ಪುತ್ತೂರು ತಾಲೂಕಿನ ಸರಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳ

1ನೇ ತರಗತಿಗೆ ಕಳೆದ ವರ್ಷ 1,883; ಈ ವರ್ಷ 1,903 ದಾಖಲು

Team Udayavani, Jul 10, 2019, 5:00 AM IST

s-16

ಪುತ್ತೂರು: ಪ್ರಸ್ತುತ ವರ್ಷಗಳಲ್ಲಿ ಸರಕಾರಿ ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗುತ್ತಿದೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪುತ್ತೂರಿನ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಗೆ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಜೂನ್‌ ತಿಂಗಳ ಅಂತ್ಯದವರೆಗೆ ಸರಕಾರಿ ಶಾಲೆಯ 1ನೇ ತರಗತಿಗೆ 1,903 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ತಾಲೂಕಿನ ಖಾಸಗಿ, ಅನುದಾನಿತ ಶಾಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಒಂದನೇ ತರಗತಿಗೆ ದಾಖಲಾತಿ ಕಡಿಮೆಯಾದರೂ ಸರಕಾರಿ ಶಾಲೆಗಳಲ್ಲಿ ಮಾತ್ರ ದಾಖಲಾತಿ ಏರಿಕೆಯಾಗಿದೆ. ಕಳೆದ ವರ್ಷ ತಾಲೂಕಿನ 180 ಸರಕಾರಿ ಶಾಲೆಗಳಿಗೆ 1,883 ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ 1,903 ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ತಾಲೂಕಿನ ಇತರೆಲ್ಲ ಶಾಲೆಗಳ ಪೈಕಿ ಒಂದನೇ ತರಗತಿಗೆ ಕಳೆದ ವರ್ಷ 4,837 ವಿದ್ಯಾರ್ಥಿಗಳು ದಾಖಲಾಗಿದ್ದು, ಈ ಬಾರಿ 4,507 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದು 300 ಕಡಿಮೆ. ಆದರೆ ಸರಕಾರಿ ಶಾಲೆಗಳ ಒಂದನೇ ತರಗತಿಗೆ ಈ ತನಕ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳು ದಾಖಲಾಗಿದ್ದು, ಇದು ಜೂನ್‌ ತಿಂಗಳ ಅಂತ್ಯದ ಅಂಕಿ-ಅಂಶವಾಗಿದ್ದು ಜುಲೈ ತಿಂಗಳ ವಿವರ ಇನ್ನಷ್ಟೇ ಬರಬೇಕಿದೆ.

ಹಾರಾಡಿಯಲ್ಲಿ ಹೆಚ್ಚು ದಾಖಲಾತಿ
ತಾಲೂಕಿನ ಒಟ್ಟು 180 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ ಕಳೆದ ಬಾರಿ ಚೆರು, ಕಲ್ಯಾರಬೈಲು, ಶಿರಾಡಿ, ಮಚ್ಚಿಮಲೆ ಹೀಗೆ 4 ಶಾಲೆಗಳಲ್ಲಿ ಒಂದನೇ ತರಗತಿಗೆ ಯಾವುದೇ ವಿದ್ಯಾರ್ಥಿಗಳು ದಾಖಲಾಗಿರಲಿಲ್ಲ. ಆದರೆ ಈ ಬಾರಿ ನನ್ಯ ಶಾಲೆಗೆ ಮಾತ್ರ ಶೂನ್ಯ ದಾಖಲಾತಿಯಾಗಿದೆ. ಕಳೆದ ಬಾರಿ ಹಾರಾಡಿ ಶಾಲೆಗೆ ಅತಿ ಹೆಚ್ಚು 57 ವಿದ್ಯಾರ್ಥಿಗಳು ದಾಖಲಾಗಿದ್ದು, ಒಟ್ಟು ಹಿರೇಬಂಡಾಡಿ,

