ರಂಗಕರ್ಮಿ ಮುದ್ದುಕೃಷ್ಣ ದಂಪತಿ ಅಪಘಾತದಲ್ಲಿ ಸಾವು


Team Udayavani, Jul 9, 2019, 3:00 AM IST

rangakarmi

ಮೈಸೂರು: ಉತ್ತರ ಪ್ರದೇಶದ ಲಕ್ನೋ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರಿನ ಹಿರಿಯ ರಂಗಕರ್ಮಿ ಕೆ. ಮುದ್ದುಕೃಷ್ಣ (68) ಹಾಗೂ ಅವರ ಪತ್ನಿ ಸಿಎಫ್ಟಿಆರ್‌ಐನ ವಿಜ್ಞಾನಿ ಇಂದ್ರಾಣಿ (59) ಮೃತಪಟ್ಟಿದ್ದಾರೆ.

ನಗರದ ರಾಮಕೃಷ್ಣ ನಗರದ ನಿವಾಸಿಗಳಾದ ಕೆ. ಮುದ್ದುಕೃಷ್ಣ ದಂಪತಿ ಕಳೆದ 4 ದಿನಗಳ ಹಿಂದೆ ಲಕ್ನೋಗೆ ಪ್ರವಾಸ ಬೆಳೆಸಿದ್ದರು. ಬಾಡಿಗೆ ಕಾರಿನಲ್ಲಿ ವಾರಾಣಸಿ ಹಾಗೂ ಕಾಶಿ ನೋಡಲು ತೆರಳುತ್ತಿದ್ದ ಸಂದರ್ಭ ಇವರ ಕಾರಿಗೆ ಭಾನುವಾರ ಮಧ್ಯಾಹ್ನ 3.30ಕ್ಕೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು. ಇಂದ್ರಾಣಿ ಅವರು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಮುದ್ದುಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೇತರಿಕೆ ಹಾದಿಯಲ್ಲಿದ್ದ ಮುದ್ದುಕೃಷ್ಣ ಅವರು ಸೋಮವಾರ ಬೆಳಗ್ಗೆ ಪತ್ನಿ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಇಂದ್ರಾಣಿ ಅವರ ಜನ್ಮ ದಿನವಾಗಿತ್ತು. ಈ ಸಂದರ್ಭದಲ್ಲೇ ದುರಂತ ಸಂಭವಿಸಿದೆ.

ಮೃತರಿಗೆ ಅನನ್ಯ ಮತ್ತು ಅಲೋಕ್‌ ಎಂಬ ಇಬ್ಬರು ಗಂಡು ಮಕ್ಕಳಿದ್ದು, ಇಬ್ಬರು ಮದುವೆಯಾಗಿ ಸ್ವೀಡನ್‌ನಲ್ಲೇ ನೆಲೆಸಿದ್ದಾರೆ. ಸದ್ಯ ಮುದ್ದುಕೃಷ್ಣ ಅವರ ಆಪ್ತ ಗೆಳೆಯ, ರಂಗ ಕಲಾವಿದ ಜಯಂತ್‌ ಪಾಟೀಲ್‌ ಹಾಗೂ ಇತರರು ಲಕ್ನೋಗೆ ತೆರಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನ ಮೈಸೂರಿಗೆ ಬರಲಿದ್ದು, ಜು.10ರಂದು ಅಂತ್ಯ ಸಂಸ್ಕಾರ ನೆರವೇರಲಿದೆ.

ಬ್ಯಾಂಕ್‌ ಉದ್ಯೋಗಿಯಾಗಿದ್ದ ಮುದ್ದುಕೃಷ್ಣ 15 ವರ್ಷದ ಹಿಂದೆ ಸ್ವಯಂ ನಿವೃತ್ತರಾಗಿದ್ದರು. 1983ರಲ್ಲೇ “ಸಮುದಾಯ’ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಇವರು, ಮೈಸೂರಿನಲ್ಲಿ ರಂಗ ಸಂಘಟಕರಾಗಿ ಕೆಲಸ ಮಾಡಿದ್ದರು. ಸಮುದಾಯದ ಕಾರ್ಯದರ್ಶಿಯಾಗಿ, ನಾಟಕ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಾನವ ಮಂಟಪದಲ್ಲಿ ನೂರಾರು ಜೋಡಿಗೆ ಸರಳ ವಿವಾಹ ಮಾಡಿಸಿದ್ದ ಇವರು, ನೇರ ನುಡಿಗೆ ಹೆಸರಾಗಿದ್ದರು.

ಇವರು ರಂಗಪ್ರದರ್ಶನ ನಡೆಯುವ ಎಲ್ಲಾ ಜಾಗದಲ್ಲಿ ಮುದ್ದುಕೃಷ್ಣ ಇರುತ್ತಿದ್ದರು. ಜೊತೆಗೆ ಅಭಿನಯಿಸಿದ್ದಕ್ಕಿಂತ ರಂಗ ಸಂಘಟನೆ ಮಾಡಿದ್ದೆ ಹೆಚ್ಚು. ಸಮುದಾಯದಲ್ಲೂ ಕಾರ್ಯ ನಿರ್ವಹಿಸಿದ್ದರು. ಪಕ್ಷಿ ವೀಕ್ಷಕರಾಗಿಯೂ ಇದ್ದ ಮುದ್ದುಕೃಷ್ಣ ಅವರು ರಂಗ ವಿಮರ್ಶಕರಾಗಿದ್ದರು ಎಂದು ಹಿರಿಯ ರಂಗಕರ್ಮಿ ಮೈಮ್‌ ರಮೇಶ್‌ ಪತ್ರಿಕೆಗೆ ತಿಳಿಸಿದರು.

ಮುಖ್ಯಮಂತ್ರಿ ಸಂತಾಪ: ಲಕ್ನೋದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ರಂಗಕರ್ಮಿ ಕೆ. ಮುದ್ದುಕೃಷ್ಣ ಹಾಗೂ ಪತ್ನಿ ಇಂದ್ರಾಣಿ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಆಘಾತ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.