ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಿ: ಹೂಗಾರ
Team Udayavani, Jul 7, 2019, 3:22 PM IST
ಶಹಾಪುರ: ನಗರದ ಸೇಂಟ್ ಪೀಟರ್ ಶಾಲಾ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡಲಾಯಿತು.
ಶಹಾಪುರ: ನಮ್ಮ ದೇಶದಲ್ಲಿ ಎಲ್ಲರೂ ಸಂವಿಧಾನ ಬದ್ಧವಾಗಿ ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸುತ್ತಾರೆ. ತಮ್ಮ ಹಕ್ಕಿಗಾಗಿ ಸಂಘಟನಾತ್ಮಕವಾಗಿ ಪ್ರತಿನಿತ್ಯ ಪ್ರತಿಭಟನೆ, ಧರಣಿಗಳನ್ನು ನಡೆಸುತ್ತಾರೆ. ಆದರೆ ಅದೇ ಸಂವಿಧಾನದಲ್ಲಿ ಉಲ್ಲೇಖೀಸಲಾದ ತಮ್ಮ ಕರ್ತವ್ಯ ನಿರ್ವಹಿಸುವ ಕುರಿತು ಯಾರೊಬ್ಬರು ಮಾತಾಡುವುದಿಲ್ಲ ಎಂದು ಉಪ ವಲಯ ಅರಣ್ಯಾಧಿಕಾರಿ ಐ.ಬಿ.ಹೂಗಾರ ಬೇಸರ ವ್ಯಕ್ತಪಡಿಸಿದರು.
ಪಟ್ಟಣದ ದೇವಿ ನಗರದಲ್ಲಿರುವ ಸೇಂಟ್ ಪೀಟರ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪರಿಸರ ದಿನಾಚರಣೆ ಹಾಗೂ ಸಂತಪ್ರೇತರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಳೆದ ಹತ್ತಾರು ವರ್ಷಗಳ ಹಿಂದೆ ಜಾಗತಿಕ ತಾಪಮಾನ ಎಂಬುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತಿತ್ತು. ಪ್ರಸ್ತುತ ಜಾಗತಿಕ ತಾಪಮಾನದ ಬಗ್ಗೆ ಹಳ್ಳಿ ಹಳ್ಳಿ ಪ್ರತಿ ವಾರ್ಡ್‌ಗಳಲ್ಲಿ ಚರ್ಚಿಸುವ ಸ್ಥಿತಿ ನಿರ್ಮಾಣವಾಗಿದೆ. ಮೊನ್ನೆ ಕಳೆದ ಬೇಸಿಗೆ ಎಷ್ಟೊಂದು ಘೋರವಾಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ನೀರಿನ ಅಭಾವ ರಣ ಬಿಸಿಲಿನ ಪ್ರಖರತೆ ನಾವೆಲ್ಲ ಕಂಡಿದ್ದೇವೆ. ಇದಕ್ಕೆಲ್ಲ ಕಾರಣ ಪರಿಸರ ಅಸಮತೋಲನವೇ ಕಾರಣ ಎಂದರು. ಭೂಮಿಯೊಂದು ಪರ್ಯಾಯ ದ್ವೀಪ. ಶೇ. 75ರಷ್ಟು ಈ ಪ್ರಪಂಚ ನೀರಿನಿಂದ ಕೂಡಿದೆ. ಇನ್ನೂ ಶೇ. 25ರಷ್ಟು ಮಾತ್ರ ಭೂಮಿ ಇದೆ. ಶೇ. 97ರಷ್ಟು ಸಮುದ್ರಗಳ ಮೂಲಕ ದೊರೆಯುವ ನೀರು ಉಪ್ಪು ನೀರಿನಿಂದ ಅಲ್ಲದೆ ಈ ನೀರು ಕೃಷಿಗೆ ಮತ್ತು ಕುಡಿಯಲು ಬಳಕೆಗೆ ಬರುವುದಿಲ್ಲ. ಇನ್ನೂ ಶೇ. 3ರಷ್ಟು ನೀರು ಮಾತ್ರ ಹಿಮಾಲಯದಿಂದ ಹಿಮ ಕರಗಿ ನದಿಗಳ ಮೂಲಕ ಬರುವ ನೀರು ಮಾತ್ರ ಕುಡಿಯಲು ಬಳಸಲು ಸಹಕಾರಿಯಾಗಿದೆ ಎಂದರು.
ಕಾರಣ ಈಗಲೇ ಪ್ರತಿಯೊಬ್ಬರು ಎಚ್ಚೆತ್ತುಕೊಂಡು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು. ಡಾ| ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮೂಲಭೂತ ಕರ್ತವ್ಯಗಳ ಕುರಿತು ತಿಳಿಸಿದ್ದಾರೆ. ಆ ಕುರಿತು ಎಲ್ಲರೂ ಯೋಚಿಸಿ ನಮ್ಮ ಕರ್ತವ್ಯಗಳನ್ನು ಅರಿತು ಮರಗಿಡ, ನದಿಗಳನ್ನು ರಕ್ಷಿಸಬೇಕು ಎಂದು ಕರೆ ನೀಡಿದರು.
ಫಾದರ್ ಫೆಡ್ರಿಕ್ ಡಿಸೋಜಾ ಮಾತನಾಡಿ, ಮಕ್ಕಳು ಸಂತಪ್ರೇತರ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಎಲ್ಲರನ್ನು ಪ್ರೀತಿಸಬೇಕು. ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದ ಒಳಿತಿಗಾಗಿ ಕೈ ಜೋಡಿಸಬೇಕು ಎಂದು ಕರೆ ನೀಡಿದರು.
ಶಾಲೆಯ ಮುಖ್ಯಗುರು ಮಾತೆ ಸಿಸ್ಟರ್ ರೀನಾ ಡಿಸೋಜಾ, ಅರಣ್ಯ ರಕ್ಷಕ ಶ್ರೀಧರ ಯಕ್ಷಿಂತಿ, ಶಾಲಾ ಪಿಟಿಎ ಉಪಾಧ್ಯಕ್ಷ, ಪತ್ರಕರ್ತ ಮಲ್ಲಿಕಾರ್ಜುನ ಮುದ್ನೂರ, ಅರಣ್ಯ ರಕ್ಷಕ ಸೋಮರಾಯ, ಹಣಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಪರಿಸರ ಜಾಗೃತಿ ಕುರಿತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನವು ವಿತರಿಸಲಾಯಿತು. ಶಾಲಾ ಶಿಕ್ಷಕ, ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.