ಉಪ್ಪಿನಂಗಡಿ ಹಾಗೂ ಕಾವು ಶಾಲೆಗೆ ತಲಾ 41 ವಿದ್ಯಾರ್ಥಿಗಳು ದಾಖಲಾಗಿದ್ದರು. ಈ ಬಾರಿ ಹಾರಾಡಿ ಶಾಲೆಗೆ ಅತಿ ಹೆಚ್ಚು ಅಂದರೆ 81 ವಿದ್ಯಾರ್ಥಿಗಳು ದಾಖಲಾಗಿದ್ದು, ಕುಂಬ್ರ, ಉಪ್ಪಿನಂಗಡಿ, ನೆಲ್ಯಾಡಿ, ಕೆಯ್ಯೂರು, ಹಿರೇಬಂಡಾಡಿ, ಆಲಂಕಾರು ಶಾಲೆಗಳಲ್ಲಿ 50ಕ್ಕಿಂತ ಅಧಿಕ ವಿದ್ಯಾರ್ಥಿಗಳು ಸೇರಿಕೊಂಡಿದ್ದಾರೆ.

ವಯಸ್ಸಿನ ಮಿತಿ ಕಾರಣ?
2017-18ನೇ ಸಾಲಿನಲ್ಲಿ ಒಂದನೇ ತರಗತಿಗೆ ವಿದ್ಯಾರ್ಥಿಗಳು ದಾಖಲಾಗಬೇಕಾದರೆ ವಿದ್ಯಾರ್ಥಿಗಳ ವಯಸ್ಸು 5 ವರ್ಷ 6 ತಿಂಗಳಾಗಿರಬೇಕು ಎಂದು ಸರಕಾರ ಆದೇಶಿಸಿದ್ದು, ಅದು ಸರಕಾರಿ ಶಾಲೆಗಳಿಗೆ ಹೊಡೆತ ನೀಡಿತ್ತು. ಆ ರೀತಿ ಬಾಕಿ ಉಳಿದ ವಿದ್ಯಾರ್ಥಿಗಳು ಕಳೆದ ವರ್ಷ ಹಾಗೂ ಈ ವರ್ಷ ವಯಸ್ಸಿನ ಮಿತಿ ದಾಟಿ ನಿಯಮದ ಪ್ರಕಾರ ಸರಕಾರಿ ಶಾಲೆಗಳಿಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿದೆ.

ಆಂಗ್ಲ ಶಿಕ್ಷಣದಿಂದ ಏರಿಕೆಸರಕಾರವು ಈ ಬಾರಿ ಆಯ್ದ ಸರಕಾರಿ ಶಾಲೆಗಳ ಒಂದನೇ ತರಗತಿಯಲ್ಲಿ ಆಂಗ್ಲ ಶಿಕ್ಷಣ ಆರಂಭಿಸಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. ಜತೆಗೆ ಕಳೆದೆರಡು ವರ್ಷಗಳಲ್ಲಿ ಒಂದನೇ ತರಗತಿಗೆ ವಯಸ್ಸಿನ ಮಿತಿಯ ಕಾರಣದಿಂದಲೂ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ. –
ವಿಷ್ಣುಪ್ರಸಾದ್‌ ಸಿ. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು

ಸರಕಾರಿ ಶಾಲೆ: 
1ನೇ ತರಗತಿ

2018-19ರ ದಾಖಲಾತಿ-1,883 2019-20ರ ದಾಖಲಾತಿ-1,903 ಈ ಬಾರಿಯ ಹೆಚ್ಚುವರಿ ದಾಖಲಾತಿ-20
2018-19ರಲ್ಲಿ ತಾಲೂಕಿನ ದಾಖಲಾತಿ

ಒಟ್ಟು ಶಾಲೆಗಳು-314 1-10ನೇ ತರಗತಿಯ ವಿದ್ಯಾರ್ಥಿಗಳು-45,588 1ನೇ ತರಗತಿ ದಾಖಲಾತಿ-4,837
2019-20ರಲ್ಲಿ ತಾಲೂಕಿನ ದಾಖಲಾತಿ

ಒಟ್ಟು ಶಾಲೆಗಳು-315 1-10ನೇ ತರಗತಿಯ ವಿದ್ಯಾರ್ಥಿಗಳು-47,072 1ನೇ ತರಗತಿ ದಾಖಲಾತಿ-4,507

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

2(7

Udupi; ಎಂಜಿಎಂ ಅಮೃತೋತ್ಸವ: ಕಣ್ಮನ ಸೆಳೆದ ವಸ್ತು ಪ್ರದರ್ಶನ

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.