ಸರ್ಕಾರ ಉ(ರು)ಳಿಸುವ ಕಸರತ್ತಿನ “ಕೊನೆಯ ಘಟ್ಟ’

Team Udayavani, Jul 9, 2019, 3:10 AM IST

sarkara

ಕಾಂಗ್ರೆಸ್‌-ಜೆಡಿಎಸ್‌ ಶಾಸಕರ ಸಾಮೂಹಿಕ ರಾಜೀನಾಮೆ ದೋಸ್ತಿ ಸರ್ಕಾರವನ್ನು ತಲ್ಲಣಕ್ಕೀಡು ಮಾಡಿದ್ದು, ಸರ್ಕಾರದ ಭವಿಷ್ಯ ಕೊನೆಯ ಘಟ್ಟಕ್ಕೆ ಬಂದಿದೆ. ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದ ಪಕ್ಷೇತರರಾದ ಆರ್‌.ಶಂಕರ್‌ ಹಾಗೂ ಎಚ್‌.ನಾಗೇಶ್‌ ಸೋಮವಾರ ಬಿಜೆಪಿಗೆ ಬೆಂಬಲ ಘೋಷಿಸಿದ್ದು ರಾಜಕೀಯ ಪಲ್ಲಟಗಳಿಗೆ ಕಾರಣವಾಗಿದೆ. ಸರ್ಕಾರ ರಚನೆಗೆ ಅಗತ್ಯ “ಮ್ಯಾಜಿಕ್‌ ಸಂಖ್ಯೆ’ ತಲುಪಿದ್ದರಿಂದ ಬಿಜೆಪಿಯಲ್ಲಿ ಚಟುವಟಿಕೆಗೆ ಗರಿಗೆದರಿದೆ. ಕಾಂಗ್ರೆಸ್‌-ಜೆಡಿಎಸ್‌ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಕಸರತ್ತಿನ ನಡುವೆಯೇ, ಸಿಎಂ ಕುಮಾರಸ್ವಾಮಿ ಖಡಕ್‌ ಎಚ್ಚರಿಕೆ, ಅತೃಪ್ತರಿಗೆ ಮಂತ್ರಿಗಿರಿ ಆಫ‌ರ್‌, ಸಚಿವರಿಂದ ರಾಜೀನಾಮೆಯಂತಹ ಬೆಳವಣಿಗೆಗಳು ಮುಂದುವರಿದಿವೆ…

ಮೈತ್ರಿ ಸರ್ಕಾರದ ವಿರುದ್ಧ ಪ್ರತಿಭಟನೆ ಇಂದು
ಬೆಂಗಳೂರು: ಮೈತ್ರಿ ಸರ್ಕಾರದ ಸಂಖ್ಯಾಬಲ ಕುಸಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಮಂಗಳವಾರ ಸಂಜೆ 5 ಗಂಟೆಗೆ ಮತ್ತೆ ಶಾಸಕಾಂಗ ಸಭೆ ನಡೆಸಲು ಕಮಲ ಪಾಳಯ ನಿರ್ಧರಿಸಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ನ 13 ಶಾಸಕರ ರಾಜೀನಾಮೆ ಹಾಗೂ ಪಕ್ಷೇತರ ಶಾಸಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆಳವಣಿಗೆ ಕುರಿತು ಚರ್ಚೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಎಲ್ಲ ಶಾಸಕರೂ ಬೆಂಗಳೂರಿನಲ್ಲೇ ಉಳಿಯಬೇಕೆಂದು ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜೀನಾಮೆ ನೀಡಿ ಮುಂಬೈನ ಹೋಟೆಲ್‌ನಲ್ಲಿರುವ ಕೆಲ ಶಾಸಕರು ಮಂಗಳವಾರ ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸ್ಪೀಕರ್‌ ನಡೆಯನ್ನು ಗಮನಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬಿಜೆಪಿ ಮಂಗಳವಾರ ಸಂಜೆ ಮತ್ತೆ ಶಾಸಕಾಂಗ ಸಭೆ ಕರೆದಿದೆ. ಜತೆಗೆ ರೆಸಾರ್ಟ್‌ನಲ್ಲಿ ಶಾಸಕರನ್ನು ಇರಿಸುವ ಚಿಂತನೆಯನ್ನು ಕೈಬಿಟ್ಟಿದೆ ಎಂದು ತಿಳಿಸಿವೆ.

