ಗ್ರಾಮ ಪಂಚಾಯ್ತಿ ಗೊಂದು ಕೆರೆ ಅಭಿವೃದಿ


Team Udayavani, Jul 7, 2019, 1:04 PM IST

rn-tdy-2

ರಾಮನಗರ: ತಾಲೂಕಿನ ಪ್ರತಿ ಗ್ರಾಮ ಪಂಚಾಯ್ತಿಯ ತಲಾ ಒಂದು ಕರೆಯನ್ನು ಜಲಾಮೃತ ಕಾರ್ಯಕ್ರಮದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಾಲೂಕು ಪಂಚಾಯ್ತಿ ಇಒ ಎಂ.ಬಾಬು ಹೇಳಿದರು. ತಾಲೂಕಿನ ಕೈಲಾಂಚ ಹೋಬಳಿಯ ಬನ್ನಿಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಲು ಭೇಟಿ ನೀಡಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಜಲಾಮೃತ ಕಾರ್ಯಕ್ರಮ ದಡಿಯಲ್ಲಿ ನರೇಗಾ ಯೋಜನೆಯನ್ನು ಬಳಸಿ ಕೊಂಡು ಕರೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿಯ ಗುಣಮಟ್ಟ ಪರಿಶೀಲನೆಗೆ ತಾವು ಆಗಿಮಿಸಿದ್ದೇನೆ. ಜಲಾಮೃತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲಾ ಪಂಚಾಯತ್‌ನಿಂದ ಕ್ರಿಯಾ ಯೋಜನೆಗೆ ಮಾಡಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದರು.

ಕೆರೆ ಅಭಿವೃದ್ದಿಯ ಜೊತೆಗೆ, ಕೆರೆಗೆ ನೀರು ಹರಿದು ಬರುವ ಕಾಲುವೆ, ಹಳ್ಳ, ನಾಲೆಗಳನ್ನು ಸಹ ದುರಸ್ತಿ ಕೈಗೊಳ್ಳಲಾಗುವುದು. ಅಗತ್ಯ ವಿರುವೆಡೆ ಜೆಕ್‌ ಡ್ಯಾಂಗಳನ್ನು ನಿರ್ಮಿಸಲಾಗುವುದು. ಕೆರೆ ಯಲ್ಲಿ ನೀರು ನಿಂತರೆ ಪ್ರಾಣಿ-ಪಕ್ಷಿಗಳಿಗೆ ನೀರು ಸಿಗಲಿದೆ. ಅಂತರ್ಜಲ ಮಟ್ಟವು ಸುಧಾರಿಸಲಿದೆ. ಕಾರ್ಯಕ್ರಮದ ಯಶಸ್ವಿಗೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆ ಸಹಯೋಗ ಪಡೆದು ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಜಲಾಮೃತ ಕಾರ್ಯಕ್ರಮದ ಯಶಸ್ಸಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಿಡಿಓಗಳು ಸೇರಿದಂತೆ ಸಾರ್ವಜನಿಕರು ಸಹಕರಿಸುತ್ತಿದ್ದು ತಾಲೂಕಿನಲ್ಲಿ ಈಗಾಗಲೇ 10 ಕೆರೆಗಳಲ್ಲಿ ಅಭಿವೃದ್ಧಿ ಕಾಮಗಾರಿ ಗಳು ಪ್ರಗತಿಯಲ್ಲಿವೆ ಎಂದು ಹೇಳಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ ಜಯಶಂಕರ್‌ ಮಾತನಾಡಿ, ಗ್ರಾಪಂನಲ್ಲಿ ಸಮುದಾಯ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ರಸ್ತೆ, ಚರಂಡಿ ಕಾಲುವೆಗಳ ಮರು ನಿರ್ಮಾಣ ಸೇರಿದಂತೆ ಕೆರೆ-ಕುಂಟೆಗಳ ಅಭಿವೃದ್ಧಿಗೆ ಪ್ರಥಮ ಆಧ್ಯತೆ ನೀಡಿದೆ. ಜಲಾಮೃತ ವರ್ಷ 2019 ರ ಸರ್ಕಾರಿ ಕಾರ್ಯಕ್ರಮದ ಅಂಗವಾಗಿ ಬನ್ನಿಕುಪ್ಪೆ ಗ್ರಾಮದ ದೊಡ್ಡಕೆರೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಜಲಮರು ಪೂರ್ಣ ಯೋಜನೆ ಮುಖಾಂತರ ನರೇಗಾ ಯೋಜನೆ ಯಶಸ್ಸಿಗೆ ಗ್ರಾಪಂ ಮುಂದಾಗಿದೆ ಎಂದರು.ಗ್ರಾಪಂ ಅಧ್ಯಕ್ಷ ಸುರೇಶ್‌, ಉಪಾಧ್ಯಕ್ಷೆ ಭಾಗ್ಯ ಚಂದ್ರಗಿರಿ, ಸದಸ್ಯ ಶಂಕರ್‌, ಬಿಲ್‌ಕಲೆಕ್ಟರ್‌ ಗಿರೀಶ್‌, ಮುಖಂಡರಾದ ಕೆಂಪೇಗೌಡ, ವೆಂಕಟೇಶ್‌, ಪಾಪಣ್ಣ ಹಾಜರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.