ಹೊಳೆಆಲೂರಿನಿಂದ ವ್ಯಾಪಾರ ಸ್ಥಳಾಂತರಿಸಿದರೆ ಹೋರಾಟ
Team Udayavani, Jul 8, 2019, 3:03 PM IST
ಹೊಳೆಆಲೂರು: ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಪರುಶುರಾಮ ಅಳಗವಾಡಿ ಮಾತನಾಡಿದರು.
ಹೊಳೆಆಲೂರು: ಹೆಸರು, ಶೇಂಗಾ, ಕಡಲೆ, ಸೂರ್ಯಕಾಂತಿ ಇಳುವರಿ ಮಾರಾಟಕ್ಕೆ ಹಾಗೂ ತಾಲೂಕಿನಲ್ಲಿ ಅತಿ ಹೆಚ್ಚು ಸೆಸ್ ಕಟ್ಟುವ ಪ್ರಾಮಾಣಿಕ ವ್ಯಾಪಾರಸ್ಥರನ್ನು ಹೂಂದಿರುವ ಹೊಳೆಆಲೂರು ಪ್ರಧಾನ ಕೇಂದ್ರವನ್ನು ರಾಜಕೀಯ ಕಾರಣಗಳಿಗಾಗಿ ಸ್ಥಳಾಂತರಿಸುವ ಮಾತು ಕೇಳಿ ಬರುತ್ತಿದೆ. ಹಾಗೇನಾದರೂ ಆದರೆ ವ್ಯಾಪಾರಸ್ಥರು ಹೋರಾಟಕ್ಕೆ ಅಣಿಯಾಗಲಿದ್ದಾರೆ ಎಂದು ದಿ| ಮರ್ಚಟ್ಸ್ ಸಂಸ್ಥೆ ಹಿರಿಯ ಸದಸ್ಯ ಕೆ.ಸಿ. ಹಿರೇಮಠ ಪಾಟೀಲ ಹೇಳಿದರು.
ಇಲ್ಲಿಯ ದಿ| ಮರ್ಚಂಟ್ಸ್ ಅಸೋಶಿಯೇಷನ್ ಸಂಘದ ವತಿಯಿಂದ ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ನಡೆದ ವ್ಯಾಪಾರಸ್ಥರ ವಿಶೇಷ ಸಭೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ 60 ವರ್ಷಗಳಿಂದ ಇಲ್ಲಿನ ವ್ಯಾಪಾರಸ್ಥರು ರೈತ ಸ್ನೇಹಿಯಾಗಿ ವರ್ತಿಸುತ್ತ ಬಂದಿದ್ದಾರೆ. ಇದರಿಂದ ರೋಣ ತಾಲೂಕು ಮಾತ್ರವಲ್ಲ ಕೊಪ್ಪಳ ಜಿಲ್ಲೆಯ ಕುಷ್ಟಗಿ, ಧಾರವಾಡ ಜಿಲ್ಲೆಯ ನವಲಗುಂದ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಿಂದ ರೈತರು ತಮ್ಮ ಹುಟ್ಟುವಳಿ ಮರಾಟಕ್ಕೆ ಇಲ್ಲಿಗೆ ಬರುತ್ತಾರೆ. ಕಾರಣ ಕಷ್ಟದಲ್ಲಿರುವ ವ್ಯಾಪಾರಸ್ಥರ ಹಿತ ಕಾಯಲು ಎಪಿಎಂಸಿ ನೂತನ ಅಧ್ಯಕ್ಷರು ಶ್ರಮಿಸಬೇಕು ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಪರುಶುರಾಮ ಅಳಗವಾಡಿ, ಒಂದು ವರ್ಷದ ಹಿಂದೆ ಸÛಳಾಂತರ ಪ್ರಸ್ತಾವನೆ ಬಂದಿದ್ದು ನಿಜ. ಆದರೆ ರಾಜ್ಯ ಮಟ್ಟದ ಅಧಿಕಾರಿಗಳು ಅದನ್ನು ಪರಿಶೀಲಿಸಿ ಹೊಳೆಆಲೂರು ಕೇಂದ್ರ ಸ್ಥಾನವಾಗಲು ಹಸಿರು ನಿಶಾನೆ ತೋರಿದ್ದಾರೆ. ಕಾರಣ ಕೇಂದ್ರ ಸ್ಥಾನ ಸರ್ವಾಂಗೀಣ ಅಭಿವೃದ್ಧಿ ಮಾಡಲು ಸಕಲ ಮೂಲಭೂತ ಸೌಲಭ್ಯ ಒದಗಿಸಲು ಚಾಲನೆ ನೀಡಲಾಗಿದೆ. ಹೊಳೆಆಲೂರಿನಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಸಂತೆ, 1 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ, 1 ಕೋಟಿ ರೂ. ವೆಚ್ಚದಲ್ಲಿ ಮುಚ್ಚುವ ಹರಾಜು ಕಟ್ಟೆ, 25 ಲಕ್ಷ ರೂ. ವೆಚ್ಚದಲ್ಲಿ 7 ದಿನಸಿ ಮಳಿಗೆಗಳು, ಕೊತಬಾಳ ಗ್ರಾಮದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ಗ್ರಾಮೀಣ ಸಂತೆ, ಗಜೇಂದ್ರಗಡದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚವರಿ ಕೊಠಡಿ ನಿರ್ಮಾಣಕ್ಕೆ ಶೀಘ್ರ ಚಾಲನೆ ಸಿಗಲಿದೆ ಎಂದು ಹೇಳಿದರು.
ರಾಜ್ಯ ಕೃಷಿ ರತ್ನ ಪ್ರಶಸ್ತಿ ಪುರಸತ ಬೆನಹಾಳ ಗ್ರಾಮದ ಶಶಿಧರಗೌಡ ಪಾಟೀಲ, ರಾಜ್ಯ ಶ್ರೇಷ್ಠ ವರ್ತಕ ಪ್ರಶಸ್ತಿ ಪುರಸðತಿ ಶಿವಣ್ಣ ಯಾವಗಲ್ಲ ಅವರನ್ನು ಸನ್ಮಾನಿಸಲಾಯಿತು.
ಕೆ.ಸಿ. ಹಿರೇಮಠ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ಎನ್.ಜಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯೋದ್ದಮೆ ಸಂಸ್ಥೆ ಅಧ್ಯಕ್ಷ ಎಂ.ಎಸ್. ರಾವಳ, ಎಸ್.ಜಿ. ತೋಟದ, ಎಸ್.ಎಲ್. ಗದಗ, ಎಸ್.ಬಿ. ನಾಗಲಾಪುರ, ಪರಶುರಾಮ ಸಂಗಟಿ, ಮಹೇಂದ್ರಗೌಡ ಪಾಟೀಲ, ಮಾರುತಿ ಮಂಂಡಸೂಪ್ಪಿ ಇದ್ದರು. ಡಾ| ಅನೀಲ ಭೀಮನಗೌಡ್ರ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.