ನಮ್ಮ ದಾರಿ ನಮಗೆ: ದೇವೇಗೌಡ ಸ್ಪಷ್ಟ ನುಡಿ
ಕಾಂಗ್ರೆಸ್ ನಾಯಕರಿಗೆ ದೇವೇಗೌಡ ಖಡಕ್ ಎಚ್ಚರಿಕೆ
Team Udayavani, Jul 8, 2019, 6:00 AM IST
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಕೈ ನಾಯಕರು ಪ್ರಾಮಾಣಿಕವಾಗಿ ಬಯಸಿದರೆ ಮಾತ್ರ ಸರ್ಕಾರ ಉಳಿಯುತ್ತದೆ, ಇಲ್ಲದಿದ್ದರೆ ನಾವು ಬೇರೆ ದಾರಿ ನೋಡಿಕೊಳ್ಳುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಡ್ಡಿ ಮುರಿದಂತೆ ಕಾಂಗ್ರೆಸ್‌ಗೆ ಸಂದೇಶ ರವಾನಿಸಿದ್ದಾರೆ.
ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ನಿವಾಸಕ್ಕೆ ಆಗಮಿಸಿ ಮಾತನಾಡಿದ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕರ ವರ್ತನೆ ಬಗ್ಗೆಯೇ ತೀವ್ರ ಅಸಮಾಧಾನ ಹೊರಹಾಕಿದ ದೇವೇಗೌಡರು, ಪರಿಸ್ಥಿತಿ ಕೈ ಮೀರುವವರೆಗೂ ಎಲ್ಲರೂ ಮೌನ ವಹಿಸಿದ್ದು ಯಾಕೆ ಎಂದು ಪ್ರಶ್ನಿಸಿದರು ಎಂದು ಮೂಲಗಳು ತಿಳಿಸಿವೆ.
ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಮನೆಗೆ ಬಂದವರು ನೀವು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೇಬೇಕು ಎಂದು ಪಟ್ಟು ಹಿಡಿದವರು ನೀವು, ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಘೋಷಿಸಿದವರೂ ನೀವು. ಆ ನಂತರ ಏನೆಲ್ಲಾ ಬೆಳವಣಿಗೆಯಾಯಿತು. ಎಲ್ಲವನ್ನು ಸೋನಿಯಾಗಾಂಧಿ ಹಾಗೂ ರಾಹುಲ್ಗಾಂಧಿಯವರಿಗೂ ಸಮಗ್ರವಾಗಿ ವಿವರಿಸಿದ್ದೇನೆ. ಉಳಿದದ್ದು ನಿಮ್ಮ ಕೈಯಲ್ಲೇ ಇದೆ ಎಂದು ಹೇಳಿದರು ಎನ್ನಲಾಗಿದೆ.
ರಾಜೀನಾಮೆ ಕೊಟ್ಟವರು ಯಾರು?: ಎಸ್.ಟಿ. ಸೋಮಶೇಖರ್, ಮುನಿರತ್ನ, ಬೈರತಿ ಬಸವರಾಜ್ ಅವರು ಯಾರ ಬೆಂಬಲಿಗರು? ಅವರು ರಾಜೀನಾಮೆ ಯಾಕೆ ಕೊಟ್ಟರು? ಇದೆಲ್ಲವೂ ಪೂರ್ವನಿಯೋಜಿತವೇ? ಮುಖ್ಯಮಂತ್ರಿಯವರು ಅಮೆರಿಕಕ್ಕೆ ಹೋಗಿರುವಾಗಲೇ ಹೀಗೆ ನಡೆಯಲು ಕಾರಣವಾದರೂ ಏನು ಎಂದು ಪ್ರಶ್ನಿಸಿದರು ಎಂದು ಹೇಳಲಾಗಿದೆ.
ರಾಮಲಿಂಗಾರೆಡ್ಡಿ ಹಾಗೂ ನಗರದ ಮೂವರು ಶಾಸಕರ ಜತೆ ನಡೆದ ಸಮಾಲೋಚನೆಯ ವಿವರಗಳನ್ನು ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರು ದೇವೇಗೌಡರಿಗೆ ನೀಡಿದರು. ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮದೇನೂ ಅಭ್ಯಂತರವಿಲ್ಲ. ಆದರೆ, ಪದೇ ಪದೆ ಇಂತಹ ಡ್ರಾಮಾ ನಡೆದರೆ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತಾ? ರೈತರ ಸಾಲ ಮನ್ನಾ ಸೇರಿ ಎಷ್ಟೆಲ್ಲಾ ಕಾರ್ಯಕ್ರಮ ಕೊಟ್ಟರೂ ವ್ಯರ್ಥವಾದಂತಾಗಿಲ್ಲವೇ? ಎಂದು ಬೇಸರ ವ್ಯಕ್ತಪಡಿ ಸಿದರು ಎಂದು ತಿಳಿದು ಬಂದಿದೆ.
ಸಿಎಂ ಬದಲಾವಣೆ ಮಾತು: ಅತೃಪ್ತ ಶಾಸಕರ ಬೇಡಿಕೆ ವಿಚಾರ ಪ್ರಸ್ತಾಪ ಸಂದರ್ಭದಲ್ಲಿ ಕೆಲವು ನಾಯಕತ್ವ ಬದಲಾವಣೆ ಬಯಸುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ, ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿಯಾಗಲಿ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದರು. ಅದಕ್ಕೆ ದೇವೇಗೌಡರು, ಅದೆಲ್ಲಾ ಮಾತುಗಳು ಈಗ ಅಪ್ರಸ್ತುತ. ಸದ್ಯಕ್ಕೆ ಸರ್ಕಾರ ಉಳಿಯಬೇಕಾ? ಬೇಡವಾ? ಎಂಬುದರ ಬಗ್ಗೆ ಗಮನಹರಿಸಿ. ಹೈಕಮಾಂಡ್ ಜತೆ ಚರ್ಚಿಸಿ, ನಾಯಕತ್ವ ಬದಲಾವಣೆ ವಿಚಾರ ದೆಹಲಿಯಲ್ಲಿ ಸಮ್ಮಿಶ್ರ ಸರ್ಕಾರ ಒಪ್ಪಂದವಾದ ಸಂದರ್ಭದಲ್ಲಿ ಆಗಲಿಲ್ಲ. ತೀರಾ ಅನಿವಾರ್ಯವಾದರೆ ಆಮೇಲೆ ನೋಡೋಣ ಎಂದು ಹೇಳಿದರು. ನಂತರ ಅಲ್ಲಿಂದಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ದೇವೇಗೌಡರು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದರು ಎಂದು ತಿಳಿದು ಬಂದಿದೆ. ಆದರೆ, ಈ ಕುರಿತು ಮಾಧ್ಯಮದವರಿಗೆ ದೇವೇಗೌಡರು ಪ್ರತಿಕ್ರಿಯಿಸಿ, ಎಲ್ಲಾ ನಿಮ್ಮ ಊಹಾಪೋಹ. ಸಿದ್ದರಾಮಯ್ಯ ಅವರ ಬಗ್ಗೆಯಾಗಲಿ, ಖರ್ಗೆಯವರ ಬಗ್ಗೆಯಾಗಲಿ ನಾವು ಮಾತನಾಡಲೇ ಇಲ್ಲ ಎಂದು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.