ಪಿಂಚಣಿ ಅರ್ಹರ ಮನೆ ತಲುಪಲಿ

ಕಂದಾಯ ಸಚಿವ ಸಂಸದೀಯ ಕಾರ್ಯದರ್ಶಿ ಡಿಸೋಜಾ ಸೂಚನೆ

Team Udayavani, Jul 6, 2019, 5:22 PM IST

06-July-39

ಬಳ್ಳಾರಿ: ನಗರದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಹೊಸದಾಗಿ ಮಾಸಾಶನ ಪಡೆದ ಫಲಾನುಭವಿಗಳಿಗೆ ಐವಾನ್‌ ಡಿ.ಸೋಜಾ ಆದೇಶ ಪ್ರತಿಗಳನ್ನು ವಿತರಿಸಿದರು.

ಬಳ್ಳಾರಿ: ಪಿಂಚಣಿ ಅದಾಲತ್‌ಗಳನ್ನು ಹಾಗೂ ಕಂದಾಯ ಅದಾಲತ್‌ಗಳನ್ನು ಅಧಿಕಾರಿಗಳು ಆಂದೋಲನದ ರೂಪದಲ್ಲಿ ನಡೆಸಿ ಪ್ರತಿಯೊಬ್ಬ ಅರ್ಹ ಪಿಂಚಣಿದಾರನಿಗೆ ಮನೆ-ಮನೆಗೆ ಪಿಂಚಣಿ ಸೌಲಭ್ಯ ತಲುಪಿಸುವಲ್ಲಿ ಕ್ರಮವಹಿಸಬೇಕು ಎಂದು ಕಂದಾಯ ಸಚಿವ ಸಂಸದೀಯ ಕಾರ್ಯದರ್ಶಿ, ಎಂಎಲ್ಸಿ ಐವಾನ್‌ ಡಿಸೋಜಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರ್ಹರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವುದು ನಮ್ಮ ಕರ್ತವ್ಯ. ನಮ್ಮ ಸರ್ಕಾರದ ಬದ್ಧತೆ ಸಾಮಾಜಿಕವಾಗಿ ಭದ್ರತೆ ನೀಡುವುದಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ 4 ಲಕ್ಷ ಜನರು ವಿವಿಧ ಯೋಜನೆಗಳಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿಯೇ ಈ ಜಿಲ್ಲೆಯಲ್ಲಿ 2516 ಜನರಿಗೆ ಪಿಂಚಣಿ ಸೌಲಭ್ಯ ಕಲ್ಪಿಸಿರುವುದು ಮತ್ತು ಇದುವರೆಗೆ ನಡೆಸಲಾದ 1674 ಕಂದಾಯ ಅದಾಲತ್‌ಗಳಲ್ಲಿ 2870 ಅರ್ಜಿಗಳು ವಿಲೇವಾರಿ ಮಾಡಿ ಶೇ. 98ರಷ್ಟು ಪ್ರಗತಿ ಸಾಸಿರುವುದು ಶ್ಲಾಘನೀಯ ಎಂದರು.

ಭೂಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿದಾರರಿಗೆ ಅಲೆದಾಡಿಸುವ ಕೆಲಸ ಮಾಡದೇ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡಿ ಎಂದು ಸಲಹೆ ನೀಡಿದ ಅವರು ಜಿಲ್ಲೆಯಲ್ಲಿ 30 ಗ್ರಾಮಗಳಲ್ಲಿ ಸಾರ್ವಜನಿಕ ರುದ್ರಭೂಮಿ ಸ್ಥಾಪನೆಗೆ ಬಾಕಿ ಇದ್ದು, ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಸಿ ರುದ್ರಭೂಮಿ ಸ್ಥಾಪಿಸಿ ಎಂದು ಸೂಚಿಸಿದರು. ಜಿಲ್ಲಾಧಿಕಾರಿ ನಕುಲ್ ಅವರು ಒಂದು ತಿಂಗಳೊಳಗೆ ಈ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ರೈತಕುಟುಂಬಗಳ ಮನೆಗೆ ಮತ್ತೂಮ್ಮೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದ ಡಿ.ಸೋಜಾರಿಗೆ ಡಿಸಿ ಎಸ್‌.ಎಸ್‌. ನಕುಲ್ ಉತ್ತರಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ 2018 ಏ. 1ರಿಂದ 2019 ಜೂನ್‌ ಅಂತ್ಯದವರೆಗೆ ಒಟ್ಟು 32 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದುವರೆಗೆ 26 ಜನ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಮತ್ತು ಎಫ್‌ಎಸ್‌ಎಲ್ ವರದಿಗಾಗಿ 5 ಪ್ರಕರಣಗಳು ಬಾಕಿ ಇವೆ ಎಂದು ಜಿಲ್ಲಾಧಿಕಾರಿ ನಕುಲ್ ಅವರು ಸಭೆಗೆ ವಿವರಿಸಿದರು.

ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಅಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳ ಸಕ್ರಮೀಕರಣಕ್ಕಾಗಿ 94ಸಿ ಮತ್ತು 94 ಸಿಸಿ ಅಡಿ ಸಲ್ಲಿಸಿದ ಅರ್ಜಿಗಳ ವಿಲೇವಾರಿಗೆ ಬಳ್ಳಾರಿ ಜಿಲ್ಲಾಡಳಿತ ಕೈಗೊಂಡ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಡಿ. ಸೋಜಾ, ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು. ಇದೇ ಸಂದರ್ಭದಲ್ಲಿ ಪಿಂಚಣಿ ಅದಾಲತ್‌ ನಡೆಸಿದರು ಮತ್ತು ಹೊಸದಾಗಿ ಪಿಂಚಣಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಪಿಂಚಣಿ ಪ್ರಮಾಣಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.