ಪ್ರೋತ್ಸಾಹಧನ ಪಾವತಿಗೆ ರಾಜ್ಯ ಸರ್ಕಾರದ ಮೀನಮೇಷ
ಒಂಭತ್ತು ತಿಂಗಳುಗಳಿಂದ ಪ್ರೋತ್ಸಾಹಧನ ನೀಡದೇ ಇರುವುದರಿಂದ ಸಂಕಷ್ಟ: ಆಶಾ ಕಾರ್ಯಕರ್ತೆಯರ ಆರೋಪ
Team Udayavani, Jul 9, 2019, 10:40 AM IST
ಚಿತ್ರದುರ್ಗ: ಆಶಾ ಕಾರ್ಯಕರ್ತೆಯರು ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಚಿತ್ರದುರ್ಗ: ಪ್ರೋತ್ಸಾಹಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದರು.
ಒನಕೆ ಓಬವ್ವ ವೃತ್ತದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಹನ್ನೆರಡು ಸಾವಿರ ರೂ. ವೇತನ ನಿಗದಿ ಮಾಡುವುದು ಸೇರಿದಂತೆ ಇತರೆ ಹದಿಮೂರು ಬೇಡಿಕೆಗಳನ್ನು ಈಡೇರಿಸಬೇಕು. ಕಳೆದ ಒಂಭತ್ತು ತಿಂಗಳುಗಳಿಂದ ಸರ್ಕಾರ ಎಂಸಿಟಿಎಸ್ ಪ್ರೋತ್ಸಾಹಧನ ನೀಡದೆ ಸತಾಯಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡುವ ಪ್ರೋತ್ಸಾಹಧನವನ್ನು ಒಟ್ಟಿಗೆ ಸೇರಿಸಿ ಮಾಸಿಕ ಕನಿಷ್ಠ ಗೌರವಧನವನ್ನು 12 ಸಾವಿರ ರೂ. ನಿಗದಿಪಡಿಸಬೇಕು. ಆಶಾ ಸಾಫ್ಟ್ ಅಥವಾ ಆರ್‌ಸಿಎಚ್ ಪೋರ್ಟಲ್ಗೆ ಆಶಾ ಪ್ರೋತ್ಸಾಹಧನ ಜೋಡಣೆಯನ್ನು ರದ್ದುಪಡಿಸಬೇಕು. ಕಳೆದ ಒಂಭತ್ತು ತಿಂಗಳುಗಳಿಂದ ಬಾಕಿ ಇರುವ ಎಂಸಿಟಿಎಸ್ ಸೇವೆಗಳ ಆಶಾ ಪ್ರೋತ್ಸಾಹಧನವನ್ನು ಒಂದು ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯನಿರ್ವಹಿಸುವ ಪ್ರತಿ ಆಶಾ ಕಾರ್ಯಕರ್ತೆಗೆ ಮಾಸಿಕ ಮೂರು ಸಾವಿರ ರೂ. ನೀಡಬೇಕು. ಇದನ್ನು ಜನಸಂಖ್ಯೆಗನುಗುಣವಾಗಿ ಹೆಚ್ಚಿಸಬೇಕು. ಇಲ್ಲವೇ ಒಂಭತ್ತು ತಿಂಗಳುಗಳಲ್ಲಿ ಆಶಾ ಕಾರ್ಯಕರ್ತೆಯರು ಮಾಡಿರುವ ಸಾಧನೆಯ ಮ್ಯಾನುವಲ್ ವರದಿ ಸಂಗ್ರಹಿಸಿ ಪ್ರೋತ್ಸಾಹಧನವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಗಿರಿಜಮ್ಮ ಮಾತನಾಡಿ, ಆಶಾ ಕಾರ್ಯಕರ್ತೆಯರು ಜೀವನ ಭದ್ರತೆಯಿಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲಸಕ್ಕೆ ತಕ್ಕಂತೆ ಸರ್ಕಾರ ಗೌರವಧನ ನೀಡದೆ ಪುಕ್ಕಟೆಯಾಗಿ ದುಡಿಸಿಕೊಳ್ಳುತ್ತಿದೆ. ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಜು. 18 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ನಗರ ಮತ್ತು ಹಳ್ಳಿಗಳಲ್ಲಿ ಗರ್ಭಿಣಿಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆ ಹಾಗೂ ಆರೋಗ್ಯ ಮತ್ತು ಪೌಷ್ಟಿಕತೆ ಅರಿವು ಮೂಡಿಸುತ್ತಿದ್ದೇವೆ. ಕ್ಷಯ, ಕುಷ್ಠರೋಗ, ಮಲೇರಿಯಾ, ಡೆಂಘೀ, ಚಿಕೂನ್‌ಗುನ್ಯಾ ಇತ್ಯಾದಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು ಕುಟುಂಬ ಯೋಜನೆ, ಶೌಚಾಲಯ ಬಳಕೆ, ಸಮಗ್ರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಎಐಯುಟಿಯುಸಿ ಜಿಲ್ಲಾ ಸಂಚಾಲಕ ಎಚ್. ರವಿಕುಮಾರ್, ಜಿಲ್ಲಾ ಕಾರ್ಯದರ್ಶಿ ಮಮತಾ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.