ಕೊನೆಗೂ ‘ಕೈ’ ಕೊಟ್ಟರು ಪ್ರತಾಪಗೌಡ
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ •ಊಹಾಪೋಹಗಳಿಗೆ ಬಿತ್ತು ತೆರೆ
Team Udayavani, Jul 7, 2019, 10:37 AM IST
ಸಿದ್ಧಯ್ಯಸ್ವಾಮಿ ಕುಕನೂರು
ರಾಯಚೂರು: ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ ಕೊನೆಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮಸ್ಕಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸತತ ಮೂರು ಬಾರಿ ಗೆಲುವು ದಾಖಲಿಸುವ ಮೂಲಕ ಹ್ಯಾಟ್ರಿಕ್ ಬಾರಿಸಿದ್ದ ಅವರು, ರಾಜಕೀಯ ಸ್ಥಿತ್ಯಂತರ ಮಾಡಿಕೊಂಡಿದ್ದು ಇದೇ ಮೊದಲಲ್ಲ. ಬಿಜೆಪಿಯಿಂದ ರಾಜಕೀಯ ಜೀವನ ಆರಂಭಿಸಿದ್ದ ಅವರು, ಎರಡನೇ ಬಾರಿ ಕಾಂಗ್ರೆಸ್‌ನಿಂದ ಗೆದ್ದು ಶಾಸಕರಾಗಿದ್ದರು. ಮೂರನೇ ಬಾರಿ ಕಾಂಗ್ರೆಸ್‌ನಿಂದ ಅಖಾಡಕ್ಕಿಳಿದಿದ್ದರಾದರೂ ಕೂದಲೆಳೆ ಅಂತರದಲ್ಲಿ ಗೆಲುವು ದಾಖಲಿಸಿದ್ದರು. ಅತಂತ್ರ ವಿಧಾನಸಭೆ ನಿರ್ಮಾಣವಾದಾಗ ಬಿಜೆಪಿಯಿಂದ ಶುರುವಾದ ಆಪರೇಷನ್ ಪ್ರಹಸನದಲ್ಲಿ ಮೊದಲು ಕೇಳಿ ಬಂದ ಹೆಸರೇ ಪ್ರತಾಪಗೌಡ ಪಾಟೀಲ ಅವರದ್ದಾಗಿತ್ತು.
ಬಿಜೆಪಿ ಸಖ್ಯ: ಪ್ರತಾಪಗೌಡ ಪಾಟೀಲ ಮುಂಚೆಯಿಂದಲೂ ಬಿಜೆಪಿ ವರಿಷ್ಠರು ಹಾಗೂ ಅನೇಕ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದರು. ಅಲ್ಲದೇ, ರೆಬೆಲ್ ಶಾಸಕ ರಮೇಶ ಜಾರಕಿಹೊಳಿ ಜತೆಗೆ ನಿರಂತರ ಸಂಪರ್ಕದಲ್ಲಿದ್ದರು. ಅದರಲ್ಲೂ ಬಿ.ಎಸ್.ಯಡಿಯೂರಪ್ಪರ ಬಗ್ಗೆ ಅವರಿಗೆ ತುಸು ಹೆಚ್ಚೇ ಒಲವಿತ್ತು. ಹೀಗಾಗಿ ಅವರ ಮೇಲಿನ ಅಭಿಮಾನಕ್ಕಾಗಿ ‘ಆಪರೇಷನ್ ಕಮಲ’ದ ಮೊದಲ ಶಾಸಕರಾಗಿ ಗುರುತಿಸಿಕೊಂಡಿದ್ದರು.
ನಿಮಗೆ ಎಷ್ಟು ಶಾಸಕರು ಬೇಕು ಅಷ್ಟು ಜನರ ರಾಜೀನಾಮೆ ಪಡೆಯಿರಿ. ನಾನು ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಲು ಸಿದ್ಧ. ಆದರೆ, ಪದೇ ಪದೇ ತಮ್ಮ ಹೆಸರು ಬಳಸದಂತೆ ಬಿಜೆಪಿ ವರಿಷ್ಠರಿಗೆ ವಿನಂತಿಸಿದ್ದರು ಎನ್ನಲಾಗುತ್ತಿದೆ. ಕೊನೆಗೂ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎನ್ನಲಾಗಿದೆ.
ನಿಗಮವೂ ಸಿಕ್ಕಿತ್ತು: ಈ ಹಿಂದೆ ‘ಆಪರೇಷನ್ ಕಮಲ’ ಬೆಳವಣಿಗೆ ನಡೆದಾಗ ಸಿಎಂ ಎಚ್.ಡಿ. ಕುಮಾರಸ್ವಾಮಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಪ್ರತಾಪಗೌಡ ಪಾಟೀಲ ಹಾಗೂ ಗ್ರಾಮೀಣ ಕ್ಷೇತ್ರದ ದದ್ದಲ್ ಬಸನಗೌಡರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಸಮಾಧಾನಪಡಿಸುವ ಯತ್ನ ನಡೆಸಿದ್ದರು. ಮೊದಲ ಬಾರಿಗೆ ಗೆದ್ದಿರುವ ದದ್ದಲ್ ಅಷ್ಟಕ್ಕೇ ಸಮಾಧಾನಗೊಂಡಿದ್ದರೆ, ಹ್ಯಾಟ್ರಿಕ್ ಸಾಧಿಸಿರುವ ಪ್ರತಾಪಗೌಡರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕೊರಗು ಮಾತ್ರ ಕುಗ್ಗಿರಲಿಲ್ಲ. ಆ ಅಸಮಾಧಾನದ ಫಲವೇ ಅವರ ರಾಜೀನಾಮೆಗೆ ಕಾರಣ ಎಂದರೂ ತಪ್ಪಲ್ಲ.
ಶಾಸಕ ಪ್ರತಾಪಗೌಡ ಪಾಟೀಲ ತಮ್ಮ ರಾಜಕೀಯ ಭವಿಷ್ಯವನ್ನೇ ಅಡವಿಟ್ಟು ಇಂಥ ನಿರ್ಧಾರ ಕೈಗೊಂಡಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೀಸಿದ್ದ ಬಿಜೆಪಿ ಅಲೆಗೆ ಅವರ ಗೆಲುವು ಕಷ್ಟ ಎಂದೇ ಹೇಳಲಾಗಿತ್ತು. ಬಿಜೆಪಿಯ ಬಸನಗೌಡ ತುರ್ವಿಹಾಳ ವಿರುದ್ಧ ಕೇವಲ 202 ಮತಗಳ ಅಂತರದಿಂದ ಗೆಲುವು ದಾಖಲಿಸಿರುವುದೇ ಅದಕ್ಕೆ ಸಾಕ್ಷಿ. ಆದರೀಗ ಅವರು ಉಪ ಚುನಾವಣೆ ಎದುರಿಸಿದರೂ ಗೆಲುವು ಖಚಿತ ಎಂದು ಹೇಳುವುದು ಕಷ್ಟ . ಹೀಗಾಗಿ ತಮ್ಮ ರಾಜಕೀಯ ಭವಿಷ್ಯವನ್ನೇ ಅಡವಿಟ್ಟು ಈ ನಿರ್ಧಾರ ಕೈಗೊಂಡರಾ ಎಂಬ ಮಾತು ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.