ಸಾಲ ವಸೂಲಿಗೆ ನಿಯಮ ರೂಪಿಸಿ
Team Udayavani, Jul 8, 2019, 3:31 PM IST
ಹಾವೇರಿ: ರೈತರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
ಹಾವೇರಿ: ಒತ್ತಾಯ ಪೂರ್ವಕವಾಗಿ ಸಾಲ ವಸೂಲಾತಿ ಮಾಡದಂತೆ ಬ್ಯಾಂಕ್ ಹಾಗೂ ಫೈನಾನ್ಸ್ ಅಧಿಕಾರಿಗಳ ಸಭೆ ಕರೆದು ಸೂಚಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಎನ್. ತಿಪ್ಪೇಸ್ವಾಮಿ ಹೇಳಿದರು.
ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್ ಹಾಗೂ ಫೈನಾನ್ಸ್ ಕಂಪನಿಯವರು ರೈತರಿಗೆ ಯಾವುದೇ ಕಡ್ಡಾಯ ಸಾಲ ವಸೂಲಾತಿ ಮಾಡಬಾರದು. ಸಾಲ ವಸೂಲಾತಿಗಾಗಿ ಕಿರುಕುಳ ನೀಡಬಾರದು. ಇಂಥ ಘಟನೆ ನಡೆದರೆ ದೂರವಾಣಿ ಮೂಲಕ ನಮ್ಮ ಗಮನಕ್ಕೆ ತಂದರೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಉ.ಕ. ರೈತ ಸಂಘದ ಮುಖಂಡ ಹನುಮಂತಪ್ಪ ದೀವಿಗಿಹಳ್ಳಿ ಮಾತನಾಡಿ, ಬರಗಾಲದ ಈ ಸಂದರ್ಭದಲ್ಲಿ ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಮುಖ್ಯಮಂತ್ರಿಯವರು ರೈತರಿಗೆ ಯಾವುದೇ ಬ್ಯಾಂಕ್-ಖಾಸಗಿ ಕಂಪನಿಗಳು ನೋಟಿಸ್ ನೀಡುವಂತಹ ಕ್ರಮಕ್ಕೆ ಮುಂದಾಗಬಾರದು ಎಂದು ಹೇಳಿದರೂ ಬ್ಯಾಂಕ್, ಫೈನಾನ್ಸ್‌ಗಳು ಸಾಲ ಮರುಪಾವತಿ ಮಾಡಲು ಮುಂದಾಗುತ್ತಿರುವುದು ಖೇದಕರ ಸಂಗತಿ ಎಂದರು.
ರೈತರ ಮುಖಂಡರಾದ ಚಂದ್ರಶೇಖರ ಉಪ್ಪಿನ, ಫಕ್ಕಿರೇಶ ಕಾಳಿ, ಜಗದೀಶ ಕೂಸಗೂರ, ಸಿದ್ದಪ್ಪ ನೂಲಗೇರಿ, ಚಂದ್ರು ಗುತ್ತೂರ, ಹನುಮಂತಪ್ಪ ಸುಣಗಾರ, ಬಿ.ಡಿ. ಪಾಟೀಲ, ಮಂಜಯ್ಯ ಹಿರೇಮಠ, ಬಸವರಾಜ ಪಾಣಿಗಟ್ಟಿ, ಫಕ್ಕಿರಪ್ಪ ಒಡಯಂಪೂರ ಹಾಗೂ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.