ಸಭೆಯ ಬಳಿಕ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಪಕ್ಷದ ಶಾಸಕಾಂಗ ಸಭೆಯಲ್ಲಿ ರಾಜ್ಯ ರಾಜಕೀಯದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ಚರ್ಚಿಸಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಪರಸ್ಪರ ಕಚ್ಚಾಡಿಕೊಂಡು ಬಿಜೆಪಿಯನ್ನು ಅನಗತ್ಯವಾಗಿ ಟೀಕಿಸಿದ್ದೇ ಸರ್ಕಾರದ ಸಾಧನೆ. ಬಿಜೆಪಿಯು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿಲ್ಲ. ಯಾರಿಗೂ ಆಮಿಷ ಒಡ್ಡುವ ಕೆಲಸವನ್ನೂ ಮಾಡಿಲ್ಲ. ಮೈತ್ರಿ ಸರ್ಕಾರ ತಾನಾಗಿಯೇ ಪತನವಾಗುವ ಹಂತಕ್ಕೆ ತಲುಪಿದೆ ಎಂದು ಹೇಳಿದರು.

ರಾಜ್ಯಾದ್ಯಂತ ಪ್ರತಿಭಟನೆ: ವಿಧಾನಸಭೆಯಲ್ಲಿ 105 ಶಾಸಕರ ಬಲವಿರುವ ಬಿಜೆಪಿಯನ್ನು ಇಬ್ಬರು ಪಕ್ಷೇತರರು ಬೆಂಬಲಿಸಿರುವುದಿಂದ ಬಿಜೆಪಿ ಸಂಖ್ಯಾಬಲ 107ಕ್ಕೆ ಏರಿಕೆಯಾಗಿದೆ. 13 ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಪಕ್ಷಗಳ ಸಂಖ್ಯಾಬಲ 104ಕ್ಕೆ ಕುಸಿದಂತಾಗಲಿದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮಂಗಳವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಇನ್ನೂ 2-3 ದಿನ ಬೆಳವಣಿಗೆಯನ್ನು ಕಾದು ನೋಡಲಾಗುವುದು ಎಂದರು.

ಪಕ್ಷೇತರ ಶಾಸಕರಾದ ಎಚ್‌.ನಾಗೇಶ್‌, ಆರ್‌.ಶಂಕರ್‌ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ಜತೆಗೆ ರಾಜ್ಯಪಾಲರಿಗೂ ರಾಜೀನಾಮೆ ಪತ್ರ ಸಲ್ಲಿಸಿದ್ದು, ಬಿಜೆಪಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ವಿಧಾನಸಭೆ ರಚನೆಯಾದ ಆರು ತಿಂಗಳಲ್ಲಿ ಯಾವುದೇ ಪಕ್ಷದ ಸಹ ಸದಸ್ಯತ್ವ ಪಡೆದಿದ್ದರೆ ಕೆಲ ನಿರ್ಬಂಧಗಳಿರುತ್ತವೆ. ಆದರೆ ಆರ್‌.ಶಂಕರ್‌ ಅವರು ಆರು ತಿಂಗಳ ಬಳಿಕ ಕಾಂಗ್ರೆಸ್‌ನ ಸಹ ಸದಸ್ಯತ್ವ ಪಡೆದಂತಿದೆ. ಶಂಕರ್‌ ಅವರು ಬಿಜೆಪಿಯನ್ನು ಹಿಂದೊಮ್ಮೆ ಬೆಂಬಲಿಸಿ ಪತ್ರ ನೀಡಿದ್ದರು ಎಂದು ಹೇಳಿದರು.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.