ಪಕ್ಷದ ಕಾರ್ಯಕರ್ತರೇ ಬಿಜೆಪಿ ಆಸ್ತಿ: ಶಾಸಕ ಬಾಲಚಂದ್ರ
Team Udayavani, Jul 7, 2019, 9:58 AM IST
ಗೋಕಾಕ: ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ನಡೆದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಪ್ರಾಥಮಿಕ ಸದಸ್ಯತ್ವ ಕೋರಿಕೆ ಪತ್ರಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದರು.
ಗೋಕಾಕ: ದೇಶದೆಲ್ಲೆಡೆ ಕಮಲ ಅರಳಲು ಕಾರ್ಯಕರ್ತರ ತ್ಯಾಗ, ಪರಿಶ್ರಮ ಅಪಾರವಾಗಿದ್ದು, ಕಾರ್ಯಕರ್ತರೇ ಪಕ್ಷದ ಆಸ್ತಿಯಾಗಿದ್ದಾರೆ. ಬಿಜೆಪಿಯಿಂದ ಇಂದಿನಿಂದ ನಡೆಯುತ್ತಿರುವ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ನಡೆಸಬೇಕು. ಅರಭಾವಿ ಮತಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಹೊಸ ಸದಸ್ಯರನ್ನಾಗಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದರು.
ಇಲ್ಲಿನ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಶನಿವಾರ ಹಮ್ಮಿಕೊಂಡಿದ್ದ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ಯಾವುದೇ ಕಾರಣಕ್ಕೂ ಹೆದರಬೇಡಿ ಎಂದು ಹೇಳಿದರು.
ಅರಭಾವಿ ಕ್ಷೇತ್ರವೊಂದರಲ್ಲಿಯೇ ಬಿಜೆಪಿಯಿಂದ ಲಕ್ಷಕ್ಕೂ ಅಧಿಕ ಮತದಾರರನ್ನು ಸದಸ್ಯರನ್ನಾಗಿ ಮಾಡಲಾಗಿತ್ತು. ಇದು ರಾಜ್ಯದಲ್ಲಿಯೇ ದಾಖಲೆಯಾಗಿತ್ತು. ಈ ಬಾರಿಯೂ ಮತಕ್ಷೇತ್ರದಿಂದ ಅತೀ ಹೆಚ್ಚು ಹೊಸ ಸದಸ್ಯರನ್ನಾಗಿಸಲು ಕಾರ್ಯಕರ್ತರು ಶ್ರಮಿಸಬೇಕು. ಬಿಜೆಪಿಗೆ ಹೆಚ್ಚಿನ ಶಕ್ತಿ ತುಂಬಬೇಕೆಂದು ಹೇಳಿದರು. ಇದೇ ವೇಳೆ ಬಿಜೆಪಿ ಸದಸ್ಯತ್ವ ಅಭಿಯಾನದ ಪ್ರಾಥಮಿಕ ಸದಸ್ಯತ್ವ ಕೋರಿಕೆಯ ಪತ್ರಗಳನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡುಗಡೆ ಮಾಡಿದರು. ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಉಪಾಧ್ಯಕ್ಷ ಬಸಗೌಡ ಪಾಟೀಲ(ನಾಗನೂರ), ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೂಳಪ್ಪ ಹೊಸಮನಿ, ರಾಜ್ಯ ಬಿಜೆಪಿ ರೈತಮೋರ್ಚಾ ಕಾರ್ಯದರ್ಶಿ ಗೋವಿಂದ ಕೊಪ್ಪದ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಸಗೌಡ ಪಾಟೀಲ, ಘಯೋಮನೀಬ ಮಹಾಮಂಡಳ ಅಧ್ಯಕ್ಷ ಅಶೋಕ ಖಂಡ್ರಟ್ಟಿ, ಮುಖಂಡರಾದ ಅಪ್ಪಯ್ಯ ಬಡ್ನಿಂಗಗೋಳ, ರಾಮಣ್ಣಾ ಮಹಾರಡ್ಡಿ, ಎಲ್.ಎನ್. ಬೂದಿಗೊಪ್ಪ, ಬಸವಂತ ಕಮತಿ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ಪರ್ವತಗೌಡ ಪಾಟೀಲ, ಮಹಾದೇವಪ್ಪ ಭೋವಿ, ಶಿದ್ಲಿಂಗ ಕಂಬಳಿ, ಅಜೀಜ ಡಾಂಗೆ, ರಮೇಶ ಸಣ್ಣಕ್ಕಿ, ರವಿ ಪರುಶೆಟ್ಟಿ ಇದ್ದರು. ಪರಸಪ್ಪ ಬಬಲಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.