ಇಟ್ಟ ಹೆಜ್ಜೆ ವಾಪಸ್ ಇಲ್ಲ
Team Udayavani, Jul 8, 2019, 6:00 AM IST
ಬೆಂಗಳೂರು: ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಮುಂಬೈ ಹೊಟೇಲ್‌ನಲ್ಲಿರುವ ಅತೃಪ್ತ ಶಾಸಕರು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ನಾವೆಲ್ಲರೂ ವಿಧಾನಸಭಾಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ, ರಾಜ್ಯಪಾಲರಿಗೂ ಈ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ಅತೃಪ್ತ ಶಾಸಕರಲ್ಲೊಬ್ಬರಾದ ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮುಂಬೈನ ಖಾಸಗಿ ಹೊಟೇಲ್‌ನಲ್ಲಿ ತಂಗಿರುವ ಹತ್ತೂ ಶಾಸಕರೂ ಒಟ್ಟಾಗಿ ಮಾಧ್ಯಮಗಳ ಎದುರು ಕಾಣಿಸಿಕೊಂಡರು. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಸೋಮಶೇಖರ್, ರಾಜೀನಾಮೆ ಸಲ್ಲಿಸಿರುವ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದೇವೆ. ಈಗಾಗಲೆ ಹತ್ತು ಜನ ಹೊಟೇಲ್ನಲ್ಲಿದ್ದೇವೆ. ರಾಮಲಿಂಗಾ ರೆಡ್ಡಿ, ಮುನಿರತ್ನ, ಆನಂದ್ ಸಿಂಗ್ ಸೋಮವಾರ ಬಂದು ಸೇರುತ್ತಾರೆ. ಹದಿಮೂರು ಜನ ಶಾಸಕರು ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವ ಪ್ರಮೇಯ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ನಾವು ರಾಜೀನಾಮೆ ನೀಡಿದ ನಂತರ ಶಾಸಕಾಂಗ ಪಕ್ಷದ ಸಭೆಗೆ ಹೋಗುವ ಸಂದರ್ಭ ಇಲ್ಲ ಎಂದರು. ಇದೇ ವೇಳೆ, ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ನಾವು ಕೇಳಿಲ್ಲ. ಇಂಥವರನ್ನೇ ಸಿಎಂ ಮಾಡಿ ಎಂದೂ ನಾವು ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಕುರಿತು ಮಾತನಾಡಿದ ಜೆಡಿಎಸ್‌ನ ಗೋಪಾಲಯ್ಯ ಹಾಗೂ ಕಾಂಗ್ರೆಸ್‌ನ ಹಿರೆಕೆರೂರು ಶಾಸಕ ಬಿ.ಸಿ. ಪಾಟೀಲ್, ಸೋಮಶೇಖರ್ ಹೇಳಿಕೆಗೆ ಬದ್ಧರಾಗಿರುವುದಾಗಿ ತಿಳಿಸಿದರು.
ಈ ಮಧ್ಯೆ, ರಾಮಲಿಂಗಾರೆಡ್ಡಿ ಪುತ್ರಿ, ಸೌಮ್ಯಾ ರೆಡ್ಡಿ ಸೋಮವಾರ ರಾಜೀನಾಮೆ ನೀಡುವುದು ಬಹುತೇಕ ನಿಶ್ಚಿತ ಎಂದೇ ಹೇಳಲಾಗುತ್ತಿದೆ.
ನಾನು ರಾಜೀನಾಮೆ ಕೊಡಲ್ಲ: ನಾನು ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಮಗೂ ಕೆಲವು ಅಸಮಾಧಾನಗಳಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಬೇಕಾದ ಮಾರ್ಗಗಳೂ ಇವೆ. ಹಾಗಂತ ರಾಜೀನಾಮೆಯೊಂದೇ ಪರಿಹಾರವಲ್ಲ ಎಂದು ಹೇಳಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಪಕ್ಷ ಬಯ ಸಿದರೆ, ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ. ಈ ಮಧ್ಯೆ, ನಾಗಠಾಣ ಜೆಡಿಎಸ್ ಶಾಸಕ ದೇವಾ ನಂದ ಚವ್ಹಾಣ ಹಾಗೂ ಇಂಡಿ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿರುವ ಶಾಸಕ ಯಶವಂತ ರಾಯಗೌಡ ಪಾಟೀಲ ರಾಜೀನಾಮೆ ನೀಡುವ ಪಟ್ಟಿಯಲ್ಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.