ಬಳ್ಕೂರು: ಪ್ರವಾಹ ಸಂತ್ರಸ್ತರ ರಕ್ಷಣೆಯ ಅಣಕು ಪ್ರದರ್ಶನ
ವಾರಾಹಿ ನದಿ ನೀರು ತುಂಬಿ ಹರಿವ ವೇಳೆ ಮುಂಜಾಗ್ರತೆ
Team Udayavani, Jul 7, 2019, 11:18 AM IST
ನೆರೆ ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸುವ ಅಣಕು ಪ್ರದರ್ಶನ.
ಬಸ್ರೂರು, ಜು. 6: ಬಳ್ಕೂರು, ಹಟ್ಟಿಕುದ್ರು, ಕಂಡ್ಲೂರು, ಬಸ್ರೂರಿನ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ವಾರಾಹಿ ನದಿ ನೀರು ತುಂಬಿ ಹರಿದು ಪ್ರವಾಹ ಉಂಟಾಗುತ್ತದೆ. ಆ ಸಂದರ್ಭಗಳಲ್ಲಿ ಸಂತ್ರಸ್ತರನ್ನು ರಕ್ಷಣೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸುವ ಅಣಕು ಪ್ರದರ್ಶನವನ್ನು ಬಳ್ಕೂರು ಕಳುವಿನ ಬಾಗಿಲಿನ ವೆಂಟೆಡ್ ಡ್ಯಾಂ ಸಮೀಪ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ, ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳದ ಸಹಕಾರದಲ್ಲಿ ಇದನ್ನು ಏರ್ಪಡಿಸಲಾಗಿತ್ತು.
ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಬಳ್ಕೂರು ವಾರಾಹಿ ನದಿ ತಟದಲ್ಲಿದೆ. ಈ ಪ್ರದೇಶದಲ್ಲಿ ಯಾವ ಸಮಯದಲ್ಲಿಯೂ ಪ್ರವಾಹ ಉಂಟಾಗಬಹುದು. ಅಂತಹ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿದವರನ್ನು ಮೇಲೆತ್ತುವುದು, ಅವರನ್ನು ದಡಕ್ಕೆ ತಂದ ಅನಂತರ ಉಪಚರಿಸುವುದು ಹೇಗೆ ಎನ್ನುವ ಮಾಹಿತಿಗಳನ್ನು ಸ್ಥಳೀಯರಿಗೆ ಅರಿವು ಮೂಡಿಸುವ ಕುರಿತಂತೆ ಈ ಪ್ರದರ್ಶನ ನಡೆಸಲಾಗಿದೆ. ಮುಂದೆಯೂ ಬೇಕಾದರೆ ಇದನ್ನು ಜಿಲ್ಲಾಡಳಿತದಿಂದ ನಡೆಸಲಾಗುವುದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಎಸ್. ಮಧುಕೇಶ್ವರ, ತಹಶೀಲ್ದಾರ್ ತಿಪ್ಪೇಸ್ವಾಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಿರಣ್ ಪೆಡ್ನೇಕರ್, ತಾಲೂಕು ಪಂಚಾಯತ್ ಉಪಾಧ್ಯಕ್ಷ ರಾಮ್‌ಕಿಶನ್ ಹೆಗ್ಡೆ, ಕುಂದಾಪುರ ಡಿ.ವೈ.ಎಸ್.ಪಿ. ದಿನೇಶ್ ಕುಮಾರ್, ಸಿ.ಪಿ.ಐ. ಮಂಜಪ್ಪ, ಎಸ್.ಐ. ಶ್ರೀಧರ್ ನಾಯ್ಕ, ತಾಲೂಕು ಪಂಚಾಯತ್ ಸದಸ್ಯೆ ಜ್ಯೋತಿ ಪುತ್ರನ್, ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು, ಜಿ.ಪಂ. ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ, ಬಳ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಕ್ಷತ್ ಶೇರೆಗಾರ್, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ ಅಗ್ನಿಶಾಮಕ ದಳ, ಗೃಹರಕ್ಷಕ ದಳ, ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಶಾಲಾ ಮಕ್ಕಳು, ಸಾರ್ವಜನಿಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.