ಮಹಾನ್ ನಾಯಕರ ಆದರ್ಶ ಪಾಲಿಸಿ: ಷಡಾಕ್ಷರಿ
Team Udayavani, Jul 9, 2019, 11:04 AM IST
ಭದ್ರಾವತಿ: ಪ್ರೊ.ಬಿ.ಕೃಷ್ಣಪ್ಪನವರ 81ನೇ ಜನ್ಮ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರೊ.ಬಿ. ಕೃಷ್ಣಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭದ್ರಾವತಿ: ಮಹಾಪುರುಷರ ಆಶಯದಂತೆ ಎಲ್ಲರೂ ನಡೆದುಕೊಂಡು ಸಮಾಜದಲ್ಲಿ ಸಮಾನತೆಯ ಸೃಷ್ಟಿಗೆ ಯತ್ನಿಸಿ ಸಾಗುವುದರಿಂದ ಮಾತ್ರ ಅವರ ಹೆಸರಲ್ಲಿ ನಡೆಯುವ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರುತ್ತವೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್ ಷಡಾಕ್ಷರಿ ತಿಳಿಸಿದರು.
ನಗರದ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ದಲಿತ ನೌಕರರ ಒಕ್ಕೂಟದ ತಾಲೂಕು ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರೊ.ಬಿ. ಕೃಷ್ಣಪ್ಪನವರ 81ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.
ದಸಂಸ ಸಂಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪನವರ ಹೋರಾಟಗಳು ಇಂದಿಗೂ ಮಾದರಿಯಾಗಿದ್ದು, ಅವರ ಆದರ್ಶಗಳು, ಚಿಂತನೆಗಳು, ಹೋರಾಟಗಳನ್ನು ಪುನಃ ಕಾರ್ಯರೂಪಕ್ಕೆ ಬರುವಂತಾಗಬೇಕು. ಜಾತೀಯತೆ ತೊಲಗಬೇಕು. ಸಮ ಸಮಾಜ ನಿರ್ಮಾಣ ಆಗಬೇಕು ಎಂದರು.
ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಮಾತನಾಡಿ, ಪ್ರೊ.ಬಿ.ಕೃಷ್ಣಪ್ಪನವರು 70ರ ದಶಕದಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಆದರ್ಶ, ಚಿಂತನೆಗಳನ್ನು ಮೈಗೂಡಿಸಿಕೊಂಡು ಹುಟ್ಟುಹಾಕಿದ ದಲಿತ ಸಂಘರ್ಷ ಸಮಿತಿ ಇಂದು ಹುಟ್ಟು ಹಾಕುವ ಮೂಲಕ ದಲಿತರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆ, ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ 70 ರ ದಶಕದಲ್ಲಿ ಹುಟ್ಟು ಹಾಕಿದ ದಸಂಸ ರಾಜ್ಯ ಮಟ್ಟದ ಸಂಘಟನೆಯನ್ನಾಗಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮಾತನಾಡಿ, ಗೌತಮ ಬುದ್ಧ, ಬಸವಣ್ಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್. ಪ್ರೊ. ಬಿ. ಕೃಷ್ಣಪ್ಪನವರ ಸೇರಿದಂತೆ ಮಹಾನ್ ಆದರ್ಶ ವ್ಯಕ್ತಿಗಳಿಂದಾಗಿ ಎಲ್ಲರೂ ಇಂದು ನೆಮ್ಮದಿಯಾಗಿ ಬದುಕಲು ಸಾಧ್ಯ ಎಂದರು.
ಈ ಹಿಂದೆ ಅವರ ಪ್ರತಿಮೆಯನ್ನು ನಗರದಲ್ಲಿ ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಲಾಗಿತ್ತು. ಆದರೆ ಆ ಕಾರ್ಯ ಕೈಗೂಡಲಿಲ್ಲ. ಮುಂದಿನ ದಿನಗಳಲ್ಲಿ ಅವರ ಪ್ರತಿಮೆ ನಿರ್ಮಾಣ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಕುವೆಂಪು ವಿವಿ ಕುಲಪತಿ ಎಸ್.ಎಸ್.ಪಾಟೀಲ ಕಾರ್ಯಕ್ರಮ ಉದ್ಘಾಟಿಸಿದರು. ನೌಕರರ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಸಿ.ಜಯಪ್ಪ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ. ಶಶಿರೇಖಾ, ಡಾ. ಸ್ವಾಮಿ, ಮುನೀರ್ ಅಹಮ್ಮದ್, ರಂಗಸ್ವಾಮಿ, ರಂಗಪ್ಪ ಇವರಿಗೆ ಪ್ರೊ. ಬಿ. ಕೃಷ್ಣಪ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ಕುಮಾರ ಕೌಶಿಕ್ ಪುಳೇರ, ಸೇವೆಯಿಂದ ನಿವೃತ್ತಿ ಹೊಂದಿದ ನೀಲಪ್ಪ ಭೂತಣ್ಣನವರ ಹಾಗೂ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಒಕ್ಕೂಟದ ತಾಲೂಕು ಶಾಖೆ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಸೋಮಶೇಖರ್, ಕುವೆಂಪು ವಿವಿ ಹಣಕಾಸು ಅಧಿಕಾರಿ ಹಿರೇಮಣಿ ನಾಯ್ಕ, ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಎನ್. ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಆನಂದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಒಕ್ಕೂಟದ ಮುಖಂಡರಾದ ಎಂ. ಈಶ್ವರಪ್ಪ, ರಂಗನಾಥ್, ಕೆ.ಬಿ ಜುಂಜ್ಯಾನಾಯ್ಕ, ಲೋಕೇಶ್ ಮಾಳೇನಹಳ್ಳಿ, ಬಸವಕುಮಾರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.