ಈ ಊರಿನಲ್ಲಿ ಪ್ಲಾಸ್ಟಿಕ್‌ ಹೊದಿಕೆಯೇ ತಂಗುದಾಣ!

Team Udayavani, Jul 10, 2019, 3:00 AM IST

ee-urinall

ಹುಣಸೂರು: ಪ್ಲಾಸ್ಟಿಕ್‌ ಕವರ್‌ ಅನ್ನೇ ಮೇಲ್ಛಾವಣಿ ರೀತಿ ಮಾಡಿಕೊಂಡು ಬಿಸಿಲು, ಗಾಳಿ, ಮಳೆಯಿಂದ ರಕ್ಷಿಸಿಕೊಳ್ಳಲಾಗುತ್ತಿದೆ. ಇದನ್ನು ಯಾವುದೋ ಕುಗ್ರಾಮದ ನಿರಾಶ್ರಿತರ ಗುಡಿಸಲು ಅಥವಾ ಶೆಡ್‌ ಇರಬಹುದು ಎಂದು ಊಹಿಸಬಹುದು. ಆದರೆ, ಇದು ಶೆಡ್‌ ಅಲ್ಲ, ಗುಡಿಸಲು ಅಲ್ಲವೇ ಅಲ್ಲ, ರಾಷ್ಟ್ರೀಯ ಹೆದ್ದಾರಿ ಸನಿಹ 5 ಸಾವಿರ ಜನಸಂಖ್ಯೆಯಿರುವ, ಗ್ರಾಪಂ ಕೇಂದ್ರ ಸ್ಥಾನವಿರುವ ಗ್ರಾಮದಲ್ಲಿ ಜನರೇ ನಿರ್ಮಿಸಿಕೊಂಡಿರುವ ತಂಗುದಾಣ.!

ಹೌದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತ ಚಿಲ್ಕುಂದ ಗ್ರಾಮಸ್ಥರು ಪ್ಲಾಸ್ಟಿಕ್‌ ಹೊದಿಕೆಯಿಂದ ತಾತ್ಕಾಲಿಕವಾಗಿ ಬಸ್‌ ತಂಗುದಾಣ ನಿರ್ಮಿಸಿಕೊಂಡಿದ್ದಾರೆ.

ತೆರವು: ಕಳೆದ ಎರಡು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಈ ಹಿಂದೆ ನಿರ್ಮಿಸಿದ್ದ ತಂಗುದಾಣವನ್ನು ತೆರವುಗೊಳಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೆ ತಂಗುದಾನ ನಿರ್ಮಿಸಲು ಯಾರೊಬ್ಬರೂ ಕಾಳಜಿ ವಹಿಸಲಿಲ್ಲ. ಹೀಗಾಗಿ ಪ್ರಯಾಣಿಕರು, ಶಾಲಾ ವಿದ್ಯಾರ್ಥಿಗಳು ಬಿಸಿಲು, ಮಳೆ, ಗಾಳಿಯಲ್ಲೇ ಬಸವಳಿದು ಬಸ್‌ಗಾಗಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕ್ಯಾರೆ ಎನ್ನದ ಆಡಳಿತ: ಹಲವಾರು ಬಾರಿ ಶಾಸಕರು ಸೇರಿದಂತೆ ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳಿಗೂ ಮನವಿ ಮಾಡಿದ್ದರೂ ತಂಗುದಾಣ ನಿರ್ಮಾಣಕ್ಕೆ ಮುಂದಾಗಿಲ್ಲ. ಈ ಅವ್ಯವಸ್ಥೆಯಿಂದ ದಿಕ್ಕು ತೋಚದಂತಾದ ಗ್ರಾಮಸ್ಥರು ಸ್ವಂತ ಖರ್ಚಿನಿಂದ ಪ್ಲಾಸ್ಟಿಕ್‌ ಹೊದಿಕೆಯ ತಂಗುದಾಣವನ್ನು ನಿರ್ಮಿಸಿಕೊಂಡಿದ್ದಾರೆ.

ಗ್ರಾಪಂ ಕೇಂದ್ರ ಸ್ಥಾನ: 5 ಸಾವಿರ ಜನಸಂಖ್ಯೆಯುಳ್ಳ ಚಿಲ್ಕುಂದ ಗ್ರಾಮದ ಮೂಲಕವೇ ಹಬ್ಬನಕುಪ್ಪೆ, ಮಾಕೋಡು, ಬೋರೆಹೊಸಹಳ್ಳಿ, ಶೆಟ್ಟಳ್ಳಿ, ಹೊಸಕೊಪ್ಪಲು, ಅತ್ತಿಗುಪ್ಪೆ, ನಾಗಮಂಗಲ, ಮುತ್ತುರಾಯನಹೊಸಹಳ್ಳಿ, ಕಣಗಾಲು, ಜವನಿಕುಪ್ಪೆ ಸೇರಿದಂತೆ ವಿವಿಧ ಹಳ್ಳಿಗಳ ಗ್ರಾಮಸ್ಥರು ಹಾಗೂ ನೂರಾರು ವಿದ್ಯಾರ್ಥಿಗಳು ಹುಣಸೂರು, ಪಿರಿಯಾಪಟ್ಟಣ, ಮೈಸೂರು, ಕೊಡಗು, ಮಂಗಳೂರು, ಕೇರಳ ಕಡೆಗೆ ತೆರಳಬೇಕಿದೆ. ಈ ಎಲ್ಲಾ ಊರುಗಳ ಜನರು ಕೇಂದ್ರ ಸ್ಥಾನ ಚಿಲ್ಕುಂದಕ್ಕೆ ಬರಲೇಬೇಕಿದೆ. ಇಲ್ಲಿ ತಂಗುದಾಣದ ಅತ್ಯವಶ್ಯವಿದ್ದರೂ ಕ್ರಮ ಕೈಗೊಂಡಿಲ್ಲ.

ಗ್ರಾಮಸ್ಥರ ಆಕ್ರೋಶ: ಉಳ್ಳವರು ಕಾರಿನಲ್ಲಿ ಓಡಾಡುವುದರಿಂದ ಅವರಿಗೆ ತಂಗುದಾಣದ ಕೊರತೆಯ ಬಿಸಿ ತಟ್ಟುವುದಿಲ್ಲ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮಗಳ ಸಮಸ್ಯೆ ಅರಿವಿಲ್ಲದಿರುವುದರಿಂದ ಇಂತಹ ಪರಿಸ್ಥಿತಿ ಎದುರಾಗಿದೆ. ಆದರೆ, ಜನಸಮಾನ್ಯರಿಗೆ ಇದರ ಅವಶ್ಯಕತೆ ತುರ್ತಾಗಿ ಇದೆ. ಮಳೆ, ಬಿಸಿಲು, ಗಾಳಿಗೆ ಸಿಲುಕಿ ಬಸ್‌ಗಾಗಿ ಕಾಯುವಂತಾಗಿದೆ. ಹೀಗಾಗಿ ನಾವೇ ಪ್ಲಾಸ್ಟಿಕ್‌ ಹೊದಿಕೆ ಮೂಲಕ ತಾತ್ಕಾಲಿಕ ತಂಗುದಾಣ ನಿರ್ಮಿಸಿಕೊಂಡಿದ್ದೇವೆ ಎಂದು ಚಿಲ್ಕುಂದ ಗ್ರಾಮಸ್ಥರು ಆಕ್ರೋಶಭರಿತರಾಗಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಚಿಲ್ಕುಂದ ಗ್ರಾಮ ಹೆದ್ದಾರಿ ಸನಿಹವಿದ್ದರೂ ಪ್ರಯಾಣಿಕರ ಅನುಕೂಲಕ್ಕಾಗಿ ಕನಿಷ್ಠ ಬಸ್‌ ತಂಗುದಾಣವಿಲ್ಲ. ನಮ್ಮೂರಿನವರೇ ಕಳೆದ 15 ವರ್ಷಗಳಿಂದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದರೂ ಯಾವುದೇ ಪ್ರಯೋಜವಿಲ್ಲ. ಗ್ರಾಪಂನವರು ಸಹ ತಲೆಕೆಡಿಸಿಕೊಂಡಿಲ್ಲ, ಹಿಂದಿನ ಹಾಗೂ ಈಗಿನ ಶಾಸಕರಿಗೆ ತಿಳಿಸಿದ್ದೆವು. ಆದರೂ ಕ್ರಮ ಕೈಗೊಂಡಿಲ್ಲ. ಹಾಲಿ ಶಾಸಕರು ರಾಜಿನಾಮೆ ನೀಡಿ ರೆಸಾರ್ಟ್‌ನಲ್ಲಿದ್ದಾರೆ.
-ರಮೇಶ, ಚಿಲ್ಕುಂದ ನಿವಾಸಿ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಷ್ಟೆ ನಮ್ಮ ಜವಾಬ್ದಾರಿಯಾಗಿದೆ. ರಸ್ತೆ ಬದಿ ತಂಗುದಾಣ ನಿರ್ಮಿಸುವ ಜವಾಬ್ದಾರಿ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಲಾಗುವುದು.
-ಯೋಗಾನಂದ್‌, ಹೆದ್ದಾರಿ ಅಭಿವೃದ್ಧಿ ವಿಭಾಗದ ಸಹಾಯಕ ಎಂಜಿನಿಯರ್‌

* ಸಂಪತ್‌ಕುಮಾರ್‌ ಹುಣಸೂರು

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.