಳ್ಳಿ

ನರೇಗಾ ಯೋಜನೆಯಡಿ ವಿವಿಧ ಕಾಮಗಾರಿ ಕೈಗೊಳ್ಳಲು ಅವಕಾಶ: ಚಾಚೇನಹಟ್ಟಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ

Team Udayavani, Jul 6, 2019, 2:54 PM IST

rn-tdy-1..

ಮಾಗಡಿ ತಾಲೂಕಿನ ಬಾಚೇನಹಟ್ಟಿ ಗ್ರಾಪಂನಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ಜಿಲ್ಲಾ ಸಂಯೋಜಕ ಶ್ರೀನಿವಾಸಮೂರ್ತಿ ಮಾತನಾಡಿದರು.

ಮಾಗಡಿ: ನರೇಗಾ ಯೋಜನೆಯನ್ನು ಗ್ರಾಮೀಣ ಜನತೆ ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಹಳ್ಳಿಗಳ ಚಿತ್ರಣವೇ ಒದಲಾಗುತ್ತದೆ ಎಂದು ಚಾಚೇನಹಟ್ಟಿ ಗ್ರಾಪಂ ಅಧ್ಯಕ್ಷೆ ಮುನಿರತ್ನಮ್ಮ ಬಿ.ಅಶೋಕ್‌ ತಿಳಿಸಿದರು.

ತಾಲೂಕಿನ ಚಾಚೇನಹಟ್ಟಿ ಗ್ರಾಪಂನಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆಯಲ್ಲಿ ಮಾತನಾಡಿ, ನರೇಗಾ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ದನ, ಕುರಿ, ಮೇಕೆ, ಹಂದಿ ಕೊಟ್ಟಿಗೆಯನ್ನು ನಿರ್ಮಿಸಿಕೊಳ್ಳಬಹುದು. ನರೇಗಾ ಯೋಜನೆಯಡಿ ಉದ್ಯೋಗಕ್ಕೆ ಕಡ್ಡಾಯವಾಗಿ ಜಾಬ್‌ ಕಾರ್ಡ್‌ ಹೊಂದಿರಬೇಕು. ತಮಗೆ ಕೂಲಿ ಕೆಲಸಬೇಕೆಂದು ಗ್ರಾಪಂಗೆ ಅರ್ಜಿ ಸಲ್ಲಿಸಿದರೆ 15 ದಿನದೊಳಗಾಗಿ ತಮಗೆ ನರೇಗಾ ಯೋಜನೆಯಡಿ ಕೂಲಿ ಕೊಡಲು ಪಂಚಾಯ್ತಿ ಸಿದ್ಧವಿದೆ ಎಂದರು.

ಜನರಿಗೆ ಸೌಲಭ್ಯದ ಮಾಹಿತಿ ನೀಡಿ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌ ಮಾತನಾಡಿ, ಗ್ರಾಮಸಭೆಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಿಯಿಂದ ಜನರ ಸಮಸ್ಯೆ ಬಗೆಹರಿಯುತ್ತಿಲ್ಲ. ಮುಂದಿನ ಸಭೆಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಜನರಿಗೆ ಸರ್ಕಾರಿ ಸೌಲಭ್ಯಗಳ ಸಂಪೂರ್ಣ ಮಾಹಿತಿ ನೀಡಬೇಕಿದೆ. ಜಲಮೃತ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ನರೇಗಾ ದುರ್ಬಳಕೆ ಬೇಡ: ನರೇಗಾವನ್ನು ದುರ್ಬಳಕೆ ಮಾಡಿಕೊಂಡರೆ ತಪ್ಪಿಸ್ಥರಿಗೆ ಶಿಕ್ಷೆ ತಪ್ಪಿದ್ದಲ್ಲ. ಗ್ರಾಪಂ ಅಧ್ಯಕ್ಷ ಹಾಗೂ ಪಿಡಿಒ ಅವರು ಪ್ರಮುಖರಾಗಿರುತ್ತಾರೆ. ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳಬೇಡಿ. ಜಿಲ್ಲೆಯ ಇತಿಹಾಸದಲ್ಲೇ ಅಜ್ಜನಹಳ್ಳಿ, ಹುಳ್ಳೇನಹಳ್ಳಿ, ಬಿಸ್ಕೂರು ಗ್ರಾಪಂ ನರೇಗಾ ದುರ್ಬಳಕೆ ಮಾಡಿಕೊಡಿದೆ. ಗ್ರಾಪಂ ಅಧಿಕಾರಿಗಳು, ಅಧ್ಯಕ್ಷರು ಜವಾಬ್ದಾರಿಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಅಕ್ಟೋಬರ್‌ನಿಂದ ಮಾರ್ಚ್‌ವರೆವಿಗೂ ನಾಲ್ಕು ಹಂತದಲ್ಲಿ ಲೆಕ್ಕಪರಿಶೋಧನೆ ನಡೆಯುತ್ತದೆ. 6 ತಿಂಗಳಲ್ಲಿ ಗ್ರಾಪಂ ಅಧಿಕಾರಿಗಳು ಗ್ರಾಮಾಭಿವೃದ್ಧಿ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ, ಪಟ್ಟಿ ಮಾಡಿ ಅನುಮೋದನೆಗೆ ಸಭೆಗೆ ಇಡಬೇಕಿರುತ್ತದೆ. ಸಾಮಾಜಿಕ ಲೆಕ್ಕ ಪರಿಶೋಧನೆ ಸಾರ್ವಜನಿಕ ಸಮ್ಮುಖದಲ್ಲೇ ನಡೆಯುತ್ತದೆ. ಆದ್ದರಿಂದ ಗ್ರಾಮೀಣ ಜನರು ಕಡ್ಡಾಯವಾಗಿ ಸಭೆಗೆ ಹಾಜರಿದ್ದು, ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಲು ಅವಕಾಶವಿದೆ ಎಂದರು.

ತಾಲೂಕು ಸಾಮಾಜಿಕ ಲೆಕ್ಕಪರಿಶೋಧನಾ ಸಂಯೋಜಕ ವಿ.ನಾಗರಾಜು ಮಾತನಾಡಿದರು. ಮಾರ್ಗದರ್ಶಿ ಅಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಎಇಇ ರಾಮಣ್ಣ, ಗ್ರಾಪಂ ಪಿಡಿಒ ಕಾಂತರಾಜು, ಉಪಾಧ್ಯಕ್ಷ ಮರಿಯಪ್ಪ, ಸದಸ್ಯರಾದ ಮುನಿರತ್ನಮ್ಮ ಗಣೇಶ್‌, ರಂಗನರಸಿಂಹಯ್ಯ, ಜಯಮ್ಮ ಕೆಂಚಪ್ಪ, ನಾರಾಯಣ, ಮಂಜುನಾಥ್‌, ರಂಗಸ್ವಾಮಿ, ತಿಮ್ಮಕ್ಕ, ಯೋಗೇಶ್‌, ಪಾರ್ವತಿಬಾಯಿ, ಯಶೋಧ, ಭಾನುಮತಿ ಪ್ರಕಾಶ್‌, ದೈತಪ್ಪ, ಮಂಜುಳ ನಾಗರಾಜು, ಲಕ್ಕಿಬಾಯಿ, ಅಶ್ವಿ‌ನಿಬಾಯಿ, ಕಾರ್ಯದರ್ಶಿ ಪಿ.ರಾಮಚಂದ್ರಯ್ಯ ಹಾಜರಿದ್ದರು.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.