ಗ್ರಾಮೀಣ ಜನರ ಸಮಸ್ಯೆ ವಾರದೊಳಗೆ ಪರಿಹರಿಸಿ
Team Udayavani, Jul 7, 2019, 3:00 AM IST
ಗೌರಿಬಿದನೂರು: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಬಳಿಗೆ ಹೋಗಿ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸಬೇಕೆಂಬುದು ಸಂವಿಧಾನದ ಆಶಯ ಹಾಗೂ ನಮ್ಮ ಕಳಕಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್.ಹೆಚ್.ಶಿವಶಂಕರರೆಡ್ಡಿ ನುಡಿದರು.
ಗೌರಿಬಿದನೂರು ತಾಲೂಕು ಡಿ.ಪಾಳ್ಯ ಹೋಬಳಿ ಕೇಂದ್ರದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಚೇರಿಗಳಿಗೆ ಅಲೆದು ಅಲ್ಲಿ ಕೆಲಸವಾಗದಿದ್ದಾಗ ಅಸಹಾಯಕತೆಯಿಂದ ಕೆಲಸ ಆಗುವುದಿಲ್ಲ ಎಂದು ಕೈಚೆಲ್ಲಿ ಕುಳಿತುಕೊಳ್ಳುವವರೇ ಹೆಚ್ಚು.
ಸಮಸ್ಯೆಗಳಿಗೆ ಸ್ಪಂದಿಸಿ: ಧ್ವನಿ ಇಲ್ಲದವರ ಮನೆಯ ಬಾಗಿಲಿಗೆ ಹೋಗಿ ನಾವು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕಿದೆ. ನಾವು ಜನರ ಸೇವೆ ಮಾಡಲು ಜನರು ನಮಗೆ ಮತ ನೀಡಿ ಗೆಲ್ಲಿಸಿರುತ್ತಾರೆ. ಅಂತಹವರ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಪಂ, ತಾಪಂ, ಜಿಪಂ, ಶಾಸಕರು, ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲಾ ಹಂತಗಳಲ್ಲಿರುವವರೂ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಹೇಳಿದರು.
ಆಧಾರ್ ತಿದ್ದುಪಡಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಆಧಾರ್ ಕಾರ್ಡ್ ಅವ್ಯವಸ್ಥೆ ತಿದ್ದುಪಡಿ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹೋಬಳಿ ಕೇಂದ್ರಗಳ ಜೊತೆಗೆ ಪಂಚಾಯ್ತಿಗೂ ಆಧಾರ್ ತಿದ್ದುಪಡಿ ನೋಂದಣಿಗೆ ಅವಕಾಶ ಮಾಡಿಕೊಡಿ ಎಂದು ಸಚಿವರು ತಿಳಿಸಿದರು.
ವಾರದಲ್ಲಿ ಪರಿಹರಿಸಿ: ವೃದ್ಧಾಪ್ಯ, ವಿಧವಾ, ಅಂಗವಿಕಲರ ವೇತನ, ನಿವೇಶನ, ಖಾತೆ ಬದಲಾವಣೆ, ಜೊತೆಗೆ ಸರ್ಕಾರಿ ಸವಲತ್ತುಗಳನ್ನು ಪಡೆಯುವಲ್ಲಿ ವಿಫಲವಾದವರು ನಮ್ಮಲ್ಲಿಗೆ ಬರುತ್ತಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಅವರ ಸಮಸ್ಯೆಯನ್ನು ಒಂದು ವಾರದಲ್ಲಿ ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜನಸ್ಪಂದನ ಸಭೆಯಲ್ಲಿ ಪ್ರಮುಖವಾಗಿ ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಾಂಗವೇತನ, ನಿವೇಶನ, ಮನೆ, ಖಾತೆ ಬದಲಾವಣೆ, ಬಸ್ ಸಮಸ್ಯೆ, ನೀರಿನ ಸಮಸ್ಯೆ ಸೇರಿದಂತೆ 261ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಎಲ್ಲವನ್ನು ಸ್ಥಳದಲ್ಲೇ ಪರಿಶೀಲಿಸಿ ಸಚಿವರು ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗೆ ಹಾಗೂ ಜಿಲ್ಲಾ ಮತ್ತು ತಾಲಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಅರ್ಜಿಗಳ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಜಿಪಂ ಅಧ್ಯಕ್ಷ ಮಂಜುನಾಥ್, ಡೀಸಿ ಅನಿರುದ್ಧ್ ಶ್ರವಣ್, ಜಿಪಂ ಸಿಇಒ ಗುರುದತ್ ಹೆಗಡೆ, ತಾಪಂ ಅಧ್ಯಕ್ಷ ಚಿಕ್ಕೇಗೌಡ, ಮುಖಂಡ ಪ್ರಕಾಶ್ ರೆಡ್ಡಿ, ಜಿಲ್ಲಾ ಕಾಂಗ್ರೆಸ್ ಮುಖಂಡ ಕೇಶವ ರೆಡ್ಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಬೊಮ್ಮಣ್ಣ , ಜಿಪಂ ಸದಸ್ಯೆ ಅರುಂಧತಿ, ಉಪವಿಭಾಗಾಧಿಕಾರಿ ಶಿವಸ್ವಾಮಿ, ಜಿಪಂ ಮಾಜಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ತಹಶೀಲ್ದಾರ್ ಶ್ರೀನಿವಾಸ್, ತಾಪಂ ಇಒ ಉಮಾಶಂಕರ್, ಬಿಇಒ ಕೃಷ್ಣಮೂರ್ತಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.