ಸಿಎಂ ಎಚ್ಡಿಕೆ ರಾಜೀನಾಮೆ ನೀಡಲಿ
Team Udayavani, Jul 9, 2019, 3:00 AM IST
ಶಿವಮೊಗ್ಗ: ಮೈತ್ರಿ ಸರ್ಕಾರದ ವಿರುದ್ಧ ಜೆಡಿಎಸ್-ಕಾಂಗ್ರೆಸ್ ಶಾಸಕರ ಅತೃಪ್ತಿ ದಿನೇದಿನೆ ಹೆಚ್ಚುತ್ತಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಅತೃಪ್ತಿ ಹೆಚ್ಚಾಗುತ್ತಿರುವುದರಿಂದ ಶಾಸಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ರಾಜೀನಾಮೆ ನೀಡುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸರ್ಕಾರ ಉರುಳಿದ ನಂತರ ಅಪಮಾನ ಅನುಭವಿಸಿ ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಟೀಕಿಸಿದರು.
ಮೈತ್ರಿ ಸರ್ಕಾರದ ಕೆಲ ಶಾಸಕರ ಮನಸ್ಸಿನಲ್ಲಿದ್ದ ಅತೃಪ್ತಿ ಈಗ ಸ್ಫೋಟಗೊಂಡಿದೆ. ವಿಧಾನಮಂಡಲದ ಅ ಧಿವೇಶನ ನಡೆಯುವುದಿಲ್ಲ. ಅಷ್ಟರಲ್ಲಿ ಮೈತ್ರಿ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದರು. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಆಪರೇಷನ್ ಕಮಲದಿಂದ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಕೈವಾಡವಿಲ್ಲ.
ರಾಮಲಿಂಗಾರೆಡ್ಡಿ ಅವರೇ ಮೈತ್ರಿ ವಿರುದ್ಧದ ಅಸಮಾಧಾನದಿಂದ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಶಾಸಕರ ರಾಜೀನಾಮೆಯಲ್ಲಿ ಅಮಿತ್ ಶಾ, ನರೇಂದ್ರ ಮೋದಿ ಅವರ ಪಾತ್ರ ಇಲ್ಲ. ಬೇಕಿದ್ದರೆ ಮೈತ್ರಿ ಸರ್ಕಾರ ಉಳಿಸಿಕೊಳ್ಳಲಿ. ಮೊದಲು ಅತೃಪ್ತ ಶಾಸಕರಿಗೆ ಉತ್ತರ ನೀಡಲಿ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.