ರೋಗಗಳ ತಡೆಗೆ ಪರಿಣಾಮಕಾರಿ ಕಾರ್ಯನಿರ್ವಹಿಸಿ

Team Udayavani, Jul 8, 2019, 3:00 AM IST

rogagala

ಚಾಮರಾಜನಗರ: ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗೆ ವಹಿಸಲಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಕಾರ್ಯಕ್ರಮದ ಕುರಿತು ವರದಿಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಲೇರಿಯಾ, ಡೆಂ à, ಚಿಕೂನ್‌ ಗುನ್ಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ತಡೆ ಸಂಬಂಧ ನಡೆದ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಯಲು ಹಲವಾರು ಇಲಾಖೆಗಳು ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಿದೆ. ಸೊಳ್ಳೆಗಳ ಉತ್ಪತ್ತಿ, ನಿಯಂತ್ರಣಕ್ಕಾಗಿ ಜಾಗೃತಿ ಮೂಡಿಸುವ ಜತೆಗೆ ನೀರು ನಿಲ್ಲದೆ ಸರಾಗವಾಗಿ ಹರಿಯುವ ಹಾಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆ ಜತೆ ನಿರಂತರ ಸಂಪರ್ಕದಲ್ಲಿದ್ದು ನೈರ್ಮಲ್ಯ ಕಾಪಾಡುವುದರೊಂದಿಗೆ ಸಾಂಕ್ರಾಮಿಕ ರೋಗಗಳ ಹತೋಟಿಗೆ ಗಮನ ನೀಡಬೇಕು ಎಂದರು.

ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ವೇಳೆ ಮಕ್ಕಳಿಗೆ ಆರೋಗ್ಯ ಶಿಕ್ಷಣದ ಬಗ್ಗೆ ತಿಳಿವಳಿಕೆ ನೀಡಬೇಕು. ರೋಗ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಮುಂಜಾಗರೂಕತೆ ಕ್ರಮಗಳ ಬಗ್ಗೆ ಮಕ್ಕಳಿಗೆ ಮನದಟ್ಟಾಗುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. ಕರಪತ್ರಗಳಲ್ಲಿ ಆರೋಗ್ಯ ಪಾಲನೆಗೆ ವಹಿಸಬೇಕಿರುವ ಅಂಶಗಳನ್ನು ಸರಳವಾಗಿ ತಿಳಿಸುವ ಕೆಲಸವಾಗಬೇಕು ಎಂದು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆ, ಗ್ರಾಮ, ಪಟ್ಟಣಗಳಲ್ಲಿ ಗುಂಡಿಗಳು, ತಗ್ಗು ಪ್ರದೇಶಗಳು, ಓವರ್‌ ಹೆಡ್‌ ಟ್ಯಾಂಕ್‌, ಇತರೆ ಪ್ರದೇಶಗಳಲ್ಲಿ ಸೊಳ್ಳೆಗಳು ಇರದಂತೆ ನೋಡಿಕೊಳ್ಳಬೇಕು. ಪ್ರತಿ ವಾರವೂ ನೀರಿನ ಸಂಗ್ರಹಗಳನ್ನು ಶುಚಿಗೊಳಿಸಬೇಕು. ಕೈಗಾರಿಕೆ ಪ್ರದೇಶಗಳು, ಹಾಸ್ಟೆಲ್‌, ವಸತಿ ತಾಣಗಳು ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಪರಿಶೀಲಿಸಿ ನೈರ್ಮಲ್ಯ ಕಾಪಾಡಿಕೊಳ್ಳಲು ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗತಮಣಿ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ನೀರಿನ ಸಂಗ್ರಹವಿರುವೆಡೆ ವ್ಯಾಪಕವಾಗಿ ಸ್ವಚ್ಚತಾ ಕೆಲಸಗಳು ಕೈಗೊಳ್ಳಬೇಕು. ಆರೋಗ್ಯದ ದೃಷ್ಠಿಯಿಂದ ಜನರನ್ನು ಜಾಗೃತಗೊಳಿಸಬೇಕು ಎಂದರು.

ರಾಷ್ಟ್ರೀಯ ಆರೋಗ್ಯ ಮಿಷನ್‌, ತ್ಯಾಜ್ಯ ವಿಲೇವಾರಿ, ಕ್ಷಯರೋಗ ನಿಯಂತ್ರಣ ಸೇರಿದಂತೆ ಆರೋಗ್ಯ ಇಲಾಖೆ ಅನುಷ್ಠಾನ ಮಾಡುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಪರಿಶೀಲಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಆರ್‌ಸಿಎಚ್‌ ಅಧಿಕಾರಿ ಡಾ.ವಿಶ್ವೇಶ್ವರಯ್ಯ, ಡಾ. ಕಾಂತರಾಜು, ಡಾ. ರಾಜು, ಡಾ. ಕೃಷ್ಣ ಪ್ರಸಾದ್‌, ಡಾ. ನಾಗರಾಜು, ಡಾ. ಮಹದೇವು, ